ಬೆಂಗಳೂರು: ಎರಡು ದಿನಗಳ ಕಾಲ ನವದೆಹಲಿ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರಿಗೆ ಆಗಮಿಸಿದ ತಕ್ಷಣವೇ ಕೊರೊನಾ ಹೆಚ್ಚಾಗಿರುವ ಜಿಲ್ಲೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರು ನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಶಿವಮೊಗ್ಗ, ಉಡುಪಿ ಮತ್ತು ಚಾಮರಾಜನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ. ವಿ. ರಮಣರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಉಪಸ್ಥಿತರಿದ್ದರು.