ಬಸವ ನಾಡಿನಲ್ಲಿ ನನ್ನ ಗಿಡ ನನ್ನ ಭೂಮಿ ಸಂಘಟನೆಯಿಂದ ಸಂವಾದ

ವಿಜಯಪುರ: ವಿಜಯಪೂರ ನಗರದ ನನ್ನ ಗಿಡ ನನ್ನ ಭೂಮಿ ಸಂಘಟನೆ ವತಿಯಿಂದ ಜ್ಞಾನಯೋಗಾಶ್ರಮದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು.

ಜ್ಞಾನಯೋಗಾಶ್ರಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಪುರ ನಗರದ ಗಣ್ಯರು ಮತ್ತು ಮೂರ್ತಿ ತಯಾರಕರು ಪಾಲ್ಗೋಂಡರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಮಾತನಾಡಿ, ನಾವು ಎಲ್ಲರೂ ಪರಿಸರ ಸ್ನೇಹಿ ಗಣೇಶ ಮೂರ್ತಿಯ ಪ್ರತಿಷ್ಠಾಪಿಸಿ ಪರಿಸರ ಸಂರಕ್ಷಣೆ ಮುಂದಾಗೋಣ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಜ್ಞಾನಯೋಗಾಶ್ರಮದ ನಾನಾ ಸ್ವಾಮೀಜಿಗಳು, ಬಿಜೆಪಿ ಮುಖಂಡರಾದ ಚಂದ್ರಶೇಖರ ಕವಟಗಿ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಉಮೇಶ ವಂದಾಲ, ಮುಖಂಡರಾದ ರಾಘವ ಅಣ್ಣಿಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌