ವಿಜಯಪುರ: ವಿಕಲಚೇತನರು ಯಾವುದೇ ಪರಿಸ್ಥಿತಿಯಲ್ಲಿ ಎದೆಗುಂದದೆ ಸ್ವಾವಲಂಬಿ ಜೀವನ ನಡೆಸಿ, ಇತರರಿಗೆ ಮಾದರಿಯಾಗಬೇಕು ಎಂದು ಬಿ. ಎಲ್. ಡಿ. ಇ. ಸಂಸ್ಥೆಯ ಅಧ್ಯಕ್ಷ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ್ ಹೇಳಿದರು.
ವಿಜಯಪುರ ನಗರದ ಬಿ. ಎಲ್. ಡಿ. ಇ. ಸಂಸ್ಥೆ ಆವರಣದಲ್ಲಿ ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸಹಯೋಗದಲ್ಲಿ ನಡೆದ ವಿಕಲಚೇತನರಿಗೆ ಕೃತಕ ಅಂಗಾಂಗ ಜೋಡಣೆ ಹಾಗೂ ಸಾಧನ ಸಲಕರಣೆಗಳ ಉಚಿತ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಕಲಚೇತನರು ತಮ್ಮನ್ನು ಯಾವುದರಲ್ಲೂ ಕಡಿಮೆ ಎಂದು ಪರಿಗಸಬಾರದು. ತಾವು ಕೂಡ ಇತರರಂತೆ ಆತ್ಮಸ್ಥೈರ್ಯ ಬೆಳೆಸಿಕೊಂಡು ತಮಗೆ ಸಲಕರಣೆಗಳ ಪ್ರಯೋಜನ ಪಡೆದು, ಸಮಾಜದಲ್ಲಿ ನಾನಾ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ವಿಕಲಚೇತನರ ನೆರವಿಗೆ ತಾವು ಸದಾ ಬದ್ಧರಾಗಿರುವುದಾಗಿ ಎಂ. ಬಿ. ಪಾಟೀಲ ತಿಳಿಸಿದರು.
25 ಜನ ವಿಕಲಚೇತನರಿಗೆ ಕೃತಕ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್. ಎಸ್. ಮುಧೋಳ, ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಜಿಲ್ಲಾ ವಿಕಲಚೇತನ ಇಲಾಖೆ ಅಧಿಕಾರಿ ಆಯಿಷಾ ನದಾಫ, ನೊಡೆಲ್ ಅಧಿಕಾರಿ ಡಾ. ಈಶ್ವರ ಬಾಗೋಜಿ ಮುಂತಾದವರು ಉಪಸ್ಥಿತರಿದ್ದರು