ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ಸೇರಲ್ಲ ಎಂದ ಜಗದೀಶ ಶೆಟ್ಟರ- ನಿಜವಾದ ಕಾರಣವೇನು ಗೊತ್ತಾ?

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟಕ್ಕೆ ತಾವು ಸೇರುವುದಿಲ್ಲ ಎಂದು ಮಾಜಿ ಸಿಎಂ ಮತ್ತು ಯಡಿಯೂರಪ್ಪ ಸಂಪುಟದಲ್ಲಿ ಬೃಹತ್ ಕೈಗಾರಿಕೆ ಸಚಿವರಾಗಿದ್ದ ಜಗದೀಶ ಶೆಟ್ಟರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಜಾರಿಯಲ್ಲಿದ್ದು, 2-3 ದಿನಗಳಲ್ಲಿ ಪೂರ್ಣವಾಗುವ ನಿರೀಕ್ಷೆಯಿದೆ. ನಾನು ರಾಜ್ಯ ಮಾಜಿ ಮುಖ್ಯಮಂತ್ರಿಯಾಗಿ, ಹಿರಿಯ ನಾಯಕನಾಗಿ ಸಚಿವ ಸಂಪುಟದಲ್ಲಿ ಸೇರದಿರಲು ನಿರ್ಧರಿಸಿದ್ದೇನೆ. ಮಾಜಿ ಸಿಎಂ ಎಂಬ ನೈತಿಕ ಕಾರಣದಿಂದ ಸಂಪುಟ […]

ಯಡಿಯೂರಪ್ಪ ಕಾರ್ಯವೈಖರಿ ಶ್ಲಾಘಿಸಿ ಬಸವರಾಜ ಬೊಮ್ಮಾಯಿಗೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಅಲ್ಲದೇ, ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಪಕ್ಷ ಮತ್ತು ಕರ್ನಾಟಕದ ಅಭಿವೃದ್ಧಿಗಾಗಿ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ಕಾರ್ಯವೈಖರಿಯನ್ನ ವರ್ಣಿಸಲು ಶಬ್ದಗಳು ಸಾಲದು. ಕಳೆದ ಅನೇಕ ದಶಕಗಳಿಂದ ಯಡಿಯೂರಪ್ಪ ಕಷ್ಟಪಟ್ಟು ರಾಜ್ಯಾದ್ಯಂತ ಸಂಚರಿಸಿ ಜನರೊಂದಿಗೆ ಬೆರೆತು ಪಕ್ಷವನ್ನು ಬೆಳೆಸಿದ್ದಾರೆ. ಅವರ ಈ […]

ನೂತನ ಸಿಎಂ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರದಿಂದ ಹಿಡಿದು ಕಚೇರಿಗೆ ತೆರಳಿ ಪೂಜೆ ಸಲ್ಲಿಸುವವರೆಗಿನ ಮಾಹಿತಿ ಇಲ್ಲಿದೆ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ್ದಾರೆ. ಬೆಂಗಳೂರಿನಲ್ಲಿ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ ನೂತನ ಸಿಎಂಗೆ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರನ್ನು ವೇದಿಕೆಗೆ ಆಹ್ವಾನಿಸಿದ ಬಸವರಾಜ ಬೊಮ್ಮಾಯಿ ಅವರು ಫೋಟೋ ತೆಗೆಸಿಕೊಂಡರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಕೂಡ ಉಪಸ್ಥಿತರಿದ್ದರು. ಇದೇ ವೇಳೆ ವೇದಿಕೆಗೆ ತೆರಳಿದ ಡಿಸಿಎಂ ಗೋವಿಂದ ಕಾರಜೋಳ ಕೂಡ ವೇದಿಕೆಯ ಮೇಲೆ ತೆರಳಿ […]

ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಬೆಂಗಳೂರಿನಲ್ಲಿ ದೇವಸ್ಥಾನಕ್ಕೆ ಭೇಟಿ

ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಿಯೋಜಿತ ಸಿಎಂ ಜೊತೆ ಮಾಜಿ ಸಚಿವ ಭೈರತಿ ಬಸವರಾಜ ಜೊತೆಯಲ್ಲಿದ್ದರು.

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ನಡೆದು ಬಂದ ದಾರಿಯ ಕುರಿತ ಚಿತ್ರಗಳು ಇಲ್ಲಿವೆ

ವಿಜಯಪುರ: ಮಾಜಿ ಸಿಎಂ ಪುತ್ರ ಈಗ ಹಾಲಿ ಸಿಎಂ. ಮಾಜಿ ಸಿಎಂ ದಿ. ಎಸ್. ಆರ್. ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಈಗ ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಬಸವರಾಜ ಬೊಮ್ಮಾಯಿ ವಿವಾದಾತೀತ ನಾಯಕ. ಹಂಗಾಮಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ಪಕ್ಕಾ ಶಿಷ್ಯ. ಉತ್ತರ ಕರ್ನಾಟಕದ ಪ್ರಭಾವಿ ಲಿಂಗಾಯಿತ ಸಮುದಾಯದ ಲೀಡರ್. ಈ ಎಲ್ಲ ಅಂಶಗಳನ್ನು ಇಟ್ಟುಕೊಂಡು ಬಿಜೆಪಿ 2023ರ ಚುನಾವಣೆಯತ್ತ ದೃಷ್ಠಿ ನೆಟ್ಟು ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಆಗಿ […]