ವಿಜಯಪುರ ಅಂಬೇಡ್ಕರ ಕ್ರೀಡಾಂಗಣದ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಿ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ನಗರದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ ಒಳಾಂಗಣ ಕ್ರೀಡಾಂಗಣ ಕಾಮಗಾರಿಯನ್ನು ಕೂಡಲೇ ಮುಗಿಸಿ ಕ್ರೀಡಾಪಟುಗಳ ದೈನಂದಿನ ತರಬೇತಿಗಾಗಿ ಲೋಕಾರ್ಪಣೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ಸಮಿತಿಯಿಂದ ಕೈಗೊಳ್ಳಲಾದ ಪ್ರಗತಿ ಪರಿಶೀಲನೆ ಸಭೆ ನಡೆಸಿ ಅವರು ಮಾತನಾಡಿದರು.

ಕ್ರೀಡಾ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ಕ್ರೀಡಾಂಗಣದ ಕಾಮಗಾರಿಗಳನ್ನು ಒಳ್ಳೆಯ ಸುಸಜ್ಜಿತ ರೀತಿಯಲ್ಲಿ ಪೂರ್ಣಗೊಳಿಸಬೇಕು. ಬಾಕಿ ಕಾಮಗಾರಿಗಳನ್ನು ಈಗಾಗಲೇ ಕ್ರೀಡಾ ಇಲಾಖೆಯಲ್ಲಿರುವ ಮೊತ್ತದಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ವಿಜಯಪುರ ನಗರದ ಭೂತನಾಳ ಗ್ರಾಮದ ಹತ್ತಿರ ನಿರ್ಮಿಸುತ್ತಿರುವ ಸೈಕ್ಲಿಂಗ್ ವೆಲೋಡ್ರೋಂ ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದು, ಪುನಃ ಕಾಮಗಾರಿಯನ್ನು ಪ್ರಾರಂಭಿಸಲು ತಾಂತ್ರಿಕ ಸಮಿತಿಯಿಂದ ಪರಿಶೀಲಿಸಿ ನಂತರ ಕಾಮಗಾರಿಯನ್ನು ಆರಂಭಿಸಬೇಕು ಎಂದು ಕ್ರೀಡಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಸಿಂಥೆಟಿಕ್ ಅಥ್ಲೇಟಿಕ್ ಟ್ರ್ಯಾಕ್, ವಾಲಿಬಾಲ್ ಮೈದಾನ ಮತ್ತು ಕನಕದಾಸ ಬಡಾವಣೆಯಲ್ಲಿರುವ ಈಜುಕೊಳವನ್ನು ಕ್ರೀಡಾಪಟುಗಳು, ಸಾರ್ವಜನಿಕರು, ಶಿಕ್ಷಣ,ಸಂಘ-ಸಂಸ್ಥೆಯವರು ಸಮರ್ಪಕವಾಗಿ ಉಪಯೋಗಿಸಲು ಕನಿಷ್ಠ ಶುಲ್ಕವನ್ನು ನಿಗದಿ ಪಡಿಸಬೇಕು. ಕನಕದಾಸ ಬಡಾವಣೆಯ ಒಳಾಂಗಣ ಕ್ರೀಡಾಂಗಣ ಕಾಮಗಾರಿಯನ್ನು ಕೂಡಲೇ ಮುಕ್ತಾಯಗೊಳಿಸಿ ಕ್ರೀಡಾಪಟುಗಳ ದೈನಂದಿನ ತರಬೇತಿಗಾಗಿ ಲೋಕಾರ್ಪಣೆ ಮಾಡಬೇಕು ಎಂದು ಸೂಚಿನೆ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ವಿಜಯ ಮೆಕ್ಕಳಕಿ, ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಡಿವೈಎಸ್ಪಿ ಲಕ್ಷ್ಮೀನಾರಾಯಣ, ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಜಿ. ಲೋಣಿ, ಕೆ. ಆರ್. ಐ. ಡಿ. ಎಲ್ ಕಾರ್ಯ ನಿರ್ವಾಹಕ ಅಭಿಯಂತರ ತಿಮ್ಮರಾಜಪ್ಪ, ಕ್ರೀಡಾ ಇಲಾಖೆ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಹರೀಶ, ಲೋಕೋಪಯೋಗಿ ಕಾರ್ಯ ನಿರ್ವಾಹಕ ಅಭಿಯಂತರ ಹಿರೇಗೌಡರ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌