ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ನೇರವಾಗಿ ರಾಜಭವನಕ್ಕೆ ತೆರಳಿ ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ನಾಳೆ ಬುಧವಾರ ಬೆ. 11ಕ್ಕೆ ಪ್ರಮಾಣ ವಚನ ಸ್ವೀಕಾರಕ್ಕೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಆಹ್ವಾನ ನೀಡಿದ್ದಾರೆ. ರಾಜಭವನದಿಂದ ನೇರವಾಗಿ ಹಂಗಾಮಿ ಸಿಎಂ ಬಿ. ಎಸ್. ಯಡಿಯೂರಪ್ಪ ನಿವಾಸಕ್ಕೆ ತೆರಳಿದರು.
ಬಳಿಕ ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಗೆ ತೆರಳಿದ ಬೊಮ್ಮಾಯಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ಶಾಲು ಹೊದಿಸಿ ಸನ್ಮಾನಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಭಾರತ ಮಾತೆಯ ಭಾವಚಿತ್ರಕ್ಕೆ ಮತ್ತು ಜಗನ್ನಾಥರಾವ್ ಜೋಶಿ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್. ಅಶೋಕ, ವಿಧಾನ ಪರಿಷತ ಸದಸ್ಯ ರವಿಕುಮಾರ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.