ತುಮಕೂರಿಗೆ ತೆರಳಿ ಶ್ರೀ ಸಿದ್ಧಗಂಗಾ ಸ್ವಾಮೀಜಿಗಳ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

ತುಮಕೂರು: ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ತುಮಕೂರಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಮಠದ ಆವರಣದಲ್ಲಿರುವ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ ಅವರು, ಶ್ರೀ ಸಿದ್ದಲಿಂಗ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಮಂತ್ರ ಘೋಷದೊಂದಿಗೆ ಶ್ರೀಗಳು ಮುಖ್ಯಮಂತ್ರಿಗಳಿಗೆ ಶುಭಾಶೀರ್ವಾದ ಮಾಡಿದರು. ಅಲ್ಲದೇ, ಈ ಸಂದರ್ಭದಲ್ಲಿ ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು […]

ಬೆಂಗಳೂರಿನಲ್ಲಿ ಹರಿಹರ ಪಂಚಮಸಾಲಿ ಪೀಠದ ಸ್ವಾಮೀಜಿ ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಬೆಂಗಳೂರಿನಲ್ಲಿ ಹೆಬ್ಬಾಳದಲ್ಲಿ ಶ್ರೀಗಳನ್ನು ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ, ಸ್ವಾಮೀಜಿಗಳನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಶ್ರೀಗಳು ಸಿಎಂ ಅವರನ್ನು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಮುರುಗೇಶ ನಿರಾಣಿ, ಡಾ. ಕೆ ಸುಧಾಕರ, ಶಾಸಕ ರೇಣುಕಾಚಾರ್ಯ ಅವರನ್ನೂ ಶ್ರೀ ವಚನಾನಂದ ಸ್ವಾಮೀಜಿ ಆಶೀರ್ವದಿಸಿದರು.

ಬಸವ ನಾಡಿನಲ್ಲಿ ಗಮನ ಸೆಳೆಯುತ್ತಿದೆ ಅಣ್ಣ-ತಂಗಿಯರ ಸಂಬಂಧವನ್ನು ಪರಿಸರದೊಂದಿಗೆ ಬೆಸೆಯುವ ವಿಕಲ ಚೇತನರ ಸಂಸ್ಥೆಯ ವಿನೂತನ ಪ್ರಯತ್ನ

ವಿಜಯಪುರ: ರಕ್ಷಾ ಬಂಧನ ಅಣ್ಣ-ತಂಗಿಯರ ಬಾಂಧವ್ಯವನ್ನು ಬೆಸೆಯುವ ಮಧುರ ಹಬ್ಬ. ಈ ರಕ್ಷಾ ಬಂಧನವನ್ನು ಪರಿಸರದೊಂದಿಗೆ ಬೆಸಯುವ ವಿನೂತನ ಪ್ರಯತ್ನಕ್ಕೆ ಬಸವ ನಾಡಿನ ವಿಕಲ ಚೇತನ ಕಲ್ಯಾಣ ಸಂಸ್ಥೆ ಮುಂದಾಗಿದೆ.   ಇಲ್ಲಿ ಸ್ವ ಕಾರ್ಯದ ಜೊತೆಗೆ ಸ್ವಾಮಿ ಕಾರ್ಯ ಮಾತ್ರವಲ್ಲ ಪರಿಸರ ಕಾರ್ಯಕ್ಕೂ ಸಂಬಂಧ ಬೆಸೆಯುವ ಮೂಲಕ ಇವರು ನಡೆಸುತ್ತಿರುವ ಈ ಕಾಯಕ ಗಮನ ಸೆಳೆದಿದೆ. ರಕ್ಷಾ ಬಂಧನವೆಂದರೆ ಸಾಕು ತರಹೇವಾರಿ ರಾಖಿಗಳು ಎಲ್ಲೆಗೆ ರಾರಾಜಿಸುತ್ತಿರುವತ್ತವೆ. ಆದರೆ, ರಕ್ಷಾ ಬಂದನ ಹಬ್ಬ ಮುಗಿದ ಬಳಿಕ ಕೈಗೆ ಸಹೋದರಿಯರು […]

ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಮಹಾರಾಷ್ಟ್ರದ ನೀರಾವರಿ ಸಚಿವ ಜಯಂತ ಪಾಟೀಲ- ಜಲ ವಿಷಯಗಳ ಕುರಿತು ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ ಪಾಟೀಲ ಭೇಟಿ ಮಾಡಿದರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ‌ ಭೇಟಿ ಮಾಡಿದ ಅವರು, ಉಭಯ ರಾಜ್ಯಗಳ ನಡುವಿನ ಜಲ ವಿಷಯಗಳ ಕುರಿತು ಪರಸ್ಪರ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವ ಮುರುಗೇಶ ನಿರಾಣಿ ಉಪಸ್ಥಿತರಿದ್ದರು. ಬೆಳಿಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಶರದ ಪವಾರ ಚರ್ಚೆ ಈ ಮಧ್ಯೆ, ಬೆಳಿಗ್ಗೆ ಮಹಾರಾಷ್ಟ್ರದ ಮಾಜಿ ಸಿಎಂ ಮತ್ತು ಎನ್ ಸಿ ಪಿ ಮುಖ್ಯಸ್ಥ ಶರದ […]

ಆ. 23 ರಿಂದ , 9, 10, ಪಿಯು ತರಗತಿಗಳು ಆರಂಭ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಹೈಸ್ಕೂಲ್ ಮತ್ತು ಪಿಯು ಕಾಲೇಜು ಭೌತಿಕ ತರಬೇತಿಗಳನ್ನು ಆ. 23 ರಿಂದ ಪುನಾರಂಭಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸ್ಥಿತಿಗತಿ ಕುರಿತು ಕೋವಿಡ್ ಟಾಸ್ಕಫೋರ್ಸ್ ಸಮಿತಿ ಮತ್ತು ಆರೋಗ್ಯ ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆ. 23 ರಿಂದ ಎರಡು ಹಂತಗಳಲ್ಲಿ ಶಾಲೆ, ಕಾಲೇಜುಗಳನ್ನು ಪುನಾರಂಭಿಸಲು ನಿರ್ಧರಿಸಲಾಗಿದೆ. ಮೊದಲ ಹಂತದಲ್ಲಿ 9 ರಿಂದ 12ನೇ ತರಗತಿಯ ಶಾಲೆ ಮತ್ತು […]

ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಪ್ಯೂ, ರಾತ್ರಿ ಕರ್ಪ್ಯೂ ಒಂದು ಗಂಟೆ ಹೆಚ್ಚಳ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಮಹಾರಾಷ್ಟ್ರ ಮತ್ತು ಕೇರಳ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಗೆ ನಿರ್ಧರಿಸಿದೆ. ಅಲ್ಲದೆ, ರಾಜ್ಯಾದ್ಯಂತ ಈ ಮುಂಚೆಯಿದ್ದ ರಾತ್ರಿ ಕರ್ಪ್ಯೂವನ್ನು ಒಂದು ಗಂಟೆ ಹೆಚ್ಚುಗೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬೆಂಗಳೂರಿನಲ್ಲಿ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಕೋವಿಡ್ ಟಾಸ್ಕ್ ಫೋರ್ಸ್, ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ […]

ಮಹಾರಾಷ್ಟ್ರ ಮಾಜಿ ಸಿಎಂ ಶರದ ಪವಾರ ಅವರಿಂದ ರಾಜ್ಯ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಬೆಂಗಳೂರು: ಮಹಾರಾಷ್ಟ್ರದ ಮಾಜಿ ಸಿಎಂ ಮತ್ತು ಎನ್ ಸಿ ಪಿ ಮುಖ್ಯಸ್ಥ ಶರದ ಪವಾರ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರನ್ನು ಸೌಜನ್ಯಯುತವಾಗಿ ಭೇಟಿ ಮಾಡಿದ ಶರದ ಪವಾರ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ ಮತ್ತು ಡಾ. ಕೆ. ಸುಧಾಕರ ಉಪಸ್ಥಿತರಿದ್ದರು.

ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿಗೆ ಅಳವಡಿಸುವುದು ಅಗತ್ಯ- ಸಿಎಂ ಬಸವರಾಜ ಎಸ್. ಬೊಮ್ಮಾಯಿ

ಬೆಂಗಳೂರು : ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಅಳವಡಿಸುವುದರಿಂದ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತವೆ. ಅಲ್ಲದೇ, ನ್ಯಾಯಾಂಗ ಇನ್ನಷ್ಟು ಮಾನವೀಯ ಹಾಗೂ ಜನಸ್ನೇಹಿಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ವಿಜ್ಞಾನೇಶ್ವರ ಅಧ್ಯಯನ ಪೀಠವು ಏರ್ಪಡಿಸಿದ್ದ ಕರ್ನಾಟಕದಲ್ಲಿ ಮಿತಾಕ್ಷರ, ವಚನ ದಾಸ ಮತ್ತು ಜಾನಪದ ಸಾಹಿತ್ಯದಲ್ಲಿ ಕಾನೂನಿನ ಸಮಾಜಮುಖಿ ಮೌಲ್ಯಗಳು- ಒಂದು ಪರಿಶೋಧನೆ ಕುರಿತ ವೆಬಿನಾರ್ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕದ ವಚನ, ದಾಸ ಸಾಹಿತ್ಯ ಹಾಗೂ ಜಾನಪದ […]

ಕಾನೂನು ವಿವಿ ವಿಜ್ಞಾನೇಶ್ವರ ಅಧ್ಯಯನ ಪೀಠದಿಂದ ವೆಬಿನಾರ ಕಾರ್ಯಕ್ರಮ- ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ

ಬೆಂಗಳೂರು: ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿಜ್ಞಾನೇಶ್ವರ ಅಧ್ಯಯನ ಪೀಠದ ವತಿಯಿಂದ ಆಯೋಜಿಸಲಾದ ಕರ್ನಾಟಕದಲ್ಲಿ ಮಿತಾಕ್ಷರ, ವಚನ, ದಾಸ ಮತ್ತು ಜಾನಪದ ಸಾಹಿತ್ಯದಲ್ಲಿ ಕಾನೂನಿನ ಸಮಾಜಮುಖಿ ಮೌಲ್ಯಗಳು: ಒಂದು ಪರಿಶೋಧನೆ ವೆಬಿನಾರ್ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆನ್ ಲೈನ್ ಮೂಲಕ ಬೆಂಗಳೂರಿನಲ್ಲಿ ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಸಚಿವರಾದ ವಿ. ಸೋಮಣ್ಣ, ಡಾ. ಕೆ. ಸುಧಾಕರ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನ್ಯಾ. ಶಿವರಾಜ ಪಾಟೀಲ, ನ್ಯಾ. ಬಿ. ಎನ್. ಕೃಷ್ಣ, ಕಾನೂನು ವಿವಿ […]

ಮನಗೂಳಿ ಹಿರೇಮಠಕ್ಕೆ ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ಭೇಟಿ

ವಿಜಯಪುರ: ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಹಿರೇಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಠದ ಶ್ರೀ ಅಭಿನವ ಸಂಗನಬಸವ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ಅವರು, ಮಠದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ವಿಜಯಪುರ ಜಿಲ್ಲೆಯಲ್ಲಿ ಮನಗೂಳಿ ಹಿರೇಮಠ ಇತಿಹಾಸ ಪ್ರಸಿದ್ಧವಾಗಿದೆ. ಈ ಮಠದ ಹಿಂದಿನ ಪೂಜ್ಯರಿಗೆ ತಮಗೂ ಬಹಳ ಆತ್ಮೀಯತೆ ಇತ್ತು. ಈಗ ಶ್ರೀ ಅಭಿನವ ಸಂಗನ ಬಸವ ಶಿವಾಚಾರ್ಯರು ಈ ಮಠದ ಜೀರ್ಣೋದ್ದಾರ ಮಾಡುತ್ತಿದ್ದಾರೆ. […]