ಪಂಚಮಿ ಹಬ್ಬಕ್ಕೆ ಮೆರಗು ತಂದ ರೈತ, ಜೋಡೆತ್ತುಗಳ ಸಾಧನೆ- ಯಂಬತ್ನಾಳ ರೈತನಿಂದ ಸ್ವಾತಂತ್ರ್ಯ ದಿನದಂದು ಸಾಧನೆ
ವಿಜಯಪುರ: ಪಂಚಮಿ ಬಂತೆಂದರೆ ಸಾಕು ಉತ್ತರ ಕರ್ನಾಟಕ ಅದರಲ್ಲೂ ಬಸವ ನಾಡು ವಿಜಯಪುರ ಜಿಲ್ಲೆಯ ಅನ್ನದಾತರಿಗೆ ತಮ್ಮ ಹಾಗೂ ತಮ್ಮ ಜೀವನದ ಅವಿಭಾಜ್ಯ ಅಂಗದಂತಿರುವ ಎತ್ತುಗಳ ಸಾಧನೆ ಮಾಡಲು ಸಕಾಲ ಎಂಬುದು ಬಲವಾದ ನಂಬಿಕೆ. ಈ ಸಮಯದಲ್ಲಿ ಎತ್ತುಗಳ ಮೂಲಕ ಗ್ರಾಮೀಣ ಭಾಗದಲ್ಲಿ ರೈತರು ತರಹೇವಾರು ಸಾಧನೆ ಮಾಡುವ ಮೂಲಕ ತಮ್ಮ ಹಾಗೂ ತಮ್ಮ ಸಾಕು ಪ್ರಾಣಿಗಳ ಸಾಮರ್ಥ್ಯ ಪ್ರದರ್ಶನಕ್ಕೆ ಮುಂದಾಗುತ್ತಾರೆ. ದಿನವಿಡೀ ಶ್ರಮ ಪಡುವ ಮೂಲಕ ಸಾಧನೆಗೈಯ್ತುತಾರೆ. ಇಂಥದ್ದೆ ಒಂದುು ಕಾಧನೆ ವಿಜಯಪುರ ಜಿಲ್ಲೆಯ […]
ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಬೆಂಗಳೂರು: ಭಾರತದ ಉಪರಾಷ್ಟ್ರತಿ ಎಂ. ವೆಂಕಯ್ಯನಾಯ್ಡು ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ , ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ್, ಬಿಜೆಪಿ ಸಂಸದ ಪಿ. ಸಿ. ಮೋಹನ ಉಪಸ್ಥಿತರಿದ್ದರು.
ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ನೇತಾಜಿ ಸುಭಾಷಚಂದ್ರ ಬೋಸ ಬೊಮ್ಮಗ
ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷಚಂದ್ರ ಬೋಸ ಅವರ ಮೊಮ್ಮಗ ಚಂದ್ರಕುಮಾರ ಬೋಸ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಚಂದ್ರಕುಮಾರ ಬೋಸ ಕುಟುಂಬದ ಸದಸ್ಯರೂ ಉಪಸ್ಥಿತರಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸುಭಾಷಚಂದ್ರ ಬೋಸ ಅವರು ನಡೆಸಿದ ಹೋರಾಟ, ತ್ಯಾಗ, ಸಂಘರ್ಷವನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೆಲುಕು ಹಾಕಿದರು.
ವಿಜಯಪುರದಲ್ಲಿ ಸಂಚಾರಿ ವ್ಯವಸ್ಥೆ ಸುಧಾರಣೆ ಕಾಮಗಾರಿಗೆ ಸಚಿವೆ ಜೊಲ್ಲೆ ಚಾಲನೆ- ತಮ್ಮ ಪ್ರಯತ್ನದ ಫಲವಾಗಿ ಯೋಜನೆಯ ಜಾರಿ- ಶಾಸಕ ಯತ್ನಾಳ
ವಿಜಯಪುರ: ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ರಾಜ್ಯದ ನಾನಾ ಜಿಲ್ಲೆಗಳ ಮಹಾನಗರ ಪಾಲಿಕೆಗಳಿಗೆ ತಲಾ ರೂ. 125 ಕೋ. ದೊರಕಿಸಲು ಶ್ರಮಿಸಿರುವುದಾಗಿ ವಿಜಯಪುರ ನಗರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಪಾಟೀಲ ಯತ್ನಾಳ ತಿಳಿಸಿದ್ದಾರೆ. ವಿಜಯಪುರ ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು ರೂ. 5.25 ಕೋ. ವೆಚ್ಚದಲ್ಲಿ ಸಂಚಾರಿ ವ್ಯವಸ್ಥೆ ಸುಧಾರಣೆಗೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗಾಂಧಿ ವೃತ್ತದಲ್ಲಿನ ಗಾಂಧಿ ಪೊಲೀಸ್ ಠಾಣೆ ಆವರಣದಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮತ್ತು ಪೊಲೀಸ್ […]
ಗುಣಮಟ್ಟದ ಬೀಜ ಉತ್ಪಾದನೆ, ಸಾವಯವ ಕೃಷಿಗೆ ಹೆಚ್ಚಿನ ಒತ್ತು- ವಿಜುಗೌಡ ಪಾಟೀಲ
ಬೆಂಗಳೂರು: ಗುಣಮಟ್ಟದ ಬೀಜ ಉತ್ಪಾದನೆ ಮತ್ತು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಎಸ್ ಪಾಟೀಲ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಹೆಬ್ಬಾಳದಲ್ಲಿರುವ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಕೇಂದ್ರ ಕಛೇರಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದ ಅವರು, ದೇಶ ಕಾಯುವ ಸೈನಿಕರು ಮತ್ತು ನೇಗಿಲಯೋಗಿ ರೈತರ ಕೊಡುಗೆ […]
ಸ್ವಾತಂತ್ರ್ಯ ದಿನಾಚರಣೆ ದಿನವೇ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಣೆ ಹೆಮ್ಮೆಯ ವಿಷಯ- ಸಚಿವೆ ಶಶಿಕಲಾ ಜೊಲ್ಲೆ
ವಿಜಯಪುರ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನವನ್ನು ವಿಜಯಪುರದಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಜರಾಯಿ, ಹಜ್ ಮತ್ತು ವಕ್ಫ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು. ಸಂಗೋಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾತನಾಡಿದ ಅವರು, ಕಿತ್ತೂರು ರಾಣಿ ಚೆನ್ನಮ್ಮಳ ಬಲಗೈ ಭಂಟನಾಗಿದ್ದ ಸಂಗೊಳ್ಳಿ ರಾಯಣ್ಣ ಧೀಮಂತ ನಾಯಕ. ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯಕ್ಕಾಗಿ […]