ವಿಜಯಪುರ: ವಿಜಯಪುರ ನಗರದ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಂಗಮಂದಿರದ ದುರಸ್ತಿ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಿವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹಸ್ತಾಂತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಸೂಚನೆ ನೀಡಿದರು.
ಅಲ್ಲದೇ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಛೇರಿಯ ಸ್ಥಳ ಪರಿಶೀಲನೆ ನಡೆಸಿದ ಅವರು, ಕಚೇರಿಯ ಆವರಣದಲ್ಲಿ ಒಳಚರಂಡಿ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿನೆ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ರಾಜು ಮುಜುಮದಾರ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮಲಜಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆಶಾಪುರೆ ಉಪಸ್ಥಿತರಿದ್ದರು.