ಮೇಕೆದಾಟು ಯೋಜನೆ ಜಾರಿಗೆ ತಮಿಳುನಾಡು ಅನುಮತಿ ಬೇಕಿಲ್ಲ-ಈ ಬಗ್ಗೆ ಚರ್ಚಿಸಲು ಸರಕಾರ ಸರ್ವಪಕ್ಷ ಸಭೆ ಕರೆಯಬೇಕು-ಮಾಜಿ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಮೇಕೆದಾಟು ಯೋಜನೆ ಜಾರಿಗೆ ತಮಿಳುನಾಡು ಅನುಮತಿ ಬೇಕಿಲ್ಲ ಈ ಕುರಿತು ಚರ್ಚಿಸಲು ಸರಕಾರ ಸರ್ವಪಕ್ಷ ಸಭೆ ಕರೆಯಬೇಕು ಮಾಜಿ ಸಚಿವ ಎಂ. ಬಿ. ಪಾಟೀಲ ಆಗ್ರಹ

ವಿಜಯಪುರ: ಮೇಕೆದಾಟು ಯೋಜನೆ ರಾಜ್ಯದ ಹಕ್ಕು. ಇದಕ್ಕೆ ತಮಿಳುನಾಡು ಅನುಮತಿ ಬೇಕಿಲ್ಲ ಎಂದು ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಮೇಕೆದಾಟು ವಿಚಾರ ಕುರಿತು ಚರ್ಚಿಸಲು ರಾಜ್ಯ ಸರಕಾರ ಸರ್ವ ಪಕ್ಷಗಳ ಮತ್ತು ನೀರಾವರಿ‌ ಇಲಾಖೆ ಮಾಜಿ ಸಚಿವರ ಸಭೆ ಕರೆಯಬೇಕು ಎಂದು ಹೇಳಿದರು.

ಸಾಮಾನ್ಯ ವರ್ಷದಲ್ಲಿ ಕರ್ನಾಟಕ ತಮಿಳುನಾಡಿಗೆ ಟಿಎಂಸಿ ನೀರನ್ನು ಎಷ್ಡು ನೀರು ಬಿಡಬೇಕು ಎಂದು ಕಾವೇರಿ ತೀರ್ಪಿನಲ್ಲಿ ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಸಂಕಷ್ಟದ ವರ್ಷದಲ್ಲಿ ಸಂಗ್ರಹವಾದ ನೀರನ್ನು ನಾವು ಬಳಬಹುದು. ಮೇಕೆದಾಟು ಯೋಜನೆ ಇದು ನಮ್ಮ ರಾಜ್ಯದ ಹದ್ದಿನಲ್ಲಿದೆ. ವಿದ್ಯುಚ್ಚಕ್ತಿ ಉತ್ಪಾದನೆ ಬಳಿಕ ತಮಿಳುನಾಡಿಗೆ ಹರಿದು ಹೋಗುತ್ತದೆ. ಪ್ರವಾಹ ಮತ್ತು ಸಂಕಷ್ಟದ ವರ್ಷಗಳಲ್ಲಿ ನೀರು ಬಳಕೆಗೆ ಇದು ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಿಗೆ ಅನುಕೂಲವಾಗಲಿದೆ ಎಂದು ಎಂ. ಬಿ. ಪಾಟೀಲ ತಿಳಿಸಿದರು.

ರಾಜ್ಯ ಸರಕಾರ ತಮಿಳುನಾಡಿನ ಬಗ್ಗೆ ತಲೆಕೆಡಿಸಿಕೊಳ್ಳಬೇಕಿಲ್ಲ. ರಾಜ್ಯ ಸರಕಾರ ಕಾನೂಮಾತ್ಮಕ, ತಾಂತ್ರಿಕವಾಗಿ ಯೋಜನೆ ಮುಂದುವರೆಸಬೇಕು ಎಂದು ತಿಳಿಸಿದ ಅವರು, ಕಾಂಗ್ರೆಸ್ ಕೂಡ ಈ ನಿಟ್ಟಿನಲ್ಲಿ ಡಿಎಂಕೆ ಗೆ ಮನವರಿಕೆ ಮಾಡಿಕೊಡಲಿದೆ. ತಮಿಳುನಾಡಿನ ಕಾಂಗ್ರೆಸ್ ಉಸ್ತುವಾರಿಯಾಗಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ ಗುಂಡೂರಾವ ತಮಿಳುನಾಡಿನ ಡಿಎಂಕೆ ಮುಖಂಡರ ಜೊತೆ ಮಾತನಾಡಲು ತಾವು ಮನವಿ ಮಾಡುವುದಾಗಿ ಎಂ. ಬಿ. ಪಾಟೀಲ ತಿಳಿಸಿದರು.

ತಮಿಳುನಾಡು ಯೋಜನೆ ತಡೆಗೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿದರೆ ಅದು ರಾಜಕೀಯವಾಗುತ್ತದೆ. ನಾವೂ ಕೂಡ ಕೇಂದ್ರ ಸರಕಾರದ ಒತ್ತಡ ಹಾಕಬೇಕು. ಈ ಹಿನ್ನೆಲೆಯಲ್ಲಿ ಸರಕಾರ ಕೂಡಲೇ ಮಾಜಿ ಸಿಎಂಗಳು, ಜಲಸಂಪನ್ಮೂಲ ಖಾತೆ ಮಾಜಿ ಸಚಿವರು ಸೇರಿದಂತೆ ಸರ್ವ ಪಕ್ಷಗಳ ಸಭೆ ಕರೆಯಬೇಕು ಎಂದು ಎಂ. ಬಿ. ಪಾಟೀಲ‌ ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

Leave a Reply

ಹೊಸ ಪೋಸ್ಟ್‌