ಬೆಂಗಳೂರು: ಹೆಬ್ಬಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮುಖಂಡರ ನಿಯೋಗ ತಮ್ಮನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಅವರು ಸಿಎಂ ಮಾತನಾಡಿದರು.
ರಾಜ್ಯದ ಪ್ರಗತಿಗೆ ಇನ್ನಷ್ಟು ವೇಗ ತರುವ ನಿಟ್ಟಿನಲ್ಲಿ
ಸರಕಾರದ ನಾನಾ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಕೈಗೊಳ್ಳುತ್ತಿದ್ದೇನೆ. ಉತ್ತಮ ಮೂಲಭೂತ ಸೌಕರ್ಯಗಳು ಆರ್ಥಿಕ ಚಟುವಟಿಕೆಗೆ ಇಂಬು ನೀಡುತ್ತವೆ. ಬಡವರ ಆರ್ಥಿಕ ಸಾಮಾಜಿಕ ಸ್ಥಿತಿ ಸುಧಾರಣೆಯಾಗಬೇಕಿದೆ. ಈ ನಿಟ್ಟಿನಲ್ಲಿ ನಾನು ಕೆಲಸ ಪ್ರಾರಂಭಿಸಿದ್ದೇನೆ ಎಂದು ತಿಳಿಸಿದರು.
ಸ್ವಾತಂತ್ರೋತ್ಸವ ದಿನಾಚರಣೆಯಂದು ಮಾಡಿದ ಘೋಷಣೆಗಳ ಅನುಷ್ಠಾನಕ್ಕೆ ಮುಖ್ಯ ಕಾರ್ಯದರ್ಶಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಕೆಲವೇ ದಿನಗಳಲ್ಲಿ ಸರಕಾರ ಮಾಡುತ್ತಿರುವ ಕೆಲಸ ಜನರನ್ನು ತಲುಪುವ ರೀತಿಯಲ್ಲಿ ಅಧಿಕಾರಿ ವರ್ಗ ಕೆಲಸ ಮಾಡಬೇಕು ಎಂದು ಈಗಾಗಲೇ ಆದೇಶ ಕೊಟ್ಟಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ವೈ. ಎ. ನಾರಾಯಣಸ್ವಾಮಿ, ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮುಂತಾದವರು ಉಪಸ್ಥಿತರಿದ್ದರು.