ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಾನಾ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಕಳೆದ ವರ್ಷ ಕೇಂದ್ರ ಸರಕಾರ ರೂ. 12 ಸಾವಿರ ಕೋ. ಜಿ ಎಸ್ ಟಿ ಪರಿಹಾರ ನೀಡಿದೆ. ಇನ್ನೂ ರೂ. 11 ಸಾವಿರ ಕೋ. ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಹಣವನ್ನು ಬಿಡುಗಡೆ ಮಾಡುವ ಕುರಿತು ಸಿಎಂ ಚರ್ಚೆ ನಡೆಸಿದರು.
ಈ ವರ್ಷ ಸುಮಾರು ರೂ. 18 ಸಾವಿರ ಕೋ. ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ ಮಾಡುವುದಾಗಿ ಕೇಂದ್ರ ಸರಕಾರ ತಿಳಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಅಡಚಣೆ ಎದುರಾಗಿರುವುದರಿಂದ ಇದನ್ನು ಕೂಡಲೇ ಬಿಡುಗಡೆ ಮಾಡುವಂತೆ ಮನವಿ ಸಿಎಂ ಮನವಿ ಮಾಡಿದರು. ಅಲ್ಲದೆ, ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅಗತ್ಯವಿರುವ ಅನುದಾನ ಬಿಡುಗಡೆಯ ಕುರಿತೂ ಕೂಡ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವರ ಗಮನ ಸೆಳೆದರು.