ಭೀಮಾ ತೀರದ ತಾರಾಪುರ ಗ್ರಾಮಸ್ಥರಿಗೆ ದಶಕದ ಬೇಡಿಕೆ ಈಡೇರಿಸಿದ ಸಚಿವೆ ಶಶಿಕಲಾ ಜೊಲ್ಲೆ, ಡಿಸಿ, ಇಂಡಿ ಎಸಿ
ವಿಜಯಪುರ: ಭೀಮಾ ತೀರದ ತಾರಾಪುರ ಗ್ರಾಮಸ್ಥರು ಈಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ದಶಕಗಳಿಂದ ಪ್ರವಾಹ ಬಂದರೆ ಸಾಕು ಸಂಕಷ್ಟಕ್ಕೆ ಸಿಲುಕುತ್ತಿದ್ದ ಇಲ್ಲಿನ ಗ್ರಾಮಸ್ಥರು ಸ್ಥಳಾಂತರ ನಿವೇಶನ ಹಂಚಿಕೆ ವಿವಾದದಿಂದಾಗಿ ಗೋಲಾಡುತ್ತಲೇ ಇದ್ದರು. ಆದರೆ, ಈಗ ಕಳೆದ ವರ್ಷ ನೀಡಿದ ಭರವಸೆಯನ್ನು ಸಚಿವೆ ಶಶಿಕಲಾ ಜೊಲ್ಲೆ ಈಡೇರಿಸುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದಾರೆ. ಭೀಮಾ ನದಿ ಪ್ರವಾಹಕ್ಕೆ ಸಿಲುಕಿ ಬದಕು ಕಳೆದುಕೊಂಡಿದ್ದ ತಾರಾಪುರ ಗ್ರಾಮದ ನಿರಾಶ್ರಿತರಿಗೆ ಹೊಸ ನಿವೇಶನಗಳ ಹಕ್ಕು ಪತ್ರಗಳನ್ನು ವಿತರಿಸುವ ಮೂಲಕ ಮುಜರಾಯಿ, ಹಜ್ ಮತ್ತು […]
ಭಾರತ ಬಿಟ್ಟು ತೊಲಗಿ ಚಳವಳಿ ಸ್ಮರಣೆ- ಡಾ. ಗಂಗಾಧರ ಸಂಬಣ್ಣಿ ನೇತತ್ವದಲ್ಲಿ ಕಾಂಗ್ರೆಸ್ ಪಥಸಂಚಲನ
ವಿಜಯಪುರ: ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಅಂತಿಮ ಹೋರಾಟ ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಚಳವಳಿಯ 79ನೇ ವರ್ಷಾಚರಣೆ ವಿಜಯಪುರದಲ್ಲಿ ನಡೆಯಿತು. ವಿಜಯಪುರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸೇವಾದಳದ ಜಿಲ್ಕಾಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಥ ಸಂಚಲನ ನಡೆಸಿದರು. ವಿಜಯಪುರ ನಗರದ ಕೋರ್ಟಗ ಬಳಿ ಇರುವ ದೇವರಾಜ ಅರಸ ವೃತ್ತದಿಂದ ಜಿಲ್ಲಾ ಕಾಂಗ್ರೆಸ್ ಕಚೇರಿವರೆಗೆ ಕೈಯಲ್ಲಿ ಕಾಂಗ್ರೆಸ್ ಧ್ವಜವನ್ನು ಹಿಡಿದ ಮುಖಂಡರು ಮತ್ತು ಕಾರ್ಯಕರ್ತರು ಜಾಥಾದಲ್ಲಿ […]
ಕೇಂದ್ರ ಮೇಕೆದಾಟು ಯೋಜನೆಗೆ ಶೀಘ್ರದಲ್ಲಿ ಅನುಮೋದನೆ ನೀಡಲಿದೆ- ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ
ಮೈಸೂರು: ಮೇಕೆದಾಟು ಯೋಜನೆಯ ಡಿ ಪಿ ಆರ್ ಗೆ ಕೇಂದ್ರ ಸರಕಾರ ಶೀಘ್ರದಲ್ಲಿ ಅನುಮೋದನೆ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರು ಪ್ರವಾಸದಲ್ಲಿರುವ ಅವರು, ನಾಡದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಪ್ರತಿಕ್ರಿಯೆ ಮಾತನಾಡಿದರು. ಮೇಕೆದಾಟು ಯೋಜನೆಯ ಡಿ ಪಿ ಆರ್ ಅನ್ನು ಕೇಂದ್ರ ಜಲ ಆಯೋಗಕ್ಕೆ ಈಗಾಗಲೇ ಸಲ್ಲಿಸಲಾಗಿದೆ. ಕಳೆದ ಬಾರಿ ದೆಹಲಿಗೆ ತೆರಳಿದ್ದಾಗ ಈ ಯೋಜನೆಗೆ ಒಪ್ಪಿಗೆ ನೀಡುವ ಭರವಸೆ ದೊರೆತಿದೆ. ಇದಕ್ಕೆ ಕೆಲವು […]
ಖಾತೆಯ ಬಗ್ಗೆ ಕ್ಯಾತೆ ತೆಗೆಯದೆ ಜನಸೇವೆಗೆ ಮಹತ್ವ ನೀಡುವುದು ಒಳ್ಳೆಯದು- ಸಚಿವೆ ಶಶಿಕಲಾ ಜೊಲ್ಲೆ
ವಿಜಯಪುರ: ಖಾತೆ ಕುರಿತು ಅಸಮಾಧಾನ ವ್ಯಕ್ತ ಪಡಿಸುವುದು ಅವರವರಿಗೆ ಬಿಟ್ಟ ವಿಚಾರ. ಕೆಲಸ ಮಾಡುವವರಿಗೆ ಯಾವ ಖಾತೆ ಯಾದರೇನು? ಎಂದು ಮುಜರಾಯಿ, ಹಜ್ ಮತ್ತು ವಕ್ಪ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ವಿಜಯಪುರದಲ್ಲಿ ಗ್ರಾಮದೇವತೆ ಶ್ರೀ ಸಿದ್ಧೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಕೆಲಸ ಮಾಡುವ ಮತ್ತು ಜನರಿಗೆ ಸ್ಪಂದನೆ ಮಾಡುವ ಇಚ್ಛೆ ಇದ್ದರೆ ಯಾವ ಖಾತೆಯಾದರೇನು? ಕೆಲಸ ಮಾಡಬಹುದು ಎಂದು ಖಾತೆ ವಿಚಾರವಾಗಿ ಅಸಮಾಧಾನಗೊಂಡಿರುವ ಸಚಿವರಿಗೆ ಸಚಿವೆ ಶಶಿಕಲಾ […]