ಎಸ್ ಎಸ್ ಎಲ್ ಸಿ ಪರೀಕ್ಷೆ ಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ- ವಿಜಯಪುರ ಕೆ ಕೆ ಆರ್ ಟಿ ಸಿ ಡಿಸಿ ನಾರಾಯಣಪ್ಪ ಕುರುಬರ

ವಿಜಯಪುರ: ಈ ಬಾರಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಹಿರೆಕುರುಬರ ತಿಳಿಸಿದ್ದಾರೆ.

ವಿಜಯಪುರ ಕೇಂದ್ರ ಬಸ್ ನಿಲ್ದಾಣ

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರಕಾರದ ಆದೇಶದಂತೆ ವಿಜಯಪುರ ಜಿಲ್ಲೆಯಲ್ಲಿ ಜು. 19 ರಿಂದ 22ರ ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳ ವರೆಗೆ ನಿಗಮದ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.

ವಿಜಯಪುರ ಕೇಂದ್ರ ಬಸ್ ನಿಲ್ದಾಣ

ಬಸ್ ಪ್ರಯಾಣ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರವೇಶ ಪತ್ರ(ಹಾಲ್ ಟಿಕೆಟ್)ವನ್ನು ತೋರಿಸಿ ವಿಜಯಪುರ ನಗರ ಹೊರವಲಯ, ಸಾಮಾನ್ಯ, ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ನಿಗಮದ ವತಿಯಿಂದ ಶುಭ ಕೋರುತ್ತೇವೆ ಎಂದು ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌