ವಿಜಯಪುರ ನಗರದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಯಲ್ಲಿ ಶೇ 100 ಪಲಿತಾಂಶ

ವಿಜಯಪುರ: ವಿಜಯಪುರ ನಗರದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಶಾಲೆ ಎಂದೇ ಖ್ಯಾತವಾಗಿರುವ ರವೀಂದ್ರನಾಥ ಠಾಗೋರ್ ಶಾಲೆಯಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ಯಲ್ಲಿ ಶೇ. 100 ಪಲಿತಾಂಶ ಬಂದಿದೆ.

ರವೀಂದ್ರನಾಥ ಠಾಗೋರ ಶಾಲೆಯ ಅಧ್ಯಕ್ಷ ಶಿವಾಜಿ ಗಾಯಕವಾಡ

ಛತ್ರಪತಿ ಶಿವಾಜಿ ಮಹಾರಾಜ ಎಜ್ಯುಕೇಷನ್ ಸೊಸೈಟಿಯ ರವೀಂದ್ರನಾಥ ಠಾಗೋರ ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳು ಪಾಸಾಗಿದ್ದಾರೆ.

  1. ಶಾಲೆಗೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿ ಸೋನು ಪಾಟೀಲ

 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸ್ಥೆಯ ಅಧ್ಯಕ್ಷ ಶಿವಾಜಿ ಗಾಯಕವಾಡ ತಮ್ಮ ಶಾಲೆಯಲ್ಲಿ 136 ವಿದ್ಯಾರ್ಥಿಗಳಲ್ಲಿ 45 ಡಿಸ್ಟಿಂಕ್ಷನ್ ಪಡೆದಿದ್ದಾರೆ. ಶೇ. 97 ಅಂಕ ಪಡೆದಿರುವ ಸೋನು ಪಾಟೀಲ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. 91 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕೊರೊನಾ ಸಂಕಷ್ಟ ಸಮಯದಲ್ಲಿ ಆನಲೈನ್ ಹಾಗೂ ಆಪಲೈನ್ ಮೂಲಕ ವಿದ್ಯಾರ್ಥಿಗಳಿಗೆ ಪಾಠ ಬೋಧಿಸಲಾಗಿತ್ತು. ಈಗ ವಿದ್ಯಾರ್ಥಿಗಳು ಪಾಸಾಗಿರುವದಕ್ಕೆ ಸಂತಸವಾಗಿದೆ. ಶಾಲೆಯ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ
ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌