ಬೆಂಗಳೂರು: ರಾಜ್ಯ ಸರಕಾರದ ವತಿಯಿಂದ ಇದೇ ಮೊದಲ ಬಾರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 224 ನೇ ಜಯಂತಿ ಉತ್ಸವ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ರೈಲು ನಿಲ್ದಾಣದ ಬಳಿ ಇರುವ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಜನ್ಮದಿನ ಮತ್ತು ಹುತಾತ್ಮ ದಿನಗಳಂದು ಬೆಂಗಳೂರು ಮತ್ತು ಇತರ ಜಿಲ್ಲಾ ಕೇಂದ್ರಗಳಲ್ಲಿ ಸರಕಾರಿ ಕಾರ್ಯಕ್ರಮ ಆಯೋಜನೆಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಾಗಿನೆಲೆ ಕನಕ ಗುರು ಪೀಠದ ಜಗದ್ಗುರು ಶ್ರೀ ನಿರಂಜನಾನಂದ ಸ್ವಾಮೀಜಿ ಸನ್ಮಾನಿಸಿದರು. ಅಲ್ಲದೇ, ಕಂಬಳಿ ಹೊದಿಸಿ, ಬೆಳ್ಳಿ ಗದೆ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ, ಎಂ. ಟಿ. ಬಿ. ನಾಗರಾಜ, ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ, ಮಾಜಿ ಸಚಿವ ಎಚ್. ಎಂ. ರೇವಣ್ಣ ಮತ್ತು ಇತರರು ಉಪಸ್ಥಿತರಿದ್ದರು.