ಸಿಎಂ ನೇತೃತ್ವದಲ್ಲಿ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ- ಕೃಷ್ಣ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಪೂರ್ಣ ಪ್ರಮಾಣದಲ್ಲಿ ಆಯುಕ್ತರ ನೇಮಕಕ್ಕೆ ಸಚಿವ ಗೋವಿಂದ ಕಾರಜೋಳ ಆಗ್ರಹ

ಬೆಂಗಳೂರು: ಜಲಸಂಪನ್ಮೂಲ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ನೀರಾವರಿ ಯೋಜನೆಗಳು, ಕೆರೆಗೆಳಿಗೆ ನೀರು ತುಂಬಿಸುವ ಯೋಜನೆಗಳು, ಆಧುನೀಕರಣ ಯೋಜನೆಗಳು, ಕೇಂದ್ರ ಧನ ಸಹಾಯ ಪಡೆಯುತ್ತಿರುವ ಯೋಜನೆಗಳ ವಸ್ತುಸ್ಥಿತಿ ಮತ್ತು ಪ್ರಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ನೀರಾವರಿ ಸಚಿವ ಗೋವಿಂದ ಕಾರಜೋಳ ಮತ್ತು ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಿಎಂ ಬಸವರಾಜ ಬೊಮ್ಮಾಯಿ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ನಾನಾ ನೀರಾವರಿ ಯೋಜನೆಗಳ ಕುರಿತು ವಿಸ್ತೃತವಾಗಿ ಚರ್ಚಿಸಿದ ಅವರು, ಯೋಜನೆಗಳನ್ನು ತ್ವರಿತ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಲಸಂಪನ್ಮೂಲ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತದ ಯೋಜನೆಗೆ ಅಗತ್ಯವಾಗಿರುವ ಭೂಸ್ವಾಧೀನ ಪ್ರಕ್ರಿಯೆ ಮತ್ತು ಪುನರ್ ನಿರ್ಮಾಣ ಮತ್ತು ಪುನರ್ವಸತಿ ಕುರಿತು ಕೈಗೊಳ್ಳಬೇಕಾಗಿರುವ ಕ್ರಮಗಳು, ಹಣಕಾಸಿನ ಹೊಂದಾಣಿಕೆ ಮತ್ತು ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ರೂಪುರೇಷೆಗಳ ಕುರಿತು ಅವರು ಚರ್ಚೆ ನಡೆಸಿದರು.

ಸಿಎಂ ಬಸವರಾಜ ಬೊಮ್ಮಾಯಿ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

 

ಈಗ ಅನುಷ್ಠಾನಕ್ಕೆ ಕೈಗೊಂಡಿರುವ ಸೂಕ್ಷ್ಮ ನೀರಾವರಿ ಪದ್ದತಿಯಲ್ಲಿನ ರೂಪುರೇಷೆಗಳನ್ನು ಮರು ಪರಿಶೀಲಿಸುವ ಅವಶ್ಯಕತೆ, ನೀರಾವರಿ ಯೋಜನೆಗಳಿಗೆ ಖರ್ಚು ಮಾಡಲಾದ ವೆಚ್ಚಕ್ಕೆ ಪೂರಕವಾಗಿ ನಿರ್ಮಾಣ ಮಾಡಲಾಗಿರುವ ಯೋಜನೆಗಳ ಭೌತಿಕ ಪ್ರಗತಿ ಮತ್ತು ಕಲ್ಪಿಸಲಾದ ನೀರಾವರಿ ಸಾಮರ್ಥ್ಯ ಕುರಿತು ಮೌಲ್ಯಮಾಪನ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು.  ಕೃಷ್ಣ ಮೇಲ್ದಂಡೆ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆ, ನವಿಲೆ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಹಾಗೂ ಯೋಜನೆಗಳಡಿ ಕಲ್ಪಿಸಲಾಗುತ್ತಿರುವ ನೀರಾವರಿ ಸಾಮರ್ಥ್ಯದ ಬಗ್ಗೆ ಮತ್ತು ಪ್ರಸಕ್ತ ವರ್ಷದ ಆಯವ್ಯಯ ಅನುದಾನ ಮತ್ತು ವೆಚ್ಚಗಳ ಕುರಿತು ಸಿಎಂ ಚರ್ಚೆ ನಡೆಸಿದರು.  ಅಲ್ಲದೇ, ನೀರಾವರಿ ಯೋಜನೆಗಳಡಿ ಅನುಷ್ಟಾನ ಮಾಡಲಾಗುತ್ತಿರುವ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಎಂ ಬಸವರಾಜ ಬೊಮ್ಮಾಯಿ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ನೀರಾವರಿ ಸಚಿವ ಗೋವಿಂದ ಎಂ. ಕಾರಜೋಳ ಮಾತನಾಡಿ, ಗ್ರಾಮಗಳ ಸಮೀಪದಲ್ಲಿ ಹಾದು ಹೋಗುವ  ನದಿಗಳ ಪಾತ್ರಗಳ ಬಳಿ ತಡೆಗೋಡೆಗಳನ್ನು ವೈಜ್ಞಾನಿಕವಾಗಿ ನಿರ್ಮಿಸಬೇಕು.  ಕೃಷಿಹೊಂಡ, ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳಿಂದ ಅಂತರ್ಜಲ ವೃದ್ಧಿಯಾಗುವ ಜೊತೆಗೆ ರೈತರಿಗೆ ಇದರಿಂದ ಅನುಕೂಲವಾಗುತ್ತದೆ.  ಈ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದರು.

ಕೃಷ್ಣ ಮೇಲ್ದಂಡೆ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಯುಕೆಪಿಗೆ ಪೂರ್ಣ ಪ್ರಮಾಣದಲ್ಲಿ ಆಯುಕ್ತರನ್ನು ನೇಮಕ ಮಾಡಬೇಕು.  ವಿಶೇಷ ಭೂಸ್ವಾಧೀನ ಅಧಿಕಾರಿಗಳನ್ನು ನೇಮಕ ಮಾಡಿ, ಭೂಸ್ವಾಧೀನ ಪ್ರಕ್ರಿಯೆಯು ತ್ವರಿತವಾಗಿ ನಡೆಸಬೇಕಾಗಿದೆ.  ಈ ನಿಟ್ಟಿನಲ್ಲಿ ವಿಶೇಷ ಗಮನ ನೀಡಬೇಕು ಎಂದು ಸಚಿವ ಗೋವಿಂದ ಎಂ. ಕಾರಜೋಳ ಮುಖ್ಯಮಂತ್ರಿಗಳನ್ನು ಕೋರಿದರು.

ಸಿಎಂ ಬಸವರಾಜ ಬೊಮ್ಮಾಯಿ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ನೀರಾವರಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶಸಿಂಗ, ಕಾರ್ಯದರ್ಶಿ ಎನ್. ಲಕ್ಷಣರಾವ ಪೇಶ್ವೆ, ಯುಕೆಪಿಯ ಪುನರ ವಸತಿ ಮತ್ತು ನಿರ್ಮಾಣ ಯೋಜನೆಯ ಆಯುಕ್ತ ಶಿವಯೋಗಿ ಕಳಸದ ಅವರು ಯೋಜನೆಗಳ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು.

ಈ ಸಭೆಯಲ್ಲಿ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐಎಸ್‌ಎಸ್ ಪ್ರಸಾದ, ಕೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ. ಜೈಪ್ರಕಾಶ, ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಸಚಿವರ ಆಪ್ತ ಕಾರ್ಯದರ್ಶಿ ವಿ. ಶ್ರೀನಿವಾಸ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌