ಮಂಗಳೂರು: ಕೊರೊನಾ ಸೋಂಕು ಹೆಚ್ಚಾಗಿರುವ ಜಿಲ್ಲೆಯಲ್ಲಿನ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರಾವಳಿ ಜಿಲ್ಲೆಗಳ ಪ್ರವಾಸಕ್ಕಾಗಿ ಮಂಗಳೂರಿಗೆ ಆಗಮಿಸಿದ್ದಾರೆ.
ಕೊರೊನಾ ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಮತ್ರು ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ಸಿಎಂ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿಎಂ ಆಗಮಿಸಿದರು. ಜಿಲ್ಲಾಡಳಿತದ ವತಿಯಿಂದ ಮುಖ್ಯಮಂತ್ರಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಹಿಳೆಯರು ಸಿಎಂ ಹಣೆಗೆ ತಿಲಕವಿಟ್ಟು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಡಾ. ಕೆ. ಸುಧಾಕರ, ಶಾಸಕರಾದ ಯು.ಟಿ. ಖಾದರ, ಶಾಸಕರಾದ ರಾಜೇಶ ನಾಯ್ಕ, ವೇದವ್ಯಾಸ ಕಾಮತ, ಉಮಾನಾಥ ಕೋಟ್ಯಾನ, ಡಾ. ಭರತ ಶೆಟ್ಟಿ.ವೈ, ಹರೀಶ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮಹಾನಗರ ಪಾಲಿಕೆ ಮೇಯರ ಪ್ರೇಮಾನಂದ ಶೆಟ್ಟಿ, ಉಪಮೇಯರ ಸುಮಂಗಳಾ ರಾವ ಪೊಲೀಸ ಆಯುಕ್ತ ಶಶಿಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ, ಎಸ್ಪಿ ಋಷಿಕೇಶ ಭಗವಾನ ಸೋನಾವಣೆ ಸೇರಿದಂತೆ ನಾನಾ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.