ಎಸ್ ಎಸ್ ಎಲ್ ಸಿ ಪರೀಕ್ಷೆ- ಭಯವಿಲ್ಲದೆ ಪರೀಕ್ಷೆ ಎದುರಿಸಲು ಸಚಿವೆ ಶಶಿಕಲಾ ಜೊಲ್ಲೆ ಸಂದೇಶ

ವಿಜಯಪುರ: ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪರೀಕ್ಷಾ ಸಿಬ್ಬಂದಿಗೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಶುಭ ಕೋರಿದ್ದಾರೆ.

ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಭಯ ಬೇಡ. ಪರೀಕ್ಷೆಯ ಎಲ್ಲಾ ಕೇಂದ್ರಗಳಲ್ಲಿ ಸರಕಾರದಿಂದ ಸ್ಯಾನಿಟೈಸರ್, ಮಾಸ್ಕ್, ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ ಹಾಗೂ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಂದೇಶ

ಪ್ರಧಾನಿ ನರೇಂದ್ರ ಮೋದಿ ಅವರು ಪರೀಕ್ಷೆಯನ್ನು ಹಬ್ಬದ ರೀತಿ ಆಚರಣೆ ಮಾಡಿ ಎಂದು ಹೇಳಿರುವುದರಿಂದ ಪರೀಕ್ಷೆಯನ್ನು ಹೆದರದೆ ಎದುರಿಸಬೇಕು. ಕೊರೊನಾ ಬಗ್ಗೆ ಹೆದರದೇ, ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಪರೀಕ್ಷೆ ಬರೆಯಿರಿ, ಶೈಕ್ಷಣಿಕವಾಗಿ ಎತ್ತರಕ್ಕೆ ಬೆಳೆಯಿರಿ. ನಿಮಗೆಲ್ಲರಿಗೂ ಶುಭವಾಗಲಿ. ಇದಕ್ಕೆ ಸಹಕರಿಸಲಿರುವ ಎಲ್ಲಾ ಶಿಕ್ಷಕ ವೃಂದ ಹಾಗೂ ಜಿಲ್ಲಾಡಳಿತ ವರ್ಗಕ್ಕೂ ಅಭಿನಂದನೆಗಳು ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌