ಡಿಪ್ಲೋಮಾ ಪರೀಕ್ಷೆ ಹಿನ್ನೆಲೆ- ನಿಷೇಧಾಜ್ಞೆ ಜಾರಿ ಮಾಡಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ನಗರ, ಇಂಡಿ ಮತ್ತು ಸಿಂದಗಿ ತಾಲೂಕಿನಲ್ಲಿ ಆ. 30 ರವರೆಗೆ ಡಿಲ್ಪೋಮಾ ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆ.8 ರಿಂದ ಪರೀಕ್ಷೆ ಮುಕ್ತಾಯದವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಆದೇಶ ಹೊರಡಿಸಿದ್ದಾರೆ.

ಅಲ್ಲದೇ, ಈ ಪರೀಕ್ಷೆ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದು ಮತ್ತು ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾತ್ರ ಬೇಸಿಕ್ ಮೊಬೈಲ್ ಸೆಟ್‍ನ್ನು ಬಳಸಬಹುದಾಗಿದೆ. ಈ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳನ್ನು ಥರ್ಮಲ್ ಸ್ಕ್ಯಾನಿಂಗ್‍ಗೆ ಒಳಪಡಿಸಿ, ಕೈಗಳನ್ನು ಸ್ಯಾನಿಟೈಸರ್‍ನಿಂದ ಶುದ್ಧೀಕರಿಸುವುದು ಮತ್ತು ಮಾಸ್ಕ್ ಬಳಕೆ ಕಡ್ಡಾಯಗೊಳಿಸಿ ಪರೀಕ್ಷಾ ಕೊಠಡಿಯೊಳಗೆ ಪ್ರವೇಶ ನೀಡಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಅಷ್ಚೇ ಅಲ್ಲ, ಪರೀಕ್ಷೆ ಕೇಂದ್ರಗಳ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷೆ ಮುಕ್ತಾಯವಾಗುವ ಅವಧಿಯವರೆಗೆ ತೆರೆಯದಂತೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಆದೇಶದಲ್ಲಿ ತಿಳಿಸಿದ್ದಾರೆ.

 

Leave a Reply

ಹೊಸ ಪೋಸ್ಟ್‌