ಗುಣಮಟ್ಟದ ಬೀಜ ಉತ್ಪಾದನೆ, ಸಾವಯವ ಕೃಷಿಗೆ ಹೆಚ್ಚಿನ ಒತ್ತು- ವಿಜುಗೌಡ ಪಾಟೀಲ

ಬೆಂಗಳೂರು: ಗುಣಮಟ್ಟದ ಬೀಜ ಉತ್ಪಾದನೆ ಮತ್ತು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಎಸ್ ಪಾಟೀಲ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಹೆಬ್ಬಾಳದಲ್ಲಿರುವ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಕೇಂದ್ರ ಕಛೇರಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದ ಅವರು, ದೇಶ ಕಾಯುವ ಸೈನಿಕರು ಮತ್ತು ನೇಗಿಲಯೋಗಿ ರೈತರ ಕೊಡುಗೆ ದೇಶ ನಿರ್ಮಾಣದಲ್ಲಿ ಪ್ರಮುಖವಾಗಿದೆ ಎಂದು ತಿಳಿಸಿದರು.

ಧ್ವಜಾರೋಹಣ ನೆರವೇರಿಸಿದ ವಿಜುಗೌಡ ಪಾಟೀಲ.

ಸಂಸ್ಥೆಯಿಂದ ರೈತರಿಗೆ ಸಕಾಲದಲ್ಲಿ ಉತ್ತಮ ಗುಣಮಟ್ಟದ ಬೀಜ ದೊರೆಯುವಂತೆ ಮಾಡಲಾಗುವುದು. ಸಾವಯವ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಅವರು ಕರೆ ನೀಡಿದರು.

ದೇಶದಲ್ಲಿಯೇ ಪ್ರಥಮವಾಗಿ ಸ್ಥಾಪನೆಯಾದ ಈ ಸಂಸ್ಥೆಯು ಉತ್ತಮ ಗುಣಮಟ್ಟದ ಪ್ರಮಾಣೀಕರಣ ಕಾರ್ಯ ಕೈಗೊಳ್ಳಲು ಯಶಸ್ವಿಯಾಗಿದೆ ಎಂದು ಅವರು ತಿಳಿಸಿದರು.

ಸ್ವಾತಂತ್ರ ದಿನಾಚರಣೆ ಭಾಷಣ ಮಾಡಿದ ವಿಜುಗೌಡ ಪಾಟೀಲ.

ಇದೇ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಕರುಣಾಕರ ಶೆಟ್ಟಿ. ಜಂಟಿ ನಿರ್ದೇಶಕ ಲಕ್ಷ್ಮಣ ಎಸ್. ಕಳೊನ್ನವರ ಮತ್ತು ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌