ಬೆಂಗಳೂರು: ನೀರಾವರಿ ಸಚಿವ ಗೋವಿಂದ ಎಂ. ಕಾರಜೋಳ ವಿಧಾನಸೌಧದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ನಿಗಮವಾರು, ಯೋಜನೆವಾರು ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶಸಿಂಗ್, ಯುಕೆಪಿ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಯೋಜನೆಯ ಆಯುಕ್ತ ಶಿವಯೋಗಿ ಕಳಸದ, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಎನ್. ಲಕ್ಷಣ ರಾವ್ ಪೇಶ್ವೆ, ಕೆಎನ್ಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ. ಜೈಪ್ರಕಾಶ್, ಕೆಬಿಜೆಎನ್ ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ, ಸಚಿವರ ಆಪ್ತಕಾರ್ಯದರ್ಶಿ ವಿ. ಶ್ರೀನಿವಾಸ ಮತ್ತಿತರರು ಉಪಸ್ಥಿತರಿದ್ದರು.