ಬಿಜೆಪಿ ಕಚೇರಿಗೆ ಭೇಟಿ ನೀಡಿದ ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ನೇರವಾಗಿ ರಾಜಭವನಕ್ಕೆ ತೆರಳಿ ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ನಾಳೆ ಬುಧವಾರ ಬೆ. 11ಕ್ಕೆ ಪ್ರಮಾಣ ವಚನ ಸ್ವೀಕಾರಕ್ಕೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಆಹ್ವಾನ ನೀಡಿದ್ದಾರೆ. ರಾಜಭವನದಿಂದ ನೇರವಾಗಿ ಹಂಗಾಮಿ ಸಿಎಂ ಬಿ. ಎಸ್. ಯಡಿಯೂರಪ್ಪ ನಿವಾಸಕ್ಕೆ ತೆರಳಿದರು. ಬಳಿಕ ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಗೆ ತೆರಳಿದ ಬೊಮ್ಮಾಯಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ಶಾಲು ಹೊದಿಸಿ ಸನ್ಮಾನಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ […]
ನಾಳೆ ಬುಧವಾರ ಬೆ. 11ಕ್ಕೆ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ಬೊಮ್ಮಾಯಿಯನ್ನು ಆಹ್ವಾನಿಸಿದ ರಾಜ್ಯಪಾಲರು- ಸಚಿವ ಸಂಪುಟ ವಿಸ್ತರಣೆ ನಂತರ ನಿರ್ಧಾರ
ಬೆಂಗಳೂರು: ಬಸವರಾಜ ಬೊಮ್ಮಾಯಿ ನಾಳೆ ಬುಧವಾರ ಬೆ. 11ಕ್ಕೆ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ. ಹಂಗಾಮಿ ಸಿಎಂ ಬಿ. ಎಸ್. ಯಡಿಯೂರಪ್ಪ, ಕೇಂದ್ರ ವೀಕ್ಷಕರಾದ ಅರುಣಸಿಂಗ್, ಧರ್ಮೇಂದ್ರ ಪ್ರಧಾನ, ಕಿಶನರೆಡ್ಡಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ, ಮಾಜಿ ಸಚಿವರಾದ ಆರ್. ಅಶೋಕ, ಸಿ. ಟಿ. ರವಿ, ಕೆ. ಎಸ್. ಈಶ್ವರಪ್ಪ ಮತ್ತೀತರರ ಜೊತೆ ರಾಜಭವನಕ್ಕೆ […]
ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ನಾಳೆ ಪ್ರಮಾಣ ವಚನ ಸ್ವೀಕಾರ- 3 ಜನ ಡಿಸಿಎಂ ಸೇರಿ 15 ಜನ ಸಚಿವರಾಗಿ ಪ್ರಮಾಣ ಸಾಧ್ಯತೆ
ಬೆಂಗಳೂರು: ಹಂಗಾಮಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ಪರಮಾಪ್ತ ಮತ್ತು ಮಾಜಿ ಸಿಎಂ ದಿ. ಎಸ್. ಆರ್. ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಹಂಗಾಮಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಸೂಚಿಸಿದರು. ಈ ಹೆಸರಿಗೆ ಮಾಡಿ ಡಿಸಿಎಂ ಗೋವಿಂದ ಕಾರಜೋಳ ಅನುಮೋದನೆ ನೀಡಿದರು. ಕೇಂದ್ರದಿಂದ ವೀಕ್ಷಕರಾಗಿ ಆಗಮಿಸಿದ್ದ ಕೇಂದ್ರ ಸಚಿವ […]
ಕೇಂದ್ರ ವೀಕ್ಷಕರನ್ನು ಭೇಟಿ ಮಾಡಿದ ಮಾಜಿ ಸಚಿವ ಬಸವರಾಜ ಬೊಮ್ಮಾಯಿ- ಸಿಎಂ ಆಗ್ತಾರಾ ಮಾಜಿ ಸಿಎಂ ಪುತ್ರ?
ಬೆಂಗಳೂರು: ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ವೀಕ್ಷಕರಾದ ಧರ್ಮೇಂದ್ರ ಪ್ರಧಾನ ಮತ್ತು ಕಿಶನರೆಡ್ಡಿ ಅವರನ್ನು ಭೇಟಿ ಮಾಡಿದ್ದಾರೆ. ಇದೊಂದು ಸೌಹಾರ್ಧಯುತ ಭೇಟಿ ಎಂದು ಹೇಳಲಾಗುತ್ತಿದೆಯಾದರೂ, ಈಗ ಸಿಎಂ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಹೆಸರು ಮುಂಚೂಣಿಗೆ ಬಂದಿದೆ. ಬಸವರಾಜ ಬೊಮ್ಮಾಯಿ ಜೊತೆ ಮಾಜಿ ಸಿಎಂ ಜಗದೀಶ ಶೆಟ್ಟರ ಕೂಡ ಕೇಂದ್ರ ವೀಕ್ಷಕರನ್ನು ಭೇಟಿಯಾಗಿದ್ದಾರೆ. ಇಂದು ರಾತ್ರಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಸಿಎಂ ಅಭ್ಯರ್ಥಿಯ ಆಯ್ಕೆ ನಡೆಯಬಹುದಾಗಿದೆ. ಬಸವರಾಜ ಬೊಮ್ಮಾಯಿ […]
ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಂದ ಕೇಂದ್ರ ವೀಕ್ಷಕ ಧರ್ಮೇಂದ್ರ ಪ್ರಧಾನ ಭೇಟಿ- ಯಾಕೆ ಗೊತ್ತಾ?
ಬೆಂಗಳೂರು: ರಾಜ್ಯದಲ್ಲಿ ನೂತನ ಸಿಎಂ ಆಯ್ಕೆಗಾಗಿ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಬೆಂಗಳೂರಿಗೆ ಕೇಂದ್ರ ಬಿಜೆಪಿ ವೀಕ್ಷಕರ ತಂಡ ಆಗಮಿಸಿದೆ. ಕೇಂದ್ರ ವೀಕ್ಷಕರ ತಂಡದ ಸದಸ್ಯರಾಗಿರುವ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಬೆಂಗಳೂರಿಗೆ ಆಗಮಿಸಿದ್ದಾರೆ. ಕೇಂದ್ರ ಸಚಿವರನ್ನು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಬಾಗಲಕೋಟೆ ಬಿಜೆಪಿ ಶಾಸಕ ವೀರಣ್ಣ ಚರಂತಿಮಠ ಕೂಡ ಗೋವಿಂದ ಕಾರಜೋಳ ಅವರೊಂದಿಗೆ ತೆರಳಿ ಧರ್ಮೇಂದ್ರ ಪ್ರಧಾನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೊಂದು ಸೌಜನ್ಯದ ಭೇಟಿಯಾಗಿದೆ […]
ಕೃಣಾಲ ಪಾಂಡ್ಯಗೆ ಕೊರೊನಾ ಪಾಸಿಟಿವ್- ಭಾರತ- ಶ್ರೀಲಂಕಾ ಟಿ-20 ನಾಳೆಗೆ ಮುಂದೂಡಿಕೆ
ವಿಜಯಪುರ: ಭಾರತ ಮತ್ತು ಶ್ರೀಲಂಕಾ ಮಧ್ಯೆ ಇಂದು ರಾತ್ರಿ ನಡೆಯಬೇಕಿದ್ದ ಟಿ-20 ಕ್ರಿಕೆಟ್ ಪಂದ್ಯಾವಳಿಯನ್ನು ನಾಳೆಗೆ ಮುಂದೂಡಲಾಗಿದೆ. ಈ ಕುರಿತು ಬಿಸಿಸಿಐ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದೆ. ಭಾರತೀಯ ಕ್ರಿಕೆಟ್ ತಂಡದ ಆಲರೌಂಡರ್ ಕೃಣಾಲ ಪಾಂಡ್ಯ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಗೆ ಆರಂಭವಾಗಬೇಕಿದ್ದ ಟಿ- 20 ಕ್ರಿಕೆಟ್ ಪಂದ್ಯವನ್ನು ನಾಳೆಗೆ ಜು. 28ಕ್ಕೆ ಮುಂದೂಡಲಾಗಿದೆ. ಕೊರೊನಾ ಸೋಂಕು ಹೆಚ್ಚಾಗುವುದನ್ನು ತಡೆಯಲು ಇಂದು ಭಾರತ ಮತ್ತು ಶ್ರೀಲಂಕಾ […]
ಬಸವ ನಾಡಿನಲ್ಲಿ ಅಂಗವಿಕಲರಿಗೆ ಸಲಕರಣೆ ವಿತರಿಸಿದ ಶಾಸಕ ಎಂ. ಬಿ. ಪಾಟೀಲ
ವಿಜಯಪುರ: ವಿಕಲಚೇತನರು ಯಾವುದೇ ಪರಿಸ್ಥಿತಿಯಲ್ಲಿ ಎದೆಗುಂದದೆ ಸ್ವಾವಲಂಬಿ ಜೀವನ ನಡೆಸಿ, ಇತರರಿಗೆ ಮಾದರಿಯಾಗಬೇಕು ಎಂದು ಬಿ. ಎಲ್. ಡಿ. ಇ. ಸಂಸ್ಥೆಯ ಅಧ್ಯಕ್ಷ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ್ ಹೇಳಿದರು. ವಿಜಯಪುರ ನಗರದ ಬಿ. ಎಲ್. ಡಿ. ಇ. ಸಂಸ್ಥೆ ಆವರಣದಲ್ಲಿ ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸಹಯೋಗದಲ್ಲಿ ನಡೆದ ವಿಕಲಚೇತನರಿಗೆ ಕೃತಕ ಅಂಗಾಂಗ ಜೋಡಣೆ ಹಾಗೂ ಸಾಧನ ಸಲಕರಣೆಗಳ ಉಚಿತ ವಿತರಣೆ ಕಾರ್ಯಕ್ರಮ […]
ಕೊರೊನಾ ಹಿನ್ನೆಲೆ ಜನರಿಂದ ಹಿಂಜರಿಕೆ- ನಾಯಕನ ಜನ್ಮದಿನವನ್ನು ಉಪಯೋಗಿಸಿ ರಕ್ತದಾನ ಶಿಬಿರ ಮಾಡಿದ ಯುವಕರು
ವಿಜಯಪುರ: ಕೊರೊನಾ ಹಿನ್ನೆಲೆಯಲ್ಲಿ ರಕ್ತದಾನಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಹೀಗಾಗಿ ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ರಕ್ತದ ಕೊರತೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರ ಬೆಂಬಲಿಗರು ತಮ್ಮ ನಾಯಕನ ಜನ್ಮದಿನವನ್ನು ಜನೋಪಯೋಗಿಯಾಗಲು ಬಳಸಿಕೊಂಡಿದ್ದಾರೆ. ವಿಜಯಪುರ ನಗರ ಮಾಜಿ ಶಾಸಕರೂ ಆಗಿರುವ ಅಪ್ಪು ಪಟ್ಟಣಶೆಟ್ಟಿ ಅವರ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸದೇ, ರೋಗಿಗಳಿಗೆ ಅಗತ್ಯವಾಗಿರುವ ರಕ್ತವನ್ನು ಸಂಗ್ರಹಿಸುವ ಮೂಲಕ ಕೊರೊನಾ ಸಂಕಷ್ಟ ಕಾಲದಲ್ಲಿ ಇತರರಿಗೆ ಮಾದರಿಯಾಗಿದ್ದಾರೆ. ಕಳೆದ ಒಂದು ವರ್ಷದಿಂದ ವಿಜಯಪುರ ಜಿಲ್ಲೆ ಅಷ್ಟೇ […]
ಬಹುಭಾಷಾ ತಜ್ಞ ಎ. ಕೆ. ರಾಮಾನುಜನ್ ನಂತರ ಡಾ. ಅರುಣ ಇನಾಮದಾರ ವಚನಗಳನ್ನು ಇಂಗ್ಲಿಷ್ ಭಾಷೆಗೆ ಅನುವಾದಿಸಿ ಮಾದರಿಯಾಗಿದ್ದಾರೆ- ಹಿರಿಯ ಪತ್ರಕರ್ತ ರಾಜು ವಿಜಾಪುರ
ವಿಜಯಪುರ: ಖ್ಯಾತ ಭಾಷಾ ತಜ್ಞ ಎ. ಕೆ. ರಾಮಾನುಜನ್ ಅವರ ಬಳಿಕ ಶರಣರೊಬ್ಬರ ವಚನಗಳನ್ನು ಇಂಗ್ಲೀಷ್‍ಗೆ ಭಾಷಾಂತರಿಸಿದ ಕೀರ್ತಿ ಡಾ. ಅರುಣ ಇನಾಮದಾರ ಅವರಿಗೆ ಸಲ್ಲುತ್ತದೆ ಎಂದು ಹಿರಿಯ ಪತ್ರಕರ್ತರಾದ ರಾಜುಅ ವಿಜಾಪುರ ಹೇಳಿದರು. ವಿಜಯಪುರದ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರದಲ್ಲಿ ನಡೆದ ಡಾ. ಎಂ. ಎಂ. ಕಲಬುರ್ಗಿ ಸಮಗ್ರ ಸಾಹಿತ್ಯ ಸಂಪುಟಗಳನ್ನು, ಬಿ. ಎಂ. ಪಾಟೀಲ್ ಅವರ ಚೇತನಕ್ಕೆ ಸಮರ್ಪಣೆ, ರೇಡಿಯನ್ಸ್ ಆಫ್ ವಚನ(ವಚನ ಪ್ರಭೆ) ಪುಸ್ತಕ ಬಿಡುಗಡೆ ಹಾಗೂ ಸೋಬಗಿನ ಸಂಕ್ರಾಂತಿ […]
ಇಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಜನ್ಮದಿನ- ಕೊರೊನಾ ಮಹಾಮಾರಿಯ ನೋವಿನ ಹಿನ್ನೆಲೆ ಆಚರಣೆ ಬೇಡ ಎಂದ ಜನನಾಯಕ
ವಿಜಯಪುರ: ಇಂದು ಮಾಜಿ ಸಚಿವ ಮತ್ತು ಬಿಜೆಪಿ ಹಿರಿಯ ಮುಖಂಡ ಅಪ್ಪು ಪಟ್ಟಣಶೆಟ್ಟಿ ಜನ್ಮದಿನ. ಆದರೆ, ತಮ್ಮ ಜನ್ಮದಿನ ಆಚರಣೆ ಬೇಡ. ಅಭಿಮಾನಿಗಳು ಮತ್ತು ಬೆಂಬಲಿಗರು ತಾವಿರುವ ಸ್ಥಳದಿಂದಲೇ ಶುಭ ಹಾರೈಸಿದರೆ ಸಾಕು ಎಂದು ಅಪ್ಪು ಪಟ್ಟಣಶೆಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವ ಮೂಲಕ ಮನವಿ ಮಾಡಿದ್ದಾರೆ. ಅಪ್ಪು ಪಟ್ಟಣಶೆಟ್ಟಿ ಹಾಕಿರುವ ಪೋಸ್ಟ್ ನಲ್ಲಿ, ನನ್ನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ಕಾತುರದಿಂದ ಕಾಯುತ್ತಿರುವ ಅಭಿಮಾನಿ ಬಂಧು ಬಳಗಕ್ಕೆ ನನ್ನ ಕೋಟಿ ನಮನಗಳು. ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು […]