ಬೆಂಗಳೂರು: ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿಜ್ಞಾನೇಶ್ವರ ಅಧ್ಯಯನ ಪೀಠದ ವತಿಯಿಂದ ಆಯೋಜಿಸಲಾದ ಕರ್ನಾಟಕದಲ್ಲಿ ಮಿತಾಕ್ಷರ, ವಚನ, ದಾಸ ಮತ್ತು ಜಾನಪದ ಸಾಹಿತ್ಯದಲ್ಲಿ ಕಾನೂನಿನ ಸಮಾಜಮುಖಿ ಮೌಲ್ಯಗಳು: ಒಂದು ಪರಿಶೋಧನೆ ವೆಬಿನಾರ್ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆನ್ ಲೈನ್ ಮೂಲಕ ಬೆಂಗಳೂರಿನಲ್ಲಿ ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಸಚಿವರಾದ ವಿ. ಸೋಮಣ್ಣ, ಡಾ. ಕೆ. ಸುಧಾಕರ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನ್ಯಾ. ಶಿವರಾಜ ಪಾಟೀಲ, ನ್ಯಾ. ಬಿ. ಎನ್. ಕೃಷ್ಣ, ಕಾನೂನು ವಿವಿ ಕುಲಪತಿ ಪ್ರೊ. ಈಶ್ವರ ಭಟ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಗಿರೀಶ ಹೊಸೂರು ವೆಬಿನಾರ್ ನಲ್ಲಿ ಉಪಸ್ಥಿತರಿದ್ದರು.