ಸಿಎಂ ದೆಹಲಿ ಪ್ರವಾಸ- ಪ್ರಧಾನಿ, ಕೇಂದ್ರ ಸಚಿವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಭೇಟಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ನವದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಭೇಟಿ ಮಾಡಿ ರಾಜ್ಯಕ್ಕೆಸಂಬಂಧಿಸಿದ ನಾನಾ ವಿಷಯಗಳ ಕುರಿತು ಚರ್ಚೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಸಿಎಂ, ತಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ಅಲ್ಲದೇ, ಪ್ರಧಾನಿಯವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುವುದಾಗಿ ಭರವಸೆ ನೀಡಿದರು. ಸುಮಾರು 40 ನಿಮಿಷಗಳಿಗೂ ಹೆಚ್ಚು ಕಾಲ […]

ಭೂತನಾಳ ಕೆರೆ ಬಳಿ ಉದ್ಯಾನವನ, ವಾಟರ್ ಫ್ರಂಟ್ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ

ವಿಜಯಪುರ: ಭೂತನಾಳ ಕೆರೆ ವ್ಯಾಪ್ತಿಯ ಉದ್ಯಾನವನ ಹಾಗೂ ವಾಟರ್ ಫ್ರಂಟ್ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ನಗರದ ಭೂತನಾಳ ಕೆರೆ ಪಕ್ಕದಲ್ಲಿರುವ ಉದ್ಯಾನವನ ಹಾಗೂ ವಾಟರ್ ಫ್ರಂಟ್ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಉದ್ಯಾನವನ ಹಾಗೂ ವಾಟರ್ ಫ್ರಂಟ್ ಈ ಕಾಮಗಾರಿಗಳನ್ನು ಆಧ್ಯತೆ ಮೇಲೆ ಪೂರ್ಣಗೊಳಿಸುವಂತೆ ಮಹಾನಗರ ಪಾಲಿಕೆಯ ಎಂಜಿನಿಯರ್ ಗೆ ಸೂಚನೆ ನೀಡಿದರು.   ರೂ. 9 ಕೋ. ಅಂದಾಜು ಮೊತ್ತದಲ್ಲಿ ಈ ಕಾಮಗಾರಿಯಲ್ಲಿ ಪಾದಚಾರಿ […]

ನಾನು ಸಿಎಂ ಆಗುವುದನ್ನು ತಡೆಯಲು ಬೇರೆಯವರನ್ನು ಮುಖ್ಯಮಂತ್ರಿ ಮಾಡಿದ್ದಾರೆ- ಯತ್ನಾಳ ವಾಗ್ದಾಳಿ

ವಿಜಯಪುರ: ಪ್ರಾಣ ಹೋದರೂ ಪರವಾಗಿಲ್ಲ. ಯತ್ನಾಲನನ್ನು ಸಿಎಂ ಮಾಡಬಾರದು ಎಂದು ಮಾಜಿ ಸಿಎೞ ಬಿ. ಎಸ್. ಯಡಿಯೂರಪ್ಪ ಕಂಡಿಶನ್ ಹಾಕಿದ್ದರು. ಹೀಗಾಗಿ ನಾನು ಸಿಎಂ ಆಗುವುದನ್ನು ತಡೆಯಲು ಅನನುಭವಿಗಳಿಗೆ ಸಿಎಂ ಮಾಡಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗಡೌ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಾಣ ಹೋದರೂ ಪರವಾಗಿಲ್ಲ, ಯತ್ನಾಳನನ್ನು ಸಿಎಂ ಮಾಡಬಾರದು ಎಂದು ಬಿ. ಎಸ್. ಯಡಿಯೂರಪ್ಪ ಕಂಡಿಶನ್ ಹಾಕಿದ್ದರು. ಹೀಗಾಗಿ ತಾವು […]

ಸಿಎಂ ಆದ ಮೇಲೆ ಮೊದಲ ಬಾರಿಗೆ ದೆಹಲಿಗೆ ತೆರಳಿ ಕೇಂದ್ರ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ಬಸವರಾಜ ಬೊಮ್ಮಾಯಿ

ನವದೆಹಲಿ: ನೂತನ ಸಿಎಂ ಆದ ಬಳಿಕ ಬಸವರಾಜ ಬೊಮ್ಮಾಯಿ ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳಿದ್ದಾರೆ.  ದೆಹಲಿಯಲ್ಲಿ ಕೇಂದ್ರ ಸಚಿವರು ಮತ್ತು ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ ಕೃತಜ್ಞತೆ ಸಲ್ಲಿಸಿದ್ದಾರೆ. ರಕ್ಷಣಾ ಸಚಿವರ ಭೇಟಿ ನವದೆಹಲಿಯಲ್ಲಿ ಮೊದಲಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿದ ಬೊಮ್ಮಾಯಿ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು. ಅಲ್ಲದೇ, ಮಾತುಕತೆ ನಡೆಸಿದರು. ಜಲಶಕ್ತಿ ಸಚಿವರ ಭೇಟಿ ಇದೇ ವೇಳೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ […]

ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದಿಂದ 4.20 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ- ಬಸವ ನಾಡಿನ 10 ಗ್ರಾಮಗಳ ಬೆಳೆ ಜಲಾವೃತ

ವಿಜಯಪುರ: ನೆರೆಯ ಮಹಾರಾಷ್ಟ್ರ ಮತ್ತು ಬೆಳಗಾವಿಯಲ್ಲಿ ಸುರಿದ ಧಾರಾಕಾರ ಮಲೆಯಿಂದಾಗಿ ಬಸವ ನಾಡು ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಷಯಕ್ಕೆ ನೀರಿನ ಒಳ ಮತ್ತು ಹೊರ ಹರಿವು ಮತ್ತಷ್ಟು ಹೆಚ್ಚಾಗಿದೆ. ಕೃಷ್ಣಾ ನದಿಯಲ್ಲಿ ಭಾರಿ ಪ್ರಮಾಮದಲ್ಲಿ ನೀರು ಹರಿದು ಬರುತ್ತಿರುವುದರಿಂದ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಷಯದಿಂದ ಹೊರ ಹರಿವಿನ ಪ್ರಮಾಣವನ್ನು 4.20 ಲಕ್ಷ ಕ್ಯೂಸೆಕ್ ಗೆ ಹೆಚ್ಚಿಸಲಾಗಿದೆ. ಇದರಿಂದಾಗಿ ಅಚ್ಚುಕಟ್ಟು ಪ್ರದೇಶದ ಹತ್ತಾರು ಗ್ರಾಮಗಳ ಕೃಷಿ ಭೂಮಿ ಜಲಾವೃತವಾಗಿದೆ. ಜಲಾಷಯಕ್ಕೆ ಈಗಲೂ 4.20 ಲಕ್ಷ ಕ್ಯೂಸೆಕ್ ನೀರು ಹರಿದು […]