ನೂತನ ಸಿಎಂ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರದಿಂದ ಹಿಡಿದು ಕಚೇರಿಗೆ ತೆರಳಿ ಪೂಜೆ ಸಲ್ಲಿಸುವವರೆಗಿನ ಮಾಹಿತಿ ಇಲ್ಲಿದೆ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ್ದಾರೆ.

ಬೆಂಗಳೂರಿನಲ್ಲಿ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ ನೂತನ ಸಿಎಂಗೆ ಪ್ರಮಾಣ ವಚನ ಬೋಧಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭ ಕೋರಿದ ರಾಜ್ಯಪಾಲ ಥಾವರಸಿಂಗ್ ಗೆಹ್ಲೋಟ್

ಪ್ರಮಾಣ ವಚನ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರನ್ನು ವೇದಿಕೆಗೆ ಆಹ್ವಾನಿಸಿದ ಬಸವರಾಜ ಬೊಮ್ಮಾಯಿ ಅವರು ಫೋಟೋ ತೆಗೆಸಿಕೊಂಡರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಕೂಡ ಉಪಸ್ಥಿತರಿದ್ದರು.

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ

ಇದೇ ವೇಳೆ ವೇದಿಕೆಗೆ ತೆರಳಿದ ಡಿಸಿಎಂ ಗೋವಿಂದ ಕಾರಜೋಳ ಕೂಡ ವೇದಿಕೆಯ ಮೇಲೆ ತೆರಳಿ ನೂತನ ಸಿಎಂಗೆ ಶುಭಾಷಯ ಕೋರಿದರು.

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸುಭ ಕೋರಿದ ಮಾಜಿ ಡಿಸಿಎಂ ಗೋವಿಂದ ಕಾರಜೋಳ

ನಂತರ ಬಸವರಾಜ ಬೊಮ್ಮಾಯಿ ವಿಧಾನಸೌಧಕ್ಕೆ ತೆರಳಿ ತಮ್ಮ ಕಚೇರಿಯಲ್ಲಿ ನಡೆದ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೋಂಡರು.

ನೂತನ ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ತಮ್ಮ ಕಚೇರಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು

ಸಂದರ್ಭದಲ್ಲಿ ಮಾಜಿ ಸಚಿವ ವಿ. ಸೋಮಣ್ಣ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಇಧ್ಕಾರಿಗಳೊಂದಿಗೆ ಮೊದಲ ಸಭೆ ನಡೆಸಿದ ನೂತನ ಸಿಎೞ ಬಸವರಾಜ ಬೊಮ್ಮಾಯಿ

ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೊರೊನಾ ಮತ್ತು ಪ್ರವಾಹ ಕುರಿತು ಮಾಹಿತಿ ಪಡೆದರು. ಅಲ್ಲದೇ, ರಾಜ್ಯದ ನಾನಾ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.

Leave a Reply

ಹೊಸ ಪೋಸ್ಟ್‌