ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಮಹಾರಾಷ್ಟ್ರದ ನೀರಾವರಿ ಸಚಿವ ಜಯಂತ ಪಾಟೀಲ- ಜಲ ವಿಷಯಗಳ ಕುರಿತು ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ ಪಾಟೀಲ ಭೇಟಿ ಮಾಡಿದರು.


ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ‌ ಭೇಟಿ ಮಾಡಿದ ಅವರು, ಉಭಯ ರಾಜ್ಯಗಳ ನಡುವಿನ ಜಲ ವಿಷಯಗಳ ಕುರಿತು ಪರಸ್ಪರ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಸಚಿವ ಮುರುಗೇಶ ನಿರಾಣಿ ಉಪಸ್ಥಿತರಿದ್ದರು.

ಬೆಳಿಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಶರದ ಪವಾರ ಚರ್ಚೆ

ಈ ಮಧ್ಯೆ, ಬೆಳಿಗ್ಗೆ ಮಹಾರಾಷ್ಟ್ರದ ಮಾಜಿ ಸಿಎಂ ಮತ್ತು ಎನ್ ಸಿ ಪಿ ಮುಖ್ಯಸ್ಥ ಶರದ ಪವಾರ ಕೂಡ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ನಾನಾ ವಿಷಯಗಳ ಕುರಿತು ಚರ್ಚೆ ನಡೆಸಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವಿನ ನೀರು ಹಂಚಿಕೆ ವಿಷಯದ ಕುರಿತು ಸಮಾಲೋಚನೆ ನಡೆಸಲಾಯಿತು.

ಪ್ರವಾಹದ ಸಂದರ್ಭದಲ್ಲಿ ಪರಸ್ಪರ ಸಹಕಾರ ನೀಡಬೇಕು. ಅಲ್ಲದೇ, ಪರಸ್ಪರ ಮಾತುಕತೆ ಮೂಲಕ ಸೌಹಾರ್ದಯುತವಾಗಿ ಜಲ ವಿವಾದಗಳನ್ನು ಬಗೆಹರಿಸಿಕೊಳ್ಳುವ ಸಂಬಂಧ ಶರದ ಪವಾರ ಮತ್ತು ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಿದರು. ಉಭಯ ರಾಜ್ಯಗಳ ನಡುವಿನ ಅಂತಾರಾ,ಜ್ಯ ಜಲ ವಿಷಯ ಮತ್ತು ನದಿ ನೀರು ಹಂಚಿಕೆ ಕುರಿತು ವಿಸ್ತೃತ ಚರ್ಚೆ ನಡೆಸಲು ಶೀಘ್ರದಲ್ಲಿ ಸಭೆ ನಡೆಸಲು ಸಹಮತ ಕೂಡ ವ್ಯಕ್ತಪಡಿಸಿದ ಉಭಯ ನಾಯಕರು, ಈ ಕುರಿತಂತೆ ನವದೆಹಲಿಯಲ್ಲಿ ಸಭೆ ನಿಗದಿ ಮಾಡುವ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿದರು.

Leave a Reply

ಹೊಸ ಪೋಸ್ಟ್‌