ವಿಜಯಪುರ ವಿಮಾನ ನಿಲ್ದಾಣ- ಕಾರ್ಯಾಚರಣೆಗೆ ಮುಂದಾದ ಟರ್ಬೋ ಏರ್‌ಲೈನ್ ಕಂಪನಿ – ಡಿಸಿಎಂ ಗೋವಿಂದ ಎಂ. ಕಾರಜೋಳ

ಬೆಂಗಳೂರು: ವಿಜಯಪುರ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲು ಮೆ. ಟರ್ಬೋ ಏರಲೈನ್ ಕಂಪನಿ ಮುಂದೆ ಬಂದಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ. ವಿಜಯಪುರ ವಿಮಾನ ನಿಲ್ದಾಣದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿದಿನ ಎಟಿಆರ್ 72 ವಿಮಾನವನ್ನು ಹಾರಾಟ ನಡೆಸಲು ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳು ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಸಕ್ತಿ ಹೊಂದಿವೆ. ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಯು ತ್ವರಿತಗತಿಯಿಂದ ನಡೆಯುತ್ತಿದ್ದು, ಈ ಕಾಮಗಾರಿಯನ್ನು 2022ರ ಮಾರ್ಚ್ ಗೆ ಪೂರ್ಣಗೊಳಿಸುವ ಗುರಿಯನ್ನು ಹೊಂದಿದಾಗಿದೆ. […]

ಬಸವನ ಬಾಗೇವಾಡಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಶೋಕ‌ ಹಾರಿವಾಳ ಅವಿರೋಧ ಆಯ್ಕೆ

ವಿಜಯಪುರ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಶೋಕ ಹಾರಿವಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಸವನ ಬಾಗೇವಾಡಿ ಪುರಸಭೆ ಕಾಂಗ್ರೆಸ್ ಸದಸ್ಯೆಅಗಿರುವ ಅಶೋಕ ಹಾರಿವಾಳ ಮೊದಲ ಬಾರಿ ಪುರಸಭೆಗೆ ಆಯ್ಕೆಯಾಗಿದ್ದಾರೆ. ತಾವು ಅವಿರೋಧವಾಗಿ ಆಯ್ಕೆಯಾಗಲು ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಅವರೇ ಕಾರಣ. ಶಾಸಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಅಶೋಕ ಹಾರಿವಾಳ ತಿಳಿಸಿದ್ದಾರೆ. ಅಶೋಕ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿಯೂ ಕನ್ನಡ ಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಕೊರೊನಾದಿಂದ ಸಂಕಷ್ಟದಲ್ಲಿರುವ ದೀನ, ದಲಿತ, ಬಡವರ ಜನರಿಗೆ ಸ್ಪಂದಿಸಲು ರಾಜ್ಯ ಪ್ರವಾಸ ಕೈಗೊಂಡಿದ್ದೇನೆ- ಡಿ. ಕೆ. ಶಿವಕುಮಾರ

ವಿಜಯಪುರ: ರಾಜ್ಯ ಮತ್ತು ರಾಷ್ಟ್ರ ಇಂದು ಕೊರೊನಾದಿಂದ ಬಳಲುತ್ತಿದೆ. ಹೀಗಾಗಿ ಸಂಕಷ್ಟದಲ್ಲಿರಿವ ಜನರಿಗೆ ಸ್ಪಂದಿಸಲು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿರುವುದಾಗಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ. ಕೆ. ಶಿವಕುಮಾರ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮಾತನಾಡಿದ ಅವರು, ಜನರು, ದೀನ-ದಲಿತರು, ಅಲ್ಪಸಂಖ್ಯಾತರು, ಅಸಂಘಟಿತ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಕೊರೊಬಾದಿಂದ ಸತ್ತವರಿಗೆ ಪರಿಹಾರ ಸಿಕ್ಕಿಲ್ಲ. ಔಷಧಿ ಬಿಲ್ ಸಿಕ್ಕಿಲ್ಲ. ಸತ್ತವರಿಗೆ ಪರಿಹಾರ ಕೊಡಿಸಬೇಕಿದೆ. ಹೀಗಾಗಿ ಜನರ ಕುಂದು ಕೊರತೆ ಆಲಿಸಲು ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಕುಂದು ಕೊರತೆಗಳನ್ನ ನಾನೇ ಖುದ್ದಾಗಿ […]

ಎಸ್ ಎಸ್ ಎಲ್ ಸಿ ಪರೀಕ್ಷೆ ಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ- ವಿಜಯಪುರ ಕೆ ಕೆ ಆರ್ ಟಿ ಸಿ ಡಿಸಿ ನಾರಾಯಣಪ್ಪ ಕುರುಬರ

ವಿಜಯಪುರ: ಈ ಬಾರಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಹಿರೆಕುರುಬರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರಕಾರದ ಆದೇಶದಂತೆ ವಿಜಯಪುರ ಜಿಲ್ಲೆಯಲ್ಲಿ ಜು. 19 ರಿಂದ 22ರ ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ […]

ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ, ಪರೀಕ್ಷಾ ಸಿಬ್ಬಂದಿಗೆ ಶುಭ ಕೋರಿದ ಎಂ ಎಲ್ ಸಿ ಅರುಣ ಶಹಾಪುರ

ವಿಜಯಪುರ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿಗೆ ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ಶುಭ ಕೋರಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, ಈ ಮಹಾಮಾರಿ ಕೊರೊನಾ ಸಂಕಷ್ಟದ ನಡುವೆ ಜೀವನ ಸಾಗಿಸುವ ಜೊತೆಗೆ, ನಮ್ಮ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದೃಷ್ಠಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸುವುದು ಅನಿವಾರ್ಯ. ಸರಕಾರವು ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಎಲ್ಲ ರೀತಿಯ ಸುರಕ್ಷತೆಯ ದೃಷ್ಠಿಯಿಂದ ಸ್ಯಾನಿಟೈಸರ್, ಮಾಸ್ಕ್, ಕುಡಿಯುವ ನೀರು, ಪ್ರಯಾಣದ […]

ವಿಜಯಪುರ ಅಂಬೇಡ್ಕರ ಕ್ರೀಡಾಂಗಣದ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಿ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ನಗರದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ ಒಳಾಂಗಣ ಕ್ರೀಡಾಂಗಣ ಕಾಮಗಾರಿಯನ್ನು ಕೂಡಲೇ ಮುಗಿಸಿ ಕ್ರೀಡಾಪಟುಗಳ ದೈನಂದಿನ ತರಬೇತಿಗಾಗಿ ಲೋಕಾರ್ಪಣೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ಸಮಿತಿಯಿಂದ ಕೈಗೊಳ್ಳಲಾದ ಪ್ರಗತಿ ಪರಿಶೀಲನೆ ಸಭೆ ನಡೆಸಿ ಅವರು ಮಾತನಾಡಿದರು. ಕ್ರೀಡಾಂಗಣದ ಕಾಮಗಾರಿಗಳನ್ನು ಒಳ್ಳೆಯ ಸುಸಜ್ಜಿತ ರೀತಿಯಲ್ಲಿ ಪೂರ್ಣಗೊಳಿಸಬೇಕು. ಬಾಕಿ ಕಾಮಗಾರಿಗಳನ್ನು ಈಗಾಗಲೇ ಕ್ರೀಡಾ ಇಲಾಖೆಯಲ್ಲಿರುವ ಮೊತ್ತದಲ್ಲಿ ಕಾಮಗಾರಿಗಳನ್ನು […]