ಶೇ. 2ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10, ಪಿಯುಸಿ ತರಗತಿ ಪ್ರಾರಂಭ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಶೇ. 2ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 ಮತ್ತು ಪಿಯುಸಿ ತರಗತಿ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲೂಕುಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಶಾಲೆಗಳಲ್ಲಿ ಶೇ. 2ಕ್ಕಿಂತ ಹೆಚ್ಚು ಪ್ರಕರಣ […]

ಬಸವನಾಡು ರಾಜ್ಯದಲ್ಲಿಯೇ ಅತೀ ಕಡಿಮೆ ಕೊರೊನಾ ಪಾಸಿಟಿವಿಟಿ ಹೊಂದಿದ ಜಿಲ್ಲೆ- ಉಳಿದ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಎಷ್ಟಿದೆ ಗೊತ್ತಾ?

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆ ರಾಜ್ಯದಲ್ಲಿಯೇ ಅತೀ ಕಡಿಮೆ ಕೊರೊನಾ ಪಾಸಿಟಿವಿಟಿ ಹೊಂದಿದ ಜಿಲ್ಲೆಯಾಗಿದೆ. ಇಂದು ಸರಕಾರ ಬಿಡುಗಡೆ ಮಾಡಿರುವ ಕೊರೊನಾ ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳ ಪಟ್ಟಿಯಲ್ಲಿ ವಿಜಯಪುರ ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದು, ಬಸವ ನಾಡಿನಲ್ಲಿ ಕಳೆದ ಒಂದು ವಾರದಲ್ಲಿ ಕೇವಲ ಶೇ. 0.08 ರಷ್ಟು ಕೊರೊನಾ ಪಾಸಿಟಿವಿಟಿ ದರ ದಾಖಲಾಗಿದೆ.     ಜಿಲ್ಲಾವಾರು ಪಾಸಿಟಿವಿಟಿ ಪ್ರಮಾಣದ ಮಾಹಿತಿ ಇಲ್ಲಿದೆ. 1. ದಕ್ಷಿಣ ಕನ್ನಡ- ಶೇ. 3.98 2. ಚಿಕ್ಕಮಗಳೂರು- ಶೇ. 3.24 […]

ಕಾಗಿನೆಲೆ ಶ್ರೀಗಳನ್ನು ಭೇಟಿ ಮಾಡಿ ಸಂಗೋಳ್ಳಿ ರಾಯಣ್ಣನ ಜನ್ಮದಿನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಸಿಎಂ-ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ನಿರಂಜನಾನಂದ ಸ್ವಾಮೀಜಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿರುವ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಶಾಖಾ ಮಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ನಿರಂಜನಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನವನ್ನು ಆ. 15 ರಂದು ರವಿವಾರ ಬೆಂಗಳೂರಿನಲ್ಲಿ ಸರಕಾರಿ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳು ಶ್ರೀಗಳಿಗೆ ಆಹ್ವಾನ ನೀಡಿದರು.   ಶ್ರೀಗಳ ಭೇಟಿಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಶ್ರೀಗಳ ಆಶೀರ್ವಾದಕ್ಕಾಗಿ ಬಂದಿದ್ದೆ. ನನಗೂ ಹಾಗೂ […]

ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಮಹಿಳಾ ಸಬಲೀಕರಣ ಇನ್ನೂ ಪರಿಪೂರ್ಣವಾಗಿಲ್ಲ- ಇದಕ್ಕೆ ಕಾರಣಗಳೇನು ಎಂಬುದರ ಕುರಿತು ಲೇಖನ

ಡಾ. ಮಲ್ಲಮ್ಮ ಯಾಳವಾರ ಸಬಲಾ ಸಂಸ್ಥೆಯ ಸಂಸ್ಥಾಪಕಿ ವಿಜಯಪುರ: ಮಹಿಳೆಯರನ್ನು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ಸಬಲಿಕರಣಕ್ಕಾಗಿ ಹಾಗೂ ಅವರನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶಗಳಿರುವ ಸ್ವಯಂ ಸೇವಾ ಸಂಸ್ಥೆಗಳು ಕರ್ನಾಟಕದ ಮೂಲೆ ಮೂಲೆಗಳಲ್ಲಿವೆ. ಬೇರೆ ಬೇರೆ ಹೆಸರುಗಳಿಂದ ಗುರುತಿಸಿಕೊಂಡು ಕೆಲಸವನ್ನೂ ನಿರ್ವಹಿಸುತ್ತಿವೆ. ಫೆವಾರ್ಡ- ಕ ಗೆ 30 ವರ್ಷ ಇತಿಹಾಸವಿದ್ದರೂ ಮಹಿಳೆಯರ ಭಾಗವಹಿಸುವಿಕೆಯ ಕೋರತೆ ಇಂದಿಗೂ ಕಾಣುತ್ತಿದೆ. ಇಂದು ನಮ್ಮ ಸಮಾಜದಲ್ಲಿ ಹಾಗೂ ಕುಟುಂಬ ವ್ಯವಸ್ಥೆಯಲ್ಲಿ ಮಹಿಳಾ ಸಬಲೀಕರಣಕ್ಕೆ ಶಿಕ್ಷಣ, ಅಧಿಕಾರ ಮತ್ತು ಪ್ರಯಾಣ […]

75ನೇ ಸ್ವಾತಂತ್ರ್ಯ ದಿನ: ವರ್ಷವಿಡಿ ಕನ್ನಡ ನಾಡು, ನುಡಿ, ಸಾಹಿತ್ಯ, ಆಡಳಿದ ಸಾಧನೆ ಬಿಂಬಿಸಲಾಗುವುದು: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವರ್ಷವಿಡಿ ದೇಶಕ್ಕೆ ಮಾದರಿಯಾಗಿರುವ ಕನ್ನಡ ನಾಡು, ನುಡಿ, ಸಾಹಿತ್ಯ,ಆಡಳಿತವನ್ನು ಬಿಂಬಿಸುವ ಕೆಲಸ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 75ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಸೌಭಾಗ್ಯ ತಮಗೆ ಬಂದಿದೆ. ಈಗ 75 ವರ್ಷಗಳಲ್ಲಿ ನಾವು ನಡೆದುಕೊಂಡು ಬಂದಿರುವ ದಾರಿ ಮತ್ತು ಮುಂದಿನ ಹಾದಿಯ ಬಗ್ಗೆ ಸರಕಾರ ಚಿಂತನೆ ಮಾಡುತ್ತಿದೆ ಎಂದು ತಿಳಿಸಿದರು. 75 ವರ್ಷಗಳಲ್ಲಿ ಹಲವಾರು ಸವಾಲು ಸಂದರ್ಭಗಳಲ್ಲಿ ಕರ್ನಾಟಕ ದೇಶಕ್ಕೆ […]

75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗುಮ್ಮಟ ನಗರಿಯಲ್ಲಿ ಫಿಟ್ ಇಂಡಿಯಾ ಬೃಹತ್ ಜಾಥಾ

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ 36ನೇ ಕರ್ನಾಟಕ ಎನ್ ಸಿ ಸಿ ಬಟಾಲಿಯನ್, ಕೇಂದ್ರ ಯುವ ಕಾರ್ಯ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಫಿಟ್ ಇಂಡಿಯಾ ಜಾಗೃತಿ ಓಟ ಮತ್ತು ಸೈಕಲ್ ಜಾಥಾ ನಡೆಯಿತು. ಐತಿಹಾಸಿಕ ಗೋಳಗುಮಟ್ಟದಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಜಾವೀದ ಜಮಾದಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಯುವಕರು ಆರೋಗ್ಯ ಕಾಪಾಡಿಕೊಳ್ಳಲು ತಮ್ಮ ಜೀವನ ಶೈಲಿ ಬದಲಿಸಿಕೊಂಡು ಪ್ರತಿನಿತ್ಯ ವ್ಯಾಯಾಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. […]

ಕೊರೊನಾ 3ನೇ ಹಿನ್ನೆಲೆ: ಮಕ್ಕಳಿಗಾಗಿ ಪ್ರತ್ಯೇಕ ವಾರ್ಡ್, ಐಸಿಯು ಬೆಡ್, ವೆಂಟಿಲೇಟರ್ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಸೂಚನೆ

ವಿಜಯಪುರ: ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ತೊಂದರೆಯಾಗದAತೆ ಮುಂಜಾಗೃತೆ ಕ್ರಮವಾಗಿ ಮಕ್ಕಳಿಗಾಗಿ ಪ್ರತ್ಯೇಕ ಕೋವಿಡ್ ವಾರ್ಡ್, ಐಸಿಯು ಬೆಡ್‌ ಮತ್ತು ವೆಂಟಿಲೇಟರ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ತಿಳಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೋವಿಡ್-19 3ನೇ ಅಲೆಯ ನಿಯಂತ್ರಣ ಜಿಲ್ಲಾ ತಜ್ಞರ ಸಮಿತಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ 3ನೇ ಅಲೆ ಮಕ್ಕಳಿಗೆ ಹೆಚ್ಚು ಅಪಾಯಕಾರಿಯಾಗಿದ್ದು, ಈ ನಿಟ್ಟಿನಲ್ಲಿ ತೊಂದರೆಯಾಗದಂತೆ ಮುಂಜಾಗೃತೆ ಕ್ರಮವಾಗಿ ಎಲ್ಲ ಆಸ್ಪತ್ರೆಯಗಳು ಮಕ್ಕಳಿಗಾಗಿ ಪ್ರತ್ಯೇಕ […]

75ನೇ ಸ್ವಾತಂತ್ರ್ತೋತ್ಸವ ಹಿನ್ನೆಲೆ ಜಗಮಘಿಸುತ್ತಿದೆ ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ

ವಿಜಯಪುರ: 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ಅತೀ ದೊಡ್ಡ ಜಲಾಷಯ ಆಲಮಟ್ಟಿಗೆ 3ಡಿ ರೂಪದಲ್ಲಿ ವಿದ್ಯುದಲಂಕಾರ ಮಾಡಲಾಗಿದೆ.   ಶುಕ್ರವಾರ ಸಂಜೆಯಿಂದಲೇ ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರ ವಿದ್ಯುತ್ ಬೆಳಕಿನಿಂಗ ಜಗಮಘಾಯಿಸುತ್ತಿದೆ. ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳಿಂದ ಮುಖ್ಯ ದ್ವಾರಕ್ಕೆ ವಿದ್ಯುತ್ ಅರಂಕಾರ ಮಾಡಲಾಗಿದೆ. ಅಷ್ಟೇ ಅಲ್ಲ, ಆಲಮಟ್ಟಿ ಜಲಾಷಯದ ಗೇಟುಗಳಿಗೂ ವಿದ್ಯುತ್ ಅಲಂಕಾರ ಮಾಡಲಾಗಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.   ಒಟ್ಟಾರೆ, ಈ ಬಾರಿ ಪ್ರತಿವರ್ಷಕ್ಕೂ ಮುಂಚೆಯೇ ಜಲಾಷಯ ಸಂಪೂರ್ಣ ಭರ್ತಿಯಾಗಿದ್ದು, […]