ವಿಜಯಪುರ: ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ತೊಂದರೆಯಾಗದAತೆ ಮುಂಜಾಗೃತೆ ಕ್ರಮವಾಗಿ ಮಕ್ಕಳಿಗಾಗಿ ಪ್ರತ್ಯೇಕ ಕೋವಿಡ್ ವಾರ್ಡ್, ಐಸಿಯು ಬೆಡ್ ಮತ್ತು ವೆಂಟಿಲೇಟರ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೋವಿಡ್-19 3ನೇ ಅಲೆಯ ನಿಯಂತ್ರಣ ಜಿಲ್ಲಾ ತಜ್ಞರ ಸಮಿತಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ 3ನೇ ಅಲೆ ಮಕ್ಕಳಿಗೆ ಹೆಚ್ಚು ಅಪಾಯಕಾರಿಯಾಗಿದ್ದು, ಈ ನಿಟ್ಟಿನಲ್ಲಿ ತೊಂದರೆಯಾಗದಂತೆ ಮುಂಜಾಗೃತೆ ಕ್ರಮವಾಗಿ ಎಲ್ಲ ಆಸ್ಪತ್ರೆಯಗಳು ಮಕ್ಕಳಿಗಾಗಿ ಪ್ರತ್ಯೇಕ ಕೋವಿಡ್ ವಾರ್ಡ್, ಐಸಿಯು ಬೆಡ್ ಹಾಗೂ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸೂಚನೆ ನೀಡಿದರು.
ಸರಕಾರದ ಮಾರ್ಗಸೂಚಿಯಂತೆ ಎಲ್ಲಾ ಆಸ್ಪತ್ರೆಗಳು ಕೋವಿಡ್-19 ರೋಗಿಗಳಿಗಾಗಿ ಶೇ. 50ರಷ್ಟು ಬೆಡ್ ಗಳನ್ನು ಮೀಸಲಿಡಬೇಕು. ಬೆಡ್‌ಗಳ ಅಂಕಿ- ಅಂಶಗಳನ್ನು ತಂತ್ರಾಂಶದಲ್ಲಿ ಸರಿಯಾದ ಮಾಹಿತಿ ನೀಡಬೇಕು. ಜಂಬು ಆಕ್ಸಿಜನ್ ಸಿಲಿಂಡರ್‌ಗಳನ್ನು ಎಲ್ಲ ಆಸ್ಪತ್ರೆಗಳು ಮುಂಜಾಗೃತವಾಗಿ ವ್ಯವಸ್ಥೆ ಮಾಡಿಕೊಂಡು, ಮುಂದಿನ ಸಂಭವನೀಯ 3ನೇ ಅಲೆಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಜಿಲ್ಲಾಧಿಕಾರಿಗಳು, ಮಹಾರಾಷ್ಟ್ರದ ಗಡಿಭಾಗದಲ್ಲಿ 11 ಚೆಕ್‌ಪೋಸ್ಟಗಳನ್ನು ತೆರೆಯಲಾಗಿದ್ದು, ಸೋಂಕಿತರ ತಪಾಸಣೆಯನ್ನು ಸಮರ್ಪಕವಾಗಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿ, 3ನೇ ಅಲೆಯ ಹಿನ್ನೆಲೆ ಎಲ್ಲ ಆಸ್ಪತ್ರೆಗಳು ಪಿಡಿಯಾಟ್ರಿಕ್ ಬೆಡ್‌ಗಳನ್ನುಹೆಚ್ಚಿನ ಸಂಖ್ಯೆಯಲ್ಲಿ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಪೊಲೀಸ್ ವರಿಷ್ಠಾಧಿಕಾರಿ ಎಚ್. ಆನಂದ ಕುಮಾರ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಉಂಡಿ ಉಪವಿಭಾಗಾಧಿಕಾರಿ ರಾಹುಲ್ ಶಿಂಧೆ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.