ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹ- ವಿಜಯಪುರದಲ್ಲಿ ಅಖಿಲ ಭಾರತ ಯುವಜನ ಹೋರಾಟ ಸಮಿತಿ ಪ್ರತಿಭಟನೆ

ವಿಜಯಪುರ: ಕ್ವಿಟ್ ಇಂಡಿಯಾ ಚಳವಳಿಯ ವಾರ್ಷಿಕೋತ್ಸವದ ಅಂಗವಾಗಿ ವಿಜಯಪುರ ನಗರದಲ್ಲಿ ಅಖಿಲ ಭಾರತ ಯುವಜನ ಹೋರಾಟ ಸಮಿತಿ ಅಖಿಲ ಭಾರತ ಬೇಡಿಕೆ ದಿನ ಆಚರಿಸಿ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯಿ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ, ಸರಕಾರಿ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ ಅವುಗಳನ್ನು ಭರ್ತಿ ಮಾಡುತ್ತಿಲ್ಲ. ಕೆಲವು ಹುದ್ದೆಗಳಿಗೆ ವರ್ಷಾನುಗಟ್ಟಲೇ ನೇಮಕಾತಿ ಪ್ರಕ್ರಿಯೆ ನಡೆಸುವ ಕೆಪಿಎಸ್ಸಿಯಲ್ಲಿ ವ್ಯಾಪಕ ಬ್ರಷ್ಟಾಚಾರ ನಡೆದಿದೆ. ಆದ್ದರಿಂದ ಸರಕಾರ ಈ ನಿಟ್ಟಿನಲ್ಲಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು […]

ವಿಜಯಪುರ ನಗರದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಯಲ್ಲಿ ಶೇ 100 ಪಲಿತಾಂಶ

ವಿಜಯಪುರ: ವಿಜಯಪುರ ನಗರದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಶಾಲೆ ಎಂದೇ ಖ್ಯಾತವಾಗಿರುವ ರವೀಂದ್ರನಾಥ ಠಾಗೋರ್ ಶಾಲೆಯಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ಯಲ್ಲಿ ಶೇ. 100 ಪಲಿತಾಂಶ ಬಂದಿದೆ. ಛತ್ರಪತಿ ಶಿವಾಜಿ ಮಹಾರಾಜ ಎಜ್ಯುಕೇಷನ್ ಸೊಸೈಟಿಯ ರವೀಂದ್ರನಾಥ ಠಾಗೋರ ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳು ಪಾಸಾಗಿದ್ದಾರೆ.   ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸ್ಥೆಯ ಅಧ್ಯಕ್ಷ ಶಿವಾಜಿ ಗಾಯಕವಾಡ ತಮ್ಮ ಶಾಲೆಯಲ್ಲಿ 136 ವಿದ್ಯಾರ್ಥಿಗಳಲ್ಲಿ 45 ಡಿಸ್ಟಿಂಕ್ಷನ್ ಪಡೆದಿದ್ದಾರೆ. […]

ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವುದು ಸರಕಾರದ ಮೊದಲ ಆದ್ಯತೆಯಾಗಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ತಮ್ಮ ಸರಕಾರದ ಮೊದಲ ಆದ್ಯತೆಯಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರದ ಆದ್ಯತೆಗಳನ್ನು ತಿಳಿಸಿಲು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಲಹೆ, ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಲೂರಿನಲ್ಲಿ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯ ಪೊಲೀಸರು ದಕ್ಷ ಮತ್ತು ಪ್ರಾಮಾಣಿಕತೆಗೆ ದೇಶದಲ್ಲಿಯೇ ಹೆಸರು ಮಾಡಿದ್ದಾರೆ. ದಕ್ಷತೆ ಮತ್ತು ಪ್ರಾಮಾಣಿಕತೆ ಇನ್ನೂ ಹೆಚ್ಚಿನ ರೀತಿಯಲ್ಲಾಗಬೇಕು. ಕಾನೂನು ಸುವ್ಯವಸ್ಥೆ […]

ಸರಕಾರಿ ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಸಿಎಂ ಆದೇಶ

ಬೆಂಗಳೂರು: ಇನ್ನು ಮುಂದೆ ಸರಕಾರ ಮತ್ತು ಸರಕಾರಿ ಸ್ವಾಮ್ಯದ ಸಂಸ್ಥೆಗಳು ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ ಶೀಘ್ರವೇ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಸಿಎಂ, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಅವರು ತಿಳಿಸಿದರು. ಆದೇಶ ಪ್ರಕಟಿಸಿದ ಸರಕಾರ ಸಿಎಂ ಈ ಆದೇಶವನ್ನು […]

ಎಸ್ ಎಸ್ ಎಲ್ ಸಿ ಪರೀಕ್ಷೆ: ಬಸವ ನಾಡಿನ‌ ಒಂದೇ ಶಾಲೆಯ ನಾಲ್ಕು ವಿದ್ಯಾರ್ಥಿಗಳು ರಾಜ್ಯಕ್ಕೆ ಟಾಪ್

ವಿಜಯಪುರ: ಇದು ಇಡೀ ಬಸವ ನಾಡಿಗೆ ಹೆಮ್ಮೆಯ ಸಮಯ. ‌ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಈ ಹಿಂದುಳಿದ ಜಿಲ್ಲೆಯ ಅದೂ ಕೂಡ ಗ್ರಾಮೀಣ ಭಾಗದ ಒಂದೇ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಎಇ ಗಮನ ಸೆಳೆದಿದ್ದಾರೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೈಲೇಶ್ವರ ಗ್ರಾಮದ ಬ್ರೀಲಿಯಂಟ್ ಸ್ಕೂಲ್ ನ ನಾಲ್ಕು ಜನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ಬಸವ ನಾಡಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆ ಪಾಲಕರ, […]