ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಬಾಧಿತವಾದ ಯಲ್ಲಾಪುರ ತಾಲೂಕಿನ ನಾನಾ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಯಲ್ಲಾಪುರ ತಾಲೂಕಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ನಾನಾ ವಿಭಾಗಗಳ ಜೊತೆಗೆ ಕೋವಿಡ್-19 ಲಸಿಕೆ ನೀಡುವ ಕೇಂದ್ರನ್ನೂ ಪರಿಶೀಲಿಸಿದರು.
ನಂತರ ಒಳ ಹಾಗೂ ಹೊರ ರೋಗಿಗಳ ಆರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ಕ್ರಮ ವಹಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬಳಿಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಹಾನಿಗೀಡಾದ ಸ್ಥಳಗಳನ್ನು ವೀಕ್ಷಿಸಿದರು.