ಬೆಂಗಳೂರು: ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 5 ಕೋ. ಚೆಕ್ ಸಲ್ಲಿಸಲಾಯಿತು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿ ಬಸವರಾಜ ಬೊಮ್ಮಾಯಿ ಅವರನ್ನು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ ಮತ್ತು ನಿಗಮದ ಅಧ್ಯಕ್ಷರಾದ ಲಿಂಗಮೂರ್ತಿ ಭೇಟಿ ಮಾಡಿ ಸಿಎಂಗೆ ಚೆಕ್ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ತಾವು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪಡೆದ ಮೊದಲ ಚೆಕ್ ಇದಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.