ನವದೆಹಲಿ: ಕೊರೊನಾ 3ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ ರೂ. 800 ಕೋ. ಟಿ ರೂ. ಮಂಜೂರು ಮಾಡಲು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಿಳಿಸಿದರು.
ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯಕ್ಕೆ 1.50 ಕೋಟಿ ಲಸಿಕೆ ಪೂರೈಸಲು ಕೋರಿಕೆ ಸಲ್ಲಿಸಲಾಗಿದೆ. 1 ಕೋಟಿ ಲಸಿಕೆ ಪೂರೈಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ. ಇದರಿಂದ ರಾಜ್ಯದಲ್ಲಿ ಪ್ರತಿದಿನ 2 ರಿಂದ 3 ಲಕ್ಷ ಜನರಿಗೆ ಲಸಿಕೆ ನೀಡಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಕೊರೊನಾ 3ನೇ ಅಲೆ ನಿಯಂತ್ರಣ. ಲಸಿಕೆ ಅಭಿಯಾನ ಹಾಗೂ ನೆರೆಯ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಗಡಿಯಲ್ಲಿ ಪ್ರವೇಶ ನಿಯಂತ್ರಿಸುವ ಕುರಿತು ಸಧ್ಯದಲ್ಲಿಯೇ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.