ಬೆಂಗಳೂರು: ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಆಶೀರ್ವಾದ ಪಡೆದರು.
ಬೆಂಗಳೂರಿನಲ್ಲಿ ಹೆಬ್ಬಾಳದಲ್ಲಿ ಶ್ರೀಗಳನ್ನು ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ, ಸ್ವಾಮೀಜಿಗಳನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಶ್ರೀಗಳು ಸಿಎಂ ಅವರನ್ನು ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಮುರುಗೇಶ ನಿರಾಣಿ, ಡಾ. ಕೆ ಸುಧಾಕರ, ಶಾಸಕ ರೇಣುಕಾಚಾರ್ಯ ಅವರನ್ನೂ ಶ್ರೀ ವಚನಾನಂದ ಸ್ವಾಮೀಜಿ ಆಶೀರ್ವದಿಸಿದರು.