ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ- ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೀಡಾದ ಆಸ್ತಿಪಾಸ್ತಿ ಕುರಿತು ಮಾಹಿತಿ ನೀಡಿದ ಡಿಸಿಎಂ ಗೋವಿಂದ ಕಾರಜೋಳ
ಬೆಳಗಾವಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಿರಣ್ಯಕೇಶಿ ನದಿಯಲ್ಲಿ ಉಂಟಾದ ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭೇಟಿ ನೀಡಿದ ಅವರು, ಪ್ರವಾಹದಿಂದ ಸಂತ್ರಸ್ತರಾಗಿರುವ ಜನರ ಅಹವಾಲು ಆಲಿಸಿದರು. ನೆರೆಯ ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿದ ಧಾರಾಕಾರ ಮಲೆಯಿಂದಾಗಿ ಹಿರಣ್ಯಕೇಶಿ, ಕೃಷ್ಣಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ ಸೇರಿದಂತೆ ಜಿಲ್ಲೆಯ ಸಪ್ತ ನದಿಗಳಲ್ಲಿ ಹಾಗೂ […]
ಪ್ರಕೃತಿಯ ಮಡಿಲಿನಲ್ಲಿ ವಿಹರಿಸಿ ಸಸಿಗೆ ನೀರುಣಿಸಿ ಸಂತಸಪಟ್ಟ ನಡೆದಾಡುವ ದೇವರು- ಆಧುನಿಕ ಭಗೀರಥನ ಪರಿಸರ ಪ್ರೀತಿಗೆ ಶ್ಲಾಘನೆ
ವಿಜಯಪುರ: ಅವರು ನಡೆದಾಡುವ ದೇವರು. ಅವರ ಮಾತುಗಳು ಈ ಭಾಗದಲ್ಲಿ ವೇದವಾಕ್ಯ. ಅವರು ಎದುರಿಗೆ ಕಂಡರೆ ಸಾಕು ಭಕ್ತರು ದೂರದಿಂದಲೇ ನಮಸ್ಕರಿಸುವ ಮೂಲಕ ಭಕ್ತಿಭಾವ ತೋರಿಸುತ್ತಾರೆ. ಈ ನಡೆದಾಡುವ ದೇವರು ಇಂದು ಮಾನವ ನಿರ್ಮಿತ ಅರಣ್ಯ ಪ್ರದೇಶದಲ್ಲಿ ವಿಹರಿಸಿದರು. ಅಲ್ಲಿ ಅಭಿವೃದ್ಧಿ ಹೊಂದುತ್ತಿರುವ ವನವನ್ನು ಕಣ್ತುಂಬಿಕೊಂಡರು. ಅಷ್ಟೇ ಅಲ್ಲ, ಅಲ್ಲಿರುವ ಜನರಿಂದ ಮಾಹಿತಿ ಪಡೆದು ಸಂತಸ ವ್ಯಕ್ತಪಡಿಸಿದರು. ಇದು ವಿಜಯಪುರ ನಗರದ ಹೊರವಲಯದ ಕರಾಡದೊಡ್ಡಿಯ ಬಳಿ ಮಾನವ ನಿರ್ಮಿತ ಅರಣ್ಯ ಪ್ರದೇಶದಲ್ಲಿ ನಡೆದ ಘಟನೆ. ಬರಕ್ಕೆ ಹೆಸರಾಗಿರುವ […]
ರಾಜಕೀಯ ಜಂಜಾಟದ ನಡುವೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಶೀಲನೆ ನಡೆಸಿದ ಸಿಎಂ ಬಿ. ಎಸ್. ಯಡಿಯೂರಪ್ಪ
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಜಂಜಾಟದ ನಡುವೆಯೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಯಡಿಯೂರಪ್ಪ ಮಳೆಯಿಂದ ಹಾನಿಗೊಳಗಾದ ಪ್ರದೇಶದಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪ್ರಶೀಲನೆ ನಡೆಸಿದರು. ಇದೇ ವೇಳೆ ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿದ ಬಿ. ಎಸ್. ಯಡಿಯೂರಪ್ಪ ಅವರಿಂದ ಪ್ರವಾಹ ಹಾನಿಯ ಕುರಿತು ಮಾಹಿತಿ ಪಡೆದು ಅಳಲು ಆಲಿಸಿದರು. ಡಿಸಿಎಂ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, […]
ರೋಣಿಹಾಳದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ
ವಿಜಯಪುರ: ಬಸವಣ್ಣನವರ ಕಾಯಕಕ್ಕೆ ಹಡಪದ ಅಪ್ಪಣ್ಣನವರು ಆಧಾರ ಸ್ತಂಭವಾಗಿದ್ದರು, ಆಪ್ತ ಕಾರ್ಯದರ್ಶಿಯಾಗಿ ಅಚ್ಚುಮೆಚ್ಚಿನ ಶರಣರಾಗಿದ್ದರು ಎಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ ಅಧ್ಯಕ್ಷ ಜಗದೀಶ ಸಾಲಳ್ಳಿ ಹೇಳಿದರು. ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ಬಸವ ಪ್ರಿಯ ಹಡಪದ ಅಪ್ಪಣ್ಣ ಸಮಾಜ ಸೇವಾ ಅಭಿವೃದ್ಧಿ ಸಂಘ ಯಲ್ಲಮದೇವಿ ದೇವಸ್ಥಾನ ಸಭಾಂಗಣದಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಅಪ್ಪಣ್ಣನವರು ಸದಾಕಾಲ ಬಸವಣ್ಣನವರೊಂದಿಗೆ ಇರುತ್ತಿದ್ದರು. ಬಸವಣ್ಣನವರನ್ನು ಭೇಟಿ ಮಾಡಲು ಬರುವವರು ಮೊದಲು ಅಪ್ಪಣ್ಣನವರ ಅನುಮತಿ […]