ಸ್ವಾತಂತ್ರ್ಯ ದಿನಾಚರಣೆ ದಿನವೇ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಣೆ ಹೆಮ್ಮೆಯ ವಿಷಯ- ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನವನ್ನು ವಿಜಯಪುರದಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಜರಾಯಿ, ಹಜ್ ಮತ್ತು ವಕ್ಫ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.

ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆಗೆ ಚಾಲನೆ ನೀಡಿದ ಸಚಿವೆ ಜೊಲ್ಲೆ.

ಸಂಗೋಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾತನಾಡಿದ ಅವರು, ಕಿತ್ತೂರು ರಾಣಿ ಚೆನ್ನಮ್ಮಳ ಬಲಗೈ ಭಂಟನಾಗಿದ್ದ ಸಂಗೊಳ್ಳಿ ರಾಯಣ್ಣ ಧೀಮಂತ ನಾಯಕ. ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಕ್ರಾಂತಿವೀರ. ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಹೆಸರಾಗಿದ್ದ ಸಂಗೊಳ್ಳಿ ರಾಯಣ್ಣರ ಜನ್ಮದಿನವನ್ನು ಸ್ವಾತಂತ್ರ್ಯ ದಿನದಂದೇ ಆಚರಿಸುವುದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.

ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆಯಲ್ಲಿ ಪಾಲ್ಗೋಂಡ ಸಚಿವೆ ಜೊಲ್ಲೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಎಸ್ಪಿ ಎಚ್. ಡಿ. ಆನಂದ ಕುಮಾರ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಹುಲಜಂತಿ ಮಹಾಳಿಂಗರಾಯ ಮಠದ ವಿಜೇಂದ್ರ ಮಹಾಳಿಂಗರಾಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈರಣ್ಣಾ ಆಶಾಪುರೆ, ಜಿ. ಪಂ. ಮಾಜಿ ಅಧ್ಯಕ್ಷೆ ಸುಜಾತಾ ಸೋಮನಾಥ ಕಳ್ಳಿಮನಿ, ಮುಖಂಡರಾದ ರಾಜು ಕಂಬಾಗಿ, ಭೀಮರಾವ ಜಿಗಜಿಣಗಿ, ಸೋಮನಗೌಡ ಕಲ್ಲೂರ, ದೇವೇಂದ್ರ ಮಿರೇಕರ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌