ವಿಜಯಪುರ: ಬಸವ ನಾಡು ವಿಜಯಪುರದಲ್ಲಿ 75ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು.
ತೊರವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿರುವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಜರಾಯಿ, ಹಜ್ ಮತ್ತು ವಕ್ಫ ಸಚಿವೆ ಶಶಿಕಲಾ ಜೊಲ್ಲೆ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಾನಾ ಪದಾತಿ ದಳಗಳನ್ನು ವೀಕ್ಷಿಸಿದರು. ಅಲ್ಲದೇ, ಗೌರವ ವಂದನೆ ಸ್ವೀಕರಿಸಿದರು.
ಬಳಿಕ ನಡೆದ ಕಾರ್ಯಕ್ರಮದಲ್ಲಿ ಸಚಿವ ಶಶಿಕಲಾ ಜೊಲ್ಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೈಲೇಶ್ವರ ಗ್ರಾಮದ ಬ್ರೀಲಿಯಂಟ್ ಸ್ಕೂಲ್ ನ ನಾಲ್ಕು ಜನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಾದ ಆಕರ್ಶ ಸಂಜಯ ಹಣಮಂತ್ರಾಯ ಕರೆಕಲ್ಲ, ಸಿಂಚನಾ ರುದ್ರಯ್ಯ ದಮ್ಮೂರಮಠ, ಗುರುರಾಜ ಬಿರಾದಾರ, ನಯಿಮ್ ಜುಮನಾಳ, ಬಸವನ ಬಾಗೇವಾಡಿ ಪಟ್ಟಣದ ಅಕ್ಕನಾಗಪ್ಪ ಬಾಲಕಿಯರ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕೀರ್ತನಾ ಉಕ್ಕಲಿ, ದೇವರ ಹಿಪ್ಪರಗಿಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಪ್ರೌಢಶಾಲೆಯ ವಿದ್ಯಾರ್ಥಿ ವಿಕಾಸ ಕುಲಕರ್ಣಿ ಹಾಗೂ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮತ್ತು ಸೇವೆ ಮಾಡಿದ ಅಡಿವೆಪ್ಪ ಸಾಲಗಲ, ಶಕೀಲ ಸುತಾರ, ಇಕ್ಬಾಲ ದಫೇದಾರ, ಇದ್ರುಷ ಬಕ್ಷಿ ಸೇರಿದಂತೆ ನಾನಾ ಸಾಧಕರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ, ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಎಸ್ಪಿ ಎಚ್. ಡಿ. ಆನಂದ ಕುಮಾರ, ಜಿ. ಪಂ. ಸಿಇಓ ಗೋವಿಂದರೆಡ್ಡಿ, ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.