ರಾಜ್ಯದಲ್ಲಿ ಉದ್ಯಮಶೀಲತೆ ವಿಸ್ತರಣೆ ಸರಕಾರದ ಗುರಿಯಾಗಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಉದ್ಯಮ ಸ್ಥಾಪನೆ ಸೇರಿದಂತೆ ರಾಜ್ಯಾದ್ಯಂತ ಉದ್ಯಮ ವಿಸ್ತರಣೆ ಸರಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಿಐಐ ವಾರ್ಷಿಕ ಸಭೆ- ಇಂಡಿಯಾ @75 ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಲಾಗಿದ್ದ ಸಿಐಐ ವಾರ್ಷಿಕ ಸಭೆ- ಇಂಡಿಯಾ @75 ನಲ್ಲಿ ವರ್ಚುವಲ್ ಆಗಿ ಪಾಲ್ಗೊಂಡು ಅವರು ಮಾತನಾಡಿದರು.

ಕರ್ನಾಟಕ ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಎನಿಸಿದೆ. ಸ್ವಾತಂತ್ರ್ಯ ನಂತರದಲ್ಲಿ ಕೌಶಲ್ಯ, ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವಿದೇಶಿ ಸಹಯೋಗಕ್ಕೆ ಅತ್ಯಂತ ಭದ್ರವಾದ ಬುನಾದಿಯನ್ನು ಹಾಕಲಾಗಿದೆ. ಇಡೀ ರಾಜ್ಯದಲ್ಲಿ ಉದ್ಯಮಶೀಲತೆಯನ್ನು ವಿಸ್ತರಿಸುವುದು ನಮ್ಮ ಸರಕಾರದ ಗುರಿಯಾಗಿದೆ ಎಂದು ಅವರು ತಿಳಿಸಿದರು.

ಸಿಐಐ ವಾರ್ಷಿಕ ಸಭೆ- ಇಂಡಿಯಾ @75 ಕಾರ್ಯಕ್ರಮದಲ್ಲಿ ಪಾಲ್ಗೋಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಎಲ್ಲ ಸಂಪನ್ಮೂಲಗಳನ್ನು ಶಕ್ತಿಯನ್ನಾಗಿ ಪರಿವರ್ತಿಸಲಾಗುವುದು. ವ್ಯವಸ್ಥೆಗಿಂತ ರಾಜ್ಯದ ಜನರು ಶ್ರೀಮಂತವಾಗಿರಬೇಕು ಎನ್ನುವುದು ತಮ್ಮ ಆಶಯವಾಗಿದೆ. ಶಿಕ್ಷಣ, ಕೌಶಲ್ಯ ಮತ್ತು ಉದ್ಯಮಶೀಲತೆಯ ಮೂಲಕ ಮಾನವ ಸಂಪನ್ಮೂಲವನ್ನು ಸಶಕ್ತಗೊಳಿಸಬೇಕು. ಪ್ರಾದೇಶಿಕ ಅಸಮಾನತೆಯ ನಿವಾರಣೆ ನಮ್ಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಭಾರತೀಯ ಕೈಗಾರಿಕೆ ಒಕ್ಕೂಟ ದೇಶದ ಕೈಗಾರಿಕೆ ಮತ್ತು ಆರ್ಥಿಕ ಅಭಿವೃದ್ಧಿಗೆ ನಿಟ್ಟಿನಲ್ಲಿ ಶ್ರಮಿಸುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಾದ ಆತ್ಮನಿರ್ಭರ ಭಾರತವನ್ನು ಸಾಕಾರಗೊಳಿಸಲು ಒಟ್ಟಾಗಿ ಶ್ರಮಿಸೋಣ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಸಿಐಐ ವಾರ್ಷಿಕ ಸಭೆ- ಇಂಡಿಯಾ @75 ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿಎಂ ಭೇಟಿ ಮಾಡಿದ ಉದ್ಯಮಿಗಳು

 

ರಫ್ತು ಕ್ಷೇತ್ರದಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿರಬೇಕು. ಇದಕ್ಕಾಗಿ ಉತ್ತಮ ಗುಣಮಟ್ಟದ ರಫ್ತು ಕೇಂದ್ರಿತ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದಾಗಬೇಕು. ನೂತನ ಕೈಗಾರಿಕೆ ನೀತಿ, ಕಾಯಿದೆಗಳನ್ನು ಸರಳೀಕರಿಸಿದ್ದು ರಾಜ್ಯ ದಲ್ಲಿ ಹೂಡಿಕೆಯನ್ನು ಸುಲಭವಾಗಿದೆ. ಕೊರೊನಾ ಹೊರತಾಗಿಯೂ ರಾಜ್ಯದ ಆರ್ಥಿಕ ಸ್ಥಿತಿ ಸ್ಥಿರವಾಗಿದ್ದು, ಕೈಗಾರಿಕೆ ಮತ್ತು ಸೇವಾ ವಲಯದಲ್ಲಿ ಹೂಡಿಕೆ ಮಾಡುವಂತೆ ನಾನಾ ಕಂಪನಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಂದರ್ಭದಲ್ಲಿ ಆಹ್ವಾನ ನೀಡಿದರು.

ಈ ಕಾರ್ಯಕ್ರಮದಲ್ಲಿ ಸಿಐಐ ನಿರ್ದೇಶಕ ಚಂದ್ರಜಿತ ಬ್ಯಾನರ್ಜಿ, ಉದ್ಯಮಿಗಳಾದ ಅಜೀಂ ಪ್ರೇಮಜಿ, ಕಿರಣ ಮಜುಂದಾರ ಷಾ ಮತ್ತು ಸಿಐಐ ಮುಖ್ಯಸ್ಥರು ಉಪಸ್ಥಿತರಿದ್ದರು.
ಬಸವರಾಜ ಬೊಮ್ಮಾಯಿ

 

Leave a Reply

ಹೊಸ ಪೋಸ್ಟ್‌