ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಭೇಟಿ ಮಾಡಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.  

ಸಿಎಂ ಆದ ಬಳಿಕ ಇದೇ ಮೊದಲ ಬಾರಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ಬೆಂಗಳೂರಿನ ಪದ್ಮನಾಭನಗರ ನಿವಾಸಕ್ಕೆ ತೆರಳಿದ ಬಸವರಾಜ ಬೊಮ್ಮಾಯಿ ಮಾಜಿ ಪ್ರಧಾನಿ ಪಾದ ಸ್ಪರ್ಶಿಸಿ ಆಶೀರ್ವಾದ ಪಡೆದರು. ಬಳಿಕ ಹಾರ ಹಾಕಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಕೂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಸುಮಾರು ಹೊತ್ತು ಉಭಯ ನಾಯಕರು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ತಮಗೆ ಸಹಕಾರ ನೀಡುವಂತೆ ಸಿಎಂ ಮನವಿ ಮಾಡಿದರು. ಆಗ, ದೇವೇಗೌಡರು ಉತ್ತಮವಾಗಿ ಜನಪರ ಆಡಳಿತ ನೀಡುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಮತ್ತು ಎಚ್. ಡಿ. ದೇವೇಗೌಡ ಅವರ ಪುತ್ರ ರೇವಣ್ಣ, ಮಾಜಿ ಸಚಿವ ವಿ. ಸೋಮಣ್ಣ ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಮುಂಚೆ ಜನತಾ ದಳದಲ್ಲಿದ್ದು, ನಂತರ ಬಿಜೆಪಿ ಸೇರಿ ಸಚಿವರಾಗಿ ಹಾಗೂ ಈಗ ಮುಖ್ಯಮಂತ್ರಿಯಾಗಿದ್ದಾರೆ.

Leave a Reply

ಹೊಸ ಪೋಸ್ಟ್‌