ಖ್ಯಾತ ನಟ ಸೋನು ಸೂದ್ ಗಮನ ಸೆಳೆದ ಬಸವ ನಾಡಿನ ಧ್ರುವತಾರೆ- ಈ ವಿದ್ಯಾರ್ಥಿ ಮಾಡಿರುವ ಸಾಧನೆಗೆ ಜಗಮೆಚ್ಚುಗೆ

ವಿಜಯಪುರ: ಖ್ಯಾತ ನಟ ಸೋನು ಸೂದ್ ಯಾರಿಗೆ ತಾನೆ ಗೊತ್ತಿಲ್ಲ. ಇವರು ಕೊರೊನಾ ಮತ್ತು ಲಾಕಡೌನ್ ಆರಂಭವಾದಾಗಿನಿಂದ ತಮ್ಮ ತನು, ಮನ ಮತ್ತು ಧನದಿಂದ ಲಕ್ಷಾಂತರ ಜನರಿಗೆ ನಾನಾ ರೀತಿಯಲ್ಲಿ ನೆರವಾಗುವ ಮೂಲಕ ಮಾದರಿಯಾಗಿದ್ದಾರೆ. ಇಂಥ ಖ್ಯಾತ ನಟ ಬಸವ ನಾಡು ವಿಜಯಪುರದ ವಿದ್ಯಾರ್ಥಿಯೊಬ್ಬರ ಕಾರ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸುವ ಮೂಲಕ ಈ ವಿದ್ಯಾರ್ಥಿಯ ಬೆನ್ನು ತಟ್ಟಿದ್ದಾರೆ. ಆ ವಿದ್ಯಾರ್ಥಿಯ ಕಾರ್ಯವನ್ನು ಎಲ್ಲರೂ ಬೆಂಬಲಿಸುವಂತೆಯೂ ಸೋನು ಸೂದ್ ಮನವಿಯನ್ನೂ ಮಾಡಿದ್ದಾರೆ. ಅಂದ ಹಾಗೆ ಆ ವಿದ್ಯಾರ್ಥಿ ಬೇರಾರೂ […]

ಬಸವ ನಾಡಿನಲ್ಲಿ ನಡೆಯಿತು ವಿಶೇಷ ಸ್ವಾತಂತ್ರ್ಯ ದಿನಾಚರಣೆ- ಶಾಲೆಗೆ ಬಾರದಿದ್ದರೂ ವಿದ್ಯಾರ್ಥಿಗಳು ಖುಷ್ ಆಗಲು ಕಾರಣವೇನು ಗೊತ್ತಾ?

ವಿಜಯಪುರ: ಬಸವ ನಾಡು ವಿಜಯಪುರದ ಜನತೆ ಮತ್ತು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸದಾ ವಿನೂತನ ಪ್ರಯತ್ನದಲ್ಲಿ ತೊಡಗಿರುತ್ತಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಈ ಕಾರ್ಯಕ್ರಮ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಶಾಲೆಗೆ ತೆರಳದ ಮಕ್ಕಳಲ್ಲಿ ಈ ಕಾರ್ಯಕ್ರಮ ಸಂತಸ ತಂದಿತ್ತಲ್ಲದೇ ಪೋಷಕರಲ್ಲಿಯೂ ಸಮಾಧಾನಕ್ಕೆ ಕಾರಣವಾಗಿತ್ತು. ಇಲ್ಲಿ ಆಗಿದ್ದೇನೆಂದರೆ, ಶಾಲೆಗಳು ಇನ್ನೂ ಆರಂಭವಾಗದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಶಾಲೆಗಳ ಯಾವುದೇ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೋಳ್ಳಲು ಸಾಧ್ಯವಾಗುತ್ತಿಲ್ಲ. ಅಲ್ಲದೇ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಮರೆತಂತಾಗಿತ್ತು.   ಈ ಹಿನ್ನೆಲೆಯಲ್ಲಿ ವಿಜಯಪುರ […]

ಸಂಗೊಳ್ಳಿ ರಾಯಣ್ಣ ಅವರ 224ನೇ ಜಯಂತಿ ಉತ್ಸವಕ್ಕೆ ಸಿಎಂ ಚಾಲನೆ- ಬೆಳ್ಳಿಗದೆ ನೀಡಿ ಮುಖ್ಯಮಂತ್ರಿಗಳನ್ನು ಗೌರವಿಸಿದ ಸ್ವಾಮೀಜಿ

ಬೆಂಗಳೂರು: ರಾಜ್ಯ ಸರಕಾರದ ವತಿಯಿಂದ ಇದೇ ಮೊದಲ ಬಾರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 224 ನೇ ಜಯಂತಿ ಉತ್ಸವ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ರೈಲು ನಿಲ್ದಾಣದ ಬಳಿ ಇರುವ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.     ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಜನ್ಮದಿನ ಮತ್ತು ಹುತಾತ್ಮ ದಿನಗಳಂದು ಬೆಂಗಳೂರು ಮತ್ತು ಇತರ ಜಿಲ್ಲಾ ಕೇಂದ್ರಗಳಲ್ಲಿ ಸರಕಾರಿ ಕಾರ್ಯಕ್ರಮ ಆಯೋಜನೆಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ […]

ಧ್ವಜಾರೋಹಣಕ್ಕೆ ಬಂದ ಸಚಿವೆ ಶಶಿಕಲಾ ಜೊಲ್ಲೆಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ, ಸಂಸದ ರಮೇಶ ಜಿಗಜಿಣಗಿ ಮುನಿಸು- ಯಾಕೆ ಗೊತ್ತಾ?

ವಿಜಯಪುರ: ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಧ್ವಜಾರೋಹಣಕ್ಕೆ ಆಗಮಿಸಿದ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ ನೇತೃತ್ವದಲ್ಲಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ವಿಜಯಪುರದಲ್ಲಿ ನಡೆದಿದೆ. ತೊರವಿಯಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಆಗಮಿಸಿದ ಶಶಿಕಲಾ ಜೊಲ್ಲೆ ಅವರ ವಿರುದ್ಧ ಭ್ರಷ್ಟಾಚಾರ ಆರೋಪಗಳಿದ್ದು ಅವರಿಗೆ ಧ್ವಜಾರೋಹಣ ಮಾಡಲು ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಇದರಿಂದ ಒಂದು ಕ್ಷಣ ಗಲಿಬಿಲಿಗೊಂಡ ಸಚಿವರು ಧ್ವಜಾರೋಹಣಕ್ಕೆ […]

ಬಸವ ನಾಡಿನಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಅವರಿಂದ ಧ್ವಜಾರೋಹಣ- ಸಾಧಕರಿಗೆ ಸನ್ಮಾನ

ವಿಜಯಪುರ: ಬಸವ ನಾಡು ವಿಜಯಪುರದಲ್ಲಿ 75ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ತೊರವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿರುವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಜರಾಯಿ, ಹಜ್ ಮತ್ತು ವಕ್ಫ ಸಚಿವೆ ಶಶಿಕಲಾ ಜೊಲ್ಲೆ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಾನಾ ಪದಾತಿ ದಳಗಳನ್ನು ವೀಕ್ಷಿಸಿದರು. ಅಲ್ಲದೇ, ಗೌರವ ವಂದನೆ ಸ್ವೀಕರಿಸಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಸಚಿವ ಶಶಿಕಲಾ ಜೊಲ್ಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೈಲೇಶ್ವರ ಗ್ರಾಮದ ಬ್ರೀಲಿಯಂಟ್ […]

ಬಸವ ನಾಡಿನಲ್ಲಿದೆ ಸ್ವಾತಂತ್ರ್ಯ ಸಂಗ್ರಾಮದ ಕುರುಹು- ದೇಶಕ್ಕಾಗಿ ಹುತಾತ್ಮರಾದ ದೇಶಮುಖ ಕುಟುಂಬದ ಇತಿಹಾಸ ಹೇಳುತ್ತಿರುವ ಈ ಕೋಟೆ ಎಲ್ಲಿದೆ ಗೊತ್ತಾ?

ವಿಜಯಪುರ: ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈ ಸ್ಧಳ ಶಸ್ತ್ರಾಸ್ತ್ರಗಳ ಸಂಗ್ರಹಗಾರವಾಗಿತ್ತು. ಆದಿಲ್ ಶಾಹಿಗಳ ಕಾಲದಿಂದಲೂ ಸೇನಾ ಕೇಂದ್ರವಾಗಿದ್ದ ಈ ಗ್ರಾಮದ ಮುಖಂಡರು ತಮ್ಮ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ ಎಂದು ತಿಳಿದಿದ್ದೇ ತಡ. ಬ್ರಿಟೀಷರು ದಾಳಿ ನಡೆಸಿ ಅವರನ್ನು ಗಲ್ಲಿಗೇರಿಸುವ ಮೂಲಕ ಸೇಡು ತೀರಿಸಿಕೊಂಡರು. ಅಲ್ಲದೇ, ಅವರ ಸಾಕ್ಷ್ಯಗಳನ್ನೂ ನಾಶ ಮಾಡಿದರು. ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಉತ್ತರ ಕರ್ನಾಟಕದಲ್ಲಿ ಹುತಾತ್ಮರಾದ ಮೊದಲಿಗರಲ್ಲಿ ಈ ಕುಟುಂಬದವರೂ ಸೇರಿರುವುದು ವಿಶೇಷ. ಐತಿಹಾಸಿಕ ಸ್ಮಾರಕಗಳಿಗೆ ಹೆಸರಾಗಿರುವ ಈ ಜಿಲ್ಲೆ ಇತಿಹಾಸದಲ್ಲಿಯೂ ನಾನಾ […]

ಬೆಂಗಳೂರಿನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ

ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು.   ಬಳಿಕ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಾನಾ ಪದಾತಿ ದಳಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಸರಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.