ರಾಜ್ಯದಲ್ಲಿ ಉದ್ಯಮಶೀಲತೆ ವಿಸ್ತರಣೆ ಸರಕಾರದ ಗುರಿಯಾಗಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಉದ್ಯಮ ಸ್ಥಾಪನೆ ಸೇರಿದಂತೆ ರಾಜ್ಯಾದ್ಯಂತ ಉದ್ಯಮ ವಿಸ್ತರಣೆ ಸರಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಲಾಗಿದ್ದ ಸಿಐಐ ವಾರ್ಷಿಕ ಸಭೆ- ಇಂಡಿಯಾ @75 ನಲ್ಲಿ ವರ್ಚುವಲ್ ಆಗಿ ಪಾಲ್ಗೊಂಡು ಅವರು ಮಾತನಾಡಿದರು. ಕರ್ನಾಟಕ ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಎನಿಸಿದೆ. ಸ್ವಾತಂತ್ರ್ಯ ನಂತರದಲ್ಲಿ ಕೌಶಲ್ಯ, ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವಿದೇಶಿ ಸಹಯೋಗಕ್ಕೆ ಅತ್ಯಂತ ಭದ್ರವಾದ ಬುನಾದಿಯನ್ನು ಹಾಕಲಾಗಿದೆ. ಇಡೀ ರಾಜ್ಯದಲ್ಲಿ ಉದ್ಯಮಶೀಲತೆಯನ್ನು ವಿಸ್ತರಿಸುವುದು […]

ಡಿಪ್ಲೋಮಾ ಪರೀಕ್ಷೆ ಹಿನ್ನೆಲೆ- ನಿಷೇಧಾಜ್ಞೆ ಜಾರಿ ಮಾಡಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ನಗರ, ಇಂಡಿ ಮತ್ತು ಸಿಂದಗಿ ತಾಲೂಕಿನಲ್ಲಿ ಆ. 30 ರವರೆಗೆ ಡಿಲ್ಪೋಮಾ ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆ.8 ರಿಂದ ಪರೀಕ್ಷೆ ಮುಕ್ತಾಯದವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ಈ ಪರೀಕ್ಷೆ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದು ಮತ್ತು ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ […]

ಆ್ಯಕ್ಸಿಸ್ ಬ್ಯಾಂಕಿನ 11 ನೂತನ ಶಾಖೆಗಳನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಆ್ಯಕ್ಸಿಸ್ ಬ್ಯಾಂಕಿನ 11 ನೂತನ ಶಾಖೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆನಲೈನ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಕ್ಸಿಸ್ ಬ್ಯಾಂಕಿನ ಉಪಾಧ್ಯಕ್ಷ ಬೈಸಾಖಿ ಬ್ಯಾನರ್ಜಿ, ವೃತ್ತ ಮುಖ್ಯಸ್ಥೆ ರಮಾ, ಆಕ್ಸಿಸ್ ಬ್ಯಾಂಕ್ ಗುಂಪಿನ ದಕ್ಷಿಣ ಭಾಗದ ಮುಖ್ಯಸ್ಥೆ ಜ್ಯಾಸ್ಮಿನ್ ಶೆಟ್ಟಿ ಸೇರಿದಂತೆ ಬ್ಯಾಂಕಿನ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.  

ತಪ್ಪು ಮಾಡಿದ ಸಿಬ್ಬಂದಿಗೆ ತಕ್ಕ ಪಾಠ ಕಲಿಸಿದ ಎಸ್ಪಿ ಆನಂದ ಕುಮಾರ- ನಿರ್ಲಕ್ಷ್ಯ ತೋರುವ ಸಿಬ್ಬಂದಿಗೆ ನಡುಕ ತಂದ ಎಸ್ಪಿ ಆದೇಶ

ವಿಜಯಪುರ: ಮಾಡಬಾರದ ಕೆಲಸವನ್ನು ಮಾಡಿದ ಐದು ಜನ ಪೊಲೀಸ್ ಸಿಬ್ಬಂದಿ ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ಅಮಾನತು ಮಾಡುವ ಮೂಲಕ ತಕ್ಕ ಪಾಠ ಕಲಿಸಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ ಅವರು, ಬಸವನ ಬಾಗೇವಾಡಿ ಪೊಲೀಸ್ ಠಾಣೆಯ ಮೂರು ಜನ ಮತ್ತು ನಿಡಗುಂದಿ ಪೊಲೀಸ್ ಠಾಣೆಯ ಇಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ಈ ಆದೇಶದಲ್ಲಿ ಸಿಬ್ಬಂದಿ ಕರ್ತವ್ಯಲೋಪವನ್ನು ಎಸ್ಪಿ ಪ್ರಸ್ತಾಪಿಸಿ ಅಮಾನತಿಗೆ ಕಾರಣವನ್ನೂ ನೀಡಿದ್ದಾರೆ. ಬಸವನ ಬಾಗೇವಾಡಿ ಪೊಲೀಸ್ ಠಾಣೆ ಮೂರು […]

ದೂರದೃಷ್ಟಿ ಇಟ್ಟುಕೊಂಡು ವಿದ್ಯುತ್ ನಿರ್ವಹಣೆ ಮಾಡಿ: ಗಂಗಾ ಕಲ್ಯಾಣ ಯೋಜನೆಯಡಿ ಕೂಡಲೇ ವಿದ್ಯುತ್ ಸಂಪರ್ಕ ಒದಗಿಸಿ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ವಿದ್ಯುತ್ ಕ್ಷೇತ್ರದಲ್ಲಿ ಸಾವಲಂಬಿಯಾಗುವುದರ ಜೊತೆಗೆ ದೂರದೃಷ್ಟಿ ಇಟ್ಟುಕೊಂಡು ಸಮರ್ಥವಾಗಿ ವಿದ್ಯುತ್ ನಿರ್ವಹಣೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಇಂಧನ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತಬಾಡಿದ ಅವರು, ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ವಿದ್ಯುತ್ ಉತ್ಪಾದನೆ ಮತ್ತು ನಿರ್ವಹಣೆಯನ್ನು ಇನ್ನೂ ಬಹಳ ವ್ಯವಸ್ಥಿತವಾಗಿ ಮಾಡಬೇಕು. ಮಾರುಕಟ್ಟೆ ಸ್ಥಿತಿಗತಿಯನ್ನು ಆಧರಿಸಿ ಹೆಚ್ಚಿನ ದರಕ್ಕೆ ವಿದ್ಯುತ್ತನ್ನು ಮಾರಾಟ ಮಾಡುವಂತಾಗಬೇಕು. ಕರ್ನಾಟಕ ವಿದ್ಯುತ್ ನಿಗಮದಿಂದ ಅತ್ಯಂತ ದಕ್ಷತೆಯಿಂದ […]

ಸಿಎಂ ಪರಿಹಾರ ನಿಧಿಗೆ ಖನೀಜ ನಿಗಮದಿಂದ ರೂ. 5 ಕೋ. ಚೆಕ್ ಸಲ್ಲಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 5 ಕೋ. ಚೆಕ್ ಸಲ್ಲಿಸಲಾಯಿತು. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿ ಬಸವರಾಜ ಬೊಮ್ಮಾಯಿ ಅವರನ್ನು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ ಮತ್ತು ನಿಗಮದ ಅಧ್ಯಕ್ಷರಾದ ಲಿಂಗಮೂರ್ತಿ ಭೇಟಿ ಮಾಡಿ ಸಿಎಂಗೆ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ತಾವು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪಡೆದ ಮೊದಲ […]

ನೀರಾವರಿ ಸಚಿವ ಗೋವಿಂದ ಕಾರಜೋಳ ಅವರಿಂದ ಇಲಾಖೆ ಪ್ರಗತಿ ಪರಿಶೀಲನೆ

ಬೆಂಗಳೂರು: ನೀರಾವರಿ ಸಚಿವ ಗೋವಿಂದ ಎಂ. ಕಾರಜೋಳ ವಿಧಾನಸೌಧದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.  ಈ ಸಂದರ್ಭದಲ್ಲಿ ನಿಗಮವಾರು, ಯೋಜನೆವಾರು ಪ್ರಗತಿ ಪರಿಶೀಲನೆ ನಡೆಸಿದರು. ಈ ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶಸಿಂಗ್, ಯುಕೆಪಿ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಯೋಜನೆಯ ಆಯುಕ್ತ ಶಿವಯೋಗಿ ಕಳಸದ, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಎನ್. ಲಕ್ಷಣ ರಾವ್ ಪೇಶ್ವೆ, ಕೆಎನ್ಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ […]

ರಾಜ್ಯ ಆಡಳಿತ ಸುಧಾರಣೆ ಆಯೋಗದಿಂದ ಕೆಲ ಇಲಾಖೆಗಳ ಸುಧಾರಣೆ ಕುರಿತು ಸಿಎಂಗೆ ವರದಿ ಸಲ್ಲಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಮತ್ತು ರಾಜ್ಯ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ ನೇತೃತ್ವದ ಕೆಲ ಇಲಾಖೆಗಳ ಸುಧಾರಣೆ ಕುರಿತು ಸಿಎಂ ಗೆ ವರದಿ ಸಲ್ಲಿಸಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಆಯೋಗ ಈ ಸಂದರ್ಭದಲ್ಲಿ ಕೆಲ ಇಲಾಖೆಗಳ ಸುಧಾರಣೆಗೆ ಸಂಬಂಧಿಸಿದ ವರದಿಯನ್ನು ಸಲ್ಲಿಸಿತು. ಈ ಸಂದರ್ಭದಲ್ಲಿ ಸಿಎಂ ಜೊತೆ ಕೆಲ ಕಾಲ ಆಯೋಗದ ಅಧ್ಯಕ್ಷರು ಮತ್ತು ಇತರರು ಚರ್ಚೆ ನಡೆಸಿದರು.

ಸಚಿವ ಆನಂದಸಿಂಗ್ ರಾಜೀನಾಮೆ ವದಂತಿ ವಿಚಾರ- ಅವರು ಬೆಂಗಳೂರಿಗೆ ಬಂದು ಹೋದ ಮೇಲೆ ಎಲ್ಲವೂ ಸರಿಯಾಗಲಿದೆ- ಸಿಎಂ

ಬೆಂಗಳೂರು: ಸಚಿವ ಅವರಿಗೆ ಬೆಂಗಳೂರಿಗೆ ಬರಲು ಸೂಚಿಸಿದ್ದು ಅವರು ಬಂದು ಹೋದ ಮೇಲೆ ಎಲ್ಲವೂ ಸರಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆನಂದಸಿಂಗ್ ರಾಜೀನಾಮೆ ವದಂತಿಗಳ ಕುರಿತು ಪ್ರತಿಕ್ರಿಯೆ ನೀಡಿದರು. ಆನಂದಸಿಂಗ್ ನನಗೆ ಮೂರು ದಶಕಗಳ ನನಗೆ ಗೆಳೆಯರು. ನಿರಂತರವಾಗಿ ಸಂಪರ್ಕದಲ್ಲಿದ್ದೇವೆ. ನಿನ್ನೆ ಕೂಡ ಅವರೊಂದಿಗೆ ಮಾತನಾಡಿದ್ದೇನೆ. ಇಂದು ಕೂಡ ಮಾತನಾಡುತ್ತೇನೆ‌ ಎಂದು ಸಿಎಂ ತಿಳಿಸಿದರು. ಆನಂದಸಿಂಗ್ ಅವರ ವಿಚಾರ ನನಗೆ ಗೊತ್ತಿದೆ. ನಾನು ಕೂಡ ಹಲವಾರು ವಿಚಾರಗಳನ್ನು ಅವರಿಗೆ ಹೇಳಿದ್ದೇನೆ. […]