ಎಸ್ ಎಸ್ ಎಲ್ ಸಿ ಪರೀಕ್ಷೆ- ಭಯವಿಲ್ಲದೆ ಪರೀಕ್ಷೆ ಎದುರಿಸಲು ಸಚಿವೆ ಶಶಿಕಲಾ ಜೊಲ್ಲೆ ಸಂದೇಶ
ವಿಜಯಪುರ: ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪರೀಕ್ಷಾ ಸಿಬ್ಬಂದಿಗೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಶುಭ ಕೋರಿದ್ದಾರೆ. ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಭಯ ಬೇಡ. ಪರೀಕ್ಷೆಯ ಎಲ್ಲಾ ಕೇಂದ್ರಗಳಲ್ಲಿ ಸರಕಾರದಿಂದ ಸ್ಯಾನಿಟೈಸರ್, ಮಾಸ್ಕ್, ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ ಹಾಗೂ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪರೀಕ್ಷೆಯನ್ನು ಹಬ್ಬದ ರೀತಿ ಆಚರಣೆ […]
ಪ್ರಭಾವಿ ನಾಯಕ ಎಂದು ನಾನೇ ಸರ್ಟಿಫಿಕೇಟ್ ತೆಗೆದುಕೊಳ್ಳುವ ಅವಶ್ಯಕತೆಯಿಲ್ಲ- ಎಂ. ಬಿ. ಪಾಟೀಲ
ಬೆಳಗಾವಿ: ಕಾಂಗ್ರೆಸ್ಸಿನಲ್ಲಿ ನಾನೇ ಪ್ರಭಾವಿ ನಾಯಕ ಎಂದು ಸರ್ಟಿಫಿಕೇಟ್ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಇದನ್ನು ಜನರು ತೀರ್ಮಾನ ಮಾಡಬೇಕು ಎಂದು ಮಾಜಿ ಸಚಿವ ಮತ್ತು ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನೇ ಸರ್ಟಿಫಿಕೇಟ್ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಜನ ಇದನ್ನು ತೀರ್ಮಾನ ಮಾಡಬೇಕು. ನಾನೇ ನಾಯಕ ಎಂದು ಹೇಳುವುದು ಸರಿಯಲ್ಲ ಎಂದು ಹೇಳಿದರು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ […]
ಬೆಳಗಾವಿ ಜಿಲ್ಲೆಯ ನಾಗನೂರ ರುದ್ರಾಕ್ಷಿಮಠಕ್ಕೆ ಮಾಜಿ ಸಚಿವ ಎಂ. ಬಿ. ಪಾಟೀಲ ಬೇಟಿ, ಮಹತ್ವದ ಚರ್ಚೆ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಸದಾಶಿವ ನಗರದ ನಾಗನೂರ ರುದ್ರಾಕ್ಷಿಮಠಕ್ಕೆ ಮಾಜಿ ಸಚಿವ ಎಂ. ಬಿ. ಪಾಟೀಲ ಭೇಟಿ ನೀಡಿ ಲಿಂಗೈಕ್ಯ ಶಿವಬಸವ ಸ್ವಾಮಿಗಳ, ಪ್ರಭು ಸ್ವಾಮಿಗಳ ಗದ್ದುಗೆಯ ದರ್ಶನ ಪಡೆದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಲಿಂಗೈಕ್ಯ ಫ. ಗು. ಹಳಕಟ್ಟಿಯವರು ತಾವೇ ಪ್ರಕಟಿಸಿದ ಶಿವಾನುಭವ ಪತ್ರಿಕೆಯನ್ನು ಶೇಖರಿಸುವ ಕಾರ್ಯ ನಾಗನೂರ ರುದ್ರಾಕ್ಷಿಮಠ ಮಾಡಿದೆ. ಅದರ ಮರು ಮುದ್ರಣಕ್ಕೆ ತಾವು ಈಗಾಗಲೇ ಮುಖ್ಯಮಂತ್ರಿಗಳನ್ನು ಬೇಟಿ ಮಾಡಿ ಮಾತುಕತೆ ನಡೆಸಿರುವುದಾಗಿ ತಿಳಿಸಿದರು. ಬಸವಣ್ಣನವರ ಮತ್ತು ಬಸವಾದಿ ಶರಣರ […]
ವಿಜಯಪುರ ಜಿಲ್ಲೆಯ ಮಹಾರಾಷ್ಟ್ರ ಗಡಿಯಲ್ಲಿ ಪ್ರವೇಶ- ಪ್ರಯಾಣಿಕರ ತಪಾಸಣೆ ಚುರುಕು
ವಿಜಯಪುರ: ಕೊರೊನಾ ಮೂರನೇ ಅಲೆ ಎಚ್ಚರಿಕೆ ಮತ್ತು ಸರಕಾರದ ಮಾರ್ಗಸೂಚಿ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಮಹಾರಾಷ್ಟ್ರದ ಗಡಿ ರಸ್ತೆಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಿಂದ ಶಿರಾಡೋಣ ರಾಜ್ಯ ಹೆದ್ದಾರಿ ಮತ್ತು ಸೋಲಾಪುರ- ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಧೂಳಖೇಡ ಬಳಿ ಜಿಲ್ಲಾಡಳಿತ ಚೆಕ್ ಪೋಸ್ಟ್ ಆರಂಭಿಸಿದೆ. ಈ ರಸ್ತೆಗಳ ಮೂಲಕ ಆಗಮಿಸುವ ವಾಹನ ಸವಾರರ ಕೊರೊನಾ ವ್ಯಾಕ್ಸಿನೇಷನ್ ವಿಚಾರಣೆ ನಡೆಸಿ ದಾಖಲಾತಿ ಪರಿಶೀಲನೆ ನಡೆಸಿ ರಾಜ್ಯದೊಳಗೆ ಪ್ರವೇಶ ನೀಡಲಾಗುತ್ತಿದೆ. ವಿಜಯುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಆದೇಶ […]
ಎಸ್ ಎಸ್ ಎಲ್ ಸಿ ನಕಲು ಮುಕ್ತ ಪರೀಕ್ಷೆ ನಡೆಸಿ- ಕೊರೊನಾ ಮಾರ್ಗಸೂಚಿಯಂತೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ
ವಿಜಯಪುರ: ಎಸ್. ಎಸ್. ಎಲ್. ಸಿ. ಮುಖ್ಯ ಪರೀಕ್ಷೆಗಳ ಸಂದರ್ಭದಲ್ಲಿ ನಕಲು ಮುಕ್ತ ಪರೀಕ್ಷೆ ನಡೆಸಿ ಹಾಗೂ ಕೊರೊನಾ ಮಾರ್ಗಸೂಚಿಗಳ ಅನ್ವಯ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ಮಾತನಾಡಿದ ಅವರು, ಜು. 19 ರಿಂದ 22 ರವರೆಗೆ ಜಿಲ್ಲೆಯ ಒಟ್ಟು 188 ಪರೀಕ್ಷೆ ಕೇಂದ್ರಗಳಲ್ಲಿ ಎಸ್. ಎಸ್. ಎಲ್. ಸಿ. ಪರೀಕ್ಷೆ ನಡೆಯಲಿದೆ. […]
ನಿರಾಣಿ ಫೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೃಸರ್ ವಿತರಣೆ
ವಿಜಯಪುರ: ಶೈಕ್ಷಣಿಕ ಬದುಕಿನ ಮೊದಲ ಪ್ರಮುಖ ಯುದ್ಧ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಗೆಲ್ಲಲು ತಾವೆಲ್ಲರೂ ಈಗಾಗಲೇ ಸನ್ನದ್ಧರಾಗಿದ್ದಿರಿ. ಜು. 19 ರಿಂದ 22 ರವರೆಗೆ ತಮ್ಮ ಪರೀಕ್ಷೆ ಅತ್ಯಂತ ಶಿಸ್ತುಬದ್ಧತೆ ಮತ್ತು ಕೊರೊನಾ ನಿಯಮಗಳನ್ನು ಅನುಸರಿಸಿ ಕಾಳಜಿ ಪೂರ್ವಕವಾಗಿ ಬರೆಯಬೇಕು ಎಂದು ವಿಧಾನ ಪರಿಷತ ಬಿಜೆಇ ಸದಸ್ಯ ಹನುಮಂತ ನಿರಾಣಿ ಅವರು ಹೇಳಿದ್ದಾರೆ ವಿಜಯಪುರ ನಗರದ ಅಲ್ ಅಮಿನ್ ಆಸ್ಪತ್ರೆ ಬಳಿಬಿರುವ ಇರುವ, ಶಿಕ್ಷಕರ ತರಬೇತಿ ಸಂಸ್ಥೆ (ಡಯಟ್)ಯಲ್ಲಿ ಎಸ್ ಎಸ್ ಎಲ್ ವಿದ್ಯಾರ್ಥಿಗಳಿಗೆ […]
ಟೋಕಿಯೋ ಓಲಂಪಿಕ್ಸ್ ಗೆ ಭಾರತೀಯ ತಂಡಕ್ಕೆ ಶುಭ ಕೋರಿದ ಸಂಸದ, ಡಿಸಿ, ಜಿ. ಪಂ. ಸಿಇಓ
ವಿಜಯಪುರ: ಜಪಾನಿನ ಟೋಕಿಯೋದಲ್ಲಿ 2020ರ ಓಲಂಪಿಕ್ಸ್ ನಡೆಯುತ್ತಿದೆ. ಈ ಓಲಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳೂ ಕೂಡ ಭಾಗವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತೀಯ ಕ್ರೀಡಾಪಟುಗಳಿಗೆ ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮತ್ತು ಜಿ. ಪಂ. ಸಿಇಓ ಗೋವಿಂದ ರೆಡ್ಡಿ ಶುಭಾಷಯ ಕೋರಿದ್ದಾರೆ. ವಿಜಯಪುರದಲ್ಲಿ ನಿಲ್ಲಿಸಲಾಗಿರುವ ನಾನು 2020-2021ನೇ ಸಾಲಿನ ಟೋಕಿಯೋ ಓಲಂಪಿಕ್ಸ್ ನಲ್ಲಿ ಭಾಗವಹಿಸುವ ಭಾರತ ಕ್ರೀಡಾ ತಂಡಕ್ಕೆ ಶುಭ ಕೋರುತ್ತೇನೆ. I#Cheef4India TOKYO 2020 ಫ್ಲೇಕ್ಸ್ ಫ್ರೇಮ್ ನಲ್ಲಿ ನಿಂತು ಮೂರು […]