ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ನೇತಾಜಿ ಸುಭಾಷಚಂದ್ರ ಬೋಸ ಬೊಮ್ಮಗ

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷಚಂದ್ರ ಬೋಸ ಅವರ ಮೊಮ್ಮಗ ಚಂದ್ರಕುಮಾರ ಬೋಸ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಚಂದ್ರಕುಮಾರ ಬೋಸ ಕುಟುಂಬದ ಸದಸ್ಯರೂ ಉಪಸ್ಥಿತರಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸುಭಾಷಚಂದ್ರ ಬೋಸ ಅವರು ನಡೆಸಿದ ಹೋರಾಟ, ತ್ಯಾಗ, ಸಂಘರ್ಷವನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೆಲುಕು ಹಾಕಿದರು.

Leave a Reply

ಹೊಸ ಪೋಸ್ಟ್‌