ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಪ್ಯೂ, ರಾತ್ರಿ ಕರ್ಪ್ಯೂ ಒಂದು ಗಂಟೆ ಹೆಚ್ಚಳ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಮಹಾರಾಷ್ಟ್ರ ಮತ್ತು ಕೇರಳ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಗೆ ನಿರ್ಧರಿಸಿದೆ. ಅಲ್ಲದೆ, ರಾಜ್ಯಾದ್ಯಂತ ಈ ಮುಂಚೆಯಿದ್ದ ರಾತ್ರಿ ಕರ್ಪ್ಯೂವನ್ನು ಒಂದು ಗಂಟೆ ಹೆಚ್ಚುಗೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬೆಂಗಳೂರಿನಲ್ಲಿ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಕೋವಿಡ್ ಟಾಸ್ಕ್ ಫೋರ್ಸ್, ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

 

ಈ ಮುಂಚೆ ರಾತ್ರಿ 10 ರಿಂದ ಬೆಳಿಗ್ಗೆ 5ರ ವರೆಗೆ ಜಾರಿಯಲ್ಲಿದ್ದ ರಾತ್ತಿ ಕರ್ಪ್ಯೂವನ್ನು ಒಂದು ಗಂಟೆ ಹೆಚ್ಚಿಸಿ ರಾತ್ರಿ 9 ರಿಂದ ಬೆ. 5ರ ವರಗೆ ಜಾರಿ ಮಾಡಲಾಗುತ್ತಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದಿನ ಸಭೆಯಲ್ಲಿ ಸಚಿವರಾದ ಡಾ. ಸಿ ಎನ್ ಅಶ್ವಥ್ ನಾರಾಯಣ, ಡಾ. ಕೆ. ಸುಧಾಕರ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ, ತಜ್ಞ ವೈದ್ಯರಾದ ಡಾ. ಸಿ. ಎನ್. ಮಂಜುನಾಥ, ಡಾ. ಸುದರ್ಶನ, ಡಾ. ದೇವಿಪ್ರಸಾದ ಶೆಟ್ಟಿ ಸೇರಿದಂತೆ ನಾನಾ ಇಲಾಖೆಗಳ ಹಿರಿಯ ಅಧಿಕಾರಿಗಳು, ವೈದ್ಯರು ಸಭೆಯಲ್ಲಿ ಭಾಗವಿಸಿದ್ದರು.

Leave a Reply

ಹೊಸ ಪೋಸ್ಟ್‌