ಬಿ ಎಸ್ ವೈ ಕೆಳಗಿಳಿಸಲು ಕೆಟ್ಟ ಜಾತಿ ವ್ಯವಸ್ಥೆ ಕಾರಣ- ಸ್ವಾಮೀಜಿಗಳ ಒಗ್ಗಟ್ಟು ಬಿಜೆಪಿ ಹೈಕಮಾಂಡ್ ನಿರ್ಣಯ ಬದಲಿಸಿತು- ದಿಂಗಾಲೇಶ್ವರ ಶ್ರೀ

ವಿಜಯಪುರ: ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಯಲು ಕೆಟ್ಟ ಜಾತಿ ವ್ಯವಸ್ಥೆ ಕಾರಣವಾಗಿದೆ. ಆ ವ್ಯವಸ್ಥೆಯ ವಿರುದ್ಧ ಸ್ವಾಮೀಜಿಗಳು ಒಂದಾಗಿ ಒಗ್ಗಟ್ಟು ಪ್ರದರ್ಶಿಸಿದ ಪರಿಣಾಮ ಬಿಜೆಪಿ ಹೈಕಮಾಂಡ ತನ್ನ ನಿರ್ಣಯ ಬದಲಿಸಿತು. ಈ ಬಗ್ಗೆ ಹೆಮ್ಮೆಯಿದೆ ಎಂದು ಬಾಳೆಹೊಸೂರು ಶ್ರೀ ದಿಂಗಾಲೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಕುಂಟೋಜಿ ಸಂಸ್ಥಾನ ಹಿರೇಮಠದಲ್ಲಿ ಮಠದ ಮುಖ್ಯಸ್ಥ ಶ್ರೀ ಚನ್ನವೀರ ದೇವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕೊರೊನಾ ಆಪದ್ಭಾಂಧವರಿಗೆ […]

ಶನಿವಾರ ಸಿಎಂ ಬಸವರಾಜ ಬೊಮ್ಮಾಯಿ ಬಸವ ನಾಡು ಪ್ರವಾಸ- ಆಲಮಟ್ಟಿ ಜಲಾಷಯಕ್ಕೆ ಬಾಗೀನ ಅರ್ಪಣೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಆ. 21ರಂದು ಬಸವ ನಾಡು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆ. 21 ರಂದು ಬೆ. 11ಕ್ಕೆ ಹೆಲಿಕಾಪ್ಟರ್ ಮೂಲಕ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಲಿದ್ದಾರೆ. ಬಳಿಕ ಭರ್ತಿಯಯಾಗಿರುವ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರಕ್ಕೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಲಿದ್ದಾರೆ. ನಂತರ ಜನಪ್ರತಿನಿಧಿಗಳೊಂದಿಗೆ ಭೇಟಿ ನಡೆಸಲಿದ್ದಾರೆ. ಮ. 1ಕ್ಕೆ ಆಲಮಟ್ಟಿಯಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ತೆರಳಿದ್ದಾರೆ.

ಒಂದೇ ನಂಬರ್ ಬಳಸಿ ತೆರಿಗೆ ವಂಚನೆ- ನಾಲ್ಕು ಬಸ್ ವಶ

ಕೋಲಾರ: ಒಂದೇ ನಂಬರ್ ಬಳಸಿ ಕಾರ್ಯಾಚರಣೆ ನಡೆಸುತ್ತಿದ್ದ ನಾಲ್ಕು ಬಸ್ಸುಗಳನ್ನು ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮುಳಬಾಗಿಲು ಮತ್ತು ಬೇತಮಂಗಲದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಸಾರಿಗೆ ಇಲಾಖೆ ಅಧಿಕಾರಿಗಳಿ ಒಂದೇ ನಂಬರ್‌ ಬಳಸಿಕೊಂಡು ತೆರಿಗೆ ವಂಚಿಸಿ ಸಂಚರಿಸುತ್ತಿದ್ದ ನಾಲ್ಕು ಬಸ್‌ ಗಳನ್ನು ವಶಪಡಿಸಿಕೊಂಡಿದ್ದಾರೆ. ಆರ್ ಟಿ ಓ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್, ಜಂಟಿ ಆಯುಕ್ತೆ ಓಂಕಾರೇಶ್ವರಿ ನೇತೃತ್ವದಲ್ಲಿ ಕೋಲಾರ ಪ್ರಾದೇಶಿಕ ಸಾರಿಗೆ ಕಚೇರಿಯ ಮೋಟಾರು ವಾಹನ ನಿರೀಕ್ಷಕರಾದ ತಿಪ್ಪೇಸ್ವಾಮಿ ಸಿ, ಸುರೇಶ ಜಿ. ಎನ್‌, […]

ಹೆಬ್ಬಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಕಾರ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

ಬೆಂಗಳೂರು: ಹೆಬ್ಬಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮುಖಂಡರ ನಿಯೋಗ ತಮ್ಮನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಅವರು ಸಿಎಂ‌ ಮಾತನಾಡಿದರು. ರಾಜ್ಯದ ಪ್ರಗತಿಗೆ ಇನ್ನಷ್ಟು ವೇಗ ತರುವ ನಿಟ್ಟಿನಲ್ಲಿ ಸರಕಾರದ ನಾನಾ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಕೈಗೊಳ್ಳುತ್ತಿದ್ದೇನೆ. ಉತ್ತಮ ಮೂಲಭೂತ ಸೌಕರ್ಯಗಳು ಆರ್ಥಿಕ ಚಟುವಟಿಕೆಗೆ ಇಂಬು ನೀಡುತ್ತವೆ. ಬಡವರ ಆರ್ಥಿಕ ಸಾಮಾಜಿಕ ಸ್ಥಿತಿ ಸುಧಾರಣೆಯಾಗಬೇಕಿದೆ. […]

ವಿಜಯಪುರ ನಗರದ 45 ಉದ್ಯಾನವನಗಳಲ್ಲಿ ಚೈನ್ ಲಿಂಕ್ ಮೇಶ್ ಆಂಡ್ ವಾಕಿಂಗ್ ಟ್ರ್ಯಾಕ್ ಅಭಿವೃದ್ಧಿ- ಶಾಸಕ ಯತ್ನಾಳ ಹೇಳಿಕೆ

ವಿಜಯಪುರ: ವಿಜಯಪುರ ನಗರದಲ್ಲಿ ಆಯ್ದ 45 ಸ್ಥಳಗಳಲ್ಲಿನ ಬಡಾವಣೆಯ ಉದ್ಯಾನವನಗಳಲ್ಲಿ ಚೈನ್ ಲಿಂಕ್ ಮೇಶ್ ಆಂಡ್ ವಾಕಿಂಗ್ ಟ್ರ್ಯಾಕ್ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ. ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಸಭಾಂಗಣದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಆಯ್ದ 45 ನಾನಾ ಬಡಾವಣೆಗಳ ಉದ್ಯಾನವನದಲ್ಲಿ ಚೈನ್ ಲಿಂಕ್ ಮೇಶ್ ಆಂಡ್ ವಾಕಿಂಗ್ ಟ್ರ್ಯಾಕ್ (Chain link Mesh and Walking Trak ) ಅಭಿವೃದ್ಧಿ […]

ಪೆಟ್ರೋಲ್ ಮೇಲಿನ ಸೆಸ್ ಕಡಿತ ಮಾಡುವ ಯೋಚನೆ ಇಲ್ಲ- ಸಿಎಂ‌ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ಸೆಸ್ ದರವನ್ನು ಕಡಿತಗೊಳಿಸುವ ಯೋಚನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ‌ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಪೆಟ್ರೋಲ್ ಮೇಲಿನ ಸೆಸ್ ನ್ನೂ ರೂ. 3 ಕಡಿತ ಮಾಡಲಾಗಿದೆ. ರಾಜ್ಯದಲ್ಲಿ ಸರಕಾರ ಈ ರೀತಿ ಕಡಿತ ಮಾಡಲಿದೆಯಾ ಎಂಬ ಪ್ರಶ್ನೆಗೆ, ಆ ರೀತಿ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇಂದು ನಾಲ್ಕು ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುತ್ತಿದ್ದೇನೆ. ನಾಳೆ ಮತ್ತೆ ಮೂರು […]