ಬೆಂಗಳೂರಿಗೆ ಬಂದೊಡನೆ ಕೊರೊನಾ ಸೋಂಕು ಹೆಚ್ಚಾಗಿರುವ ಜಿಲ್ಲೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಎರಡು ದಿನಗಳ ಕಾಲ ನವದೆಹಲಿ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರಿಗೆ ಆಗಮಿಸಿದ ತಕ್ಷಣವೇ ಕೊರೊನಾ ಹೆಚ್ಚಾಗಿರುವ ಜಿಲ್ಲೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರು ನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಶಿವಮೊಗ್ಗ, ಉಡುಪಿ ಮತ್ತು ಚಾಮರಾಜನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ […]

ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ ಜಿ ಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಾನಾ ವಿಷಯಗಳ ಕುರಿತು ಚರ್ಚೆ ನಡೆಸಿದರು. ಕಳೆದ ವರ್ಷ ಕೇಂದ್ರ ಸರಕಾರ ರೂ. 12 ಸಾವಿರ ಕೋ. ಜಿ ಎಸ್ ಟಿ ಪರಿಹಾರ ನೀಡಿದೆ. ಇನ್ನೂ ರೂ. 11 ಸಾವಿರ ಕೋ. ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಹಣವನ್ನು ಬಿಡುಗಡೆ ಮಾಡುವ ಕುರಿತು ಸಿಎಂ ಚರ್ಚೆ ನಡೆಸಿದರು. ಈ ವರ್ಷ ಸುಮಾರು ರೂ. 18 ಸಾವಿರ ಕೋ. ಪರಿಹಾರವನ್ನು […]

ಕೇಂದ್ರದಿಂದ ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ನೆರವಿನ ಒಪ್ಪಿಗೆ- ಸಿಎೞ ಬಸವರಾಜ ಬೊಮ್ಮಾಯಿ

ನವದೆಹಲಿ: ಕೊರೊನಾ 3ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ ರೂ. 800 ಕೋ. ಟಿ ರೂ. ಮಂಜೂರು ಮಾಡಲು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಿಳಿಸಿದರು. ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯಕ್ಕೆ 1.50 ಕೋಟಿ ಲಸಿಕೆ […]

ನಿಮ್ಮ ಕರ್ಮಕಾಂಡಗಳನ್ನೂ ಹೊರಗೆಳೆಯುತ್ತೇವೆ- ಪಕ್ಷ ಹೇಗೆ ನಾಶ ಮಾಡುತ್ತಾರೆ ನಾವೂ ನೋಡುತ್ತೇವೆ- ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ನಿಮ್ಮ ಕರ್ಮಕಾಂಡಗಳನ್ನೂ ಹೊರಗೆ ತೆಗೆಯುತ್ತೇವೆ. ನೀವು ಸಚಿವರಾದಾಗ ಏನು ಮಾಡಿದ್ದೀರಿ? ನೆನಪು ಮಾಡಿಕೊಳ್ಳಬೇಕು. ಕೇಂದ್ರದಲ್ಲಿ ನಿಮ್ಮ ವರ್ತನೆ ಏನಿತ್ತು? ಕೇಂದ್ರದಲ್ಲಿ ನೀವು ಸಚಿವರಾಗಿದ್ದಾಗ ನಿಮ್ಮ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ನಿಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದರೆ ರಾಜ್ಯದ ಗತಿ ಏನಾಗುತ್ತಿತ್ತು? ಗೊತ್ತಿಲ್ಲ. ಪುಣ್ಯಕ್ಕೆ ಮಾಡಿಲ್ಲ. ಬೊಮ್ಮಾಯಿ ಅವರಿಗೆ ಸಿಎಂ ಸ್ಥಾನ ನೀಡಿರುವುದು ಬಹಳ ಸಂತಸ ತಂದಿದೆ ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ನಿನ್ನೆ ನೂತನ ಸಿಎಂ, ಸಚಿವ ಸಂಪುಟ […]

ಭೀಮಾ ತೀರದ ಪೊಲೀಸರ ಭರ್ಜರಿ ಕಾರ್ಯಾಚರಣೆ ಇಬ್ಬರ ಬಂಧನ- ರೂ. 9.30 ಲಕ್ಷ ಮೌಲ್ಯದ 20 ಬೈಕ್ ವಶ

ವಿಜಯಪುರ: ವಿಜಯಪುರ ಜಿಲ್ಲೆಯ ಭೀಮಾ ತೀರಷ ಚಡಚಣ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ನೂತನ ಎಸ್ಪಿ ಎಚ್. ಡಿ. ಆನಂದ ಕುಮಾರ, ಚಡಚಣ ಪೊಲೀಸರು 20 ಬೈಕ್ ಗಳನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಜೀರಂಕಲಗಿ ಗ್ರಾಮದ 21 ವರ್ಷದ ರೇವಣಸಿದ್ದ ಗುರಪ್ಪಾ ಬಿರಾದಾರ ಮತ್ತು ಇಂಡಿ ತಾಲೂಕಿನ ಕೂಡಗಿ ಗ್ರಾಮದ 30 ವರ್ಷದ ಸುರೇಶ ರಾವುತರಾಯ ಬಿರಾದಾರ ಎಂಬುವರರನ್ನು ಬಂಧಿಸಲಾಗಿದೆ. ಬಂಧಿತ […]

ನವದೆಹಲಿಯಲ್ಲಿ ಮಹಾತ್ಮಾ ಗಾಂಧಿ, ವಾಜಪೇಯಿ ಸಮಾಧಿಗಳಿಗೆ ಸಿಎಂ ಭೇಟಿ, ನಮನ ಸಲ್ಲಿಕೆ

ನವದೆಹಲಿ : ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ತೆರಳಿ ನಮನ ಸಲ್ಲಿಸಿದರು. ) ಬೆಳಿಗ್ಗೆ ರಾಜಘಾಟನಲ್ಲಿರುವ ಮಹಾತ್ಮಾ ಗಾಂಧಿ ಸಮಾಧಿಗೆ ತೆರಳಿ ನಮನ ಸಲ್ಲಿಸಿದರು.  ಅಲ್ಲದೇ, ಸಮಾಧಿಗೆ ಸುತ್ತು ಹಾಕಿದರು.  ಅಲ್ಲದೇ, ಸಮಾಧಿ ಎದುರು ಕುಳಿತು ಪ್ರಾರ್ಥನೆ ಸಲ್ಲಿಸಿದರು. ಅಲ್ಲದೇ, ರಾಷ್ಟ್ರೀಯ ಸ್ನೃತಿಯಲ್ಲಿರುವ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗಳಿಗೆ ಬೇಟಿ ನೀಡಿ ನಮನ ಸಲ್ಲಿಸಿದರು.