ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಜಂಜಾಟದ ನಡುವೆಯೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಯಡಿಯೂರಪ್ಪ ಮಳೆಯಿಂದ ಹಾನಿಗೊಳಗಾದ ಪ್ರದೇಶದಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪ್ರಶೀಲನೆ ನಡೆಸಿದರು.

ಇದೇ ವೇಳೆ ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿದ ಬಿ. ಎಸ್. ಯಡಿಯೂರಪ್ಪ ಅವರಿಂದ ಪ್ರವಾಹ ಹಾನಿಯ ಕುರಿತು ಮಾಹಿತಿ ಪಡೆದು ಅಳಲು ಆಲಿಸಿದರು.

ಡಿಸಿಎಂ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಡಿಸಿಎಂ ಲಕ್ಷ್ಮಣ ಸವದಿ, ಆಹಾರ ಸಚಿವ ಸಚಿವ ಉಮೇಶ ಕತ್ತಿ, ಕಂದಾಯ ಸಚಿವ ಆರ್. ಅಶೋಕ ಮತ್ತು ಬೆಳಗಾವಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.