ಸಿಎಂ‌ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಯೂನಿಯನ್ ಬ್ಯಾಂಕ್ ಎಪ್ ಜಿ ಎಂ‌ ಚಂದ್ರಮೋಹನ ರೆಡ್ಡಿ

ಬೆಂಗಳೂರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಫೀಲ್ಡ್ ಜನರಲ್ ಮ್ಯಾನೇಜರ್ ಚಂದ್ರಮೋಹನ ರೆಡ್ಡಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದರು. ಬೆಂಗಳೂರಿನಲ್ಲಿ ಸಿಎಂ ಭೇಟಿ ಮಾಡಿದ ಅವರು ಸೌಹಾರ್ದಯುತ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಎಜಿಎಂ ಶ್ರೀಕಾಂತ ಕುಮಾರ ಮತ್ತು ಇತರರು ಉಪಸ್ಥಿತರಿದ್ದರು.

ಅಧಿಕಾರಿಗಳ ಉತ್ಸಾಹ, ಜನಪ್ರತಿನಿಧಿಗಳ ಸಹಕಾರ- ಗುಮ್ಮಟ ನಗರಿಯಲ್ಲಿರದ ಆ ಒಂದು ವ್ಯವಸ್ಥೆ ಲಿಂಬೆ ನಾಡಿಗೆ ಬಂತು

ವಿಜಯಪುರ: ಅಧಿಕಾರಿಗಳ ಉತ್ಸಾಹ, ಜನಪ್ರತಿನಿಧಿಗಳ ಸಹಕಾರವಿದ್ದರೆ ಜನರಿಗೆ ಹೇಗೆ ಉಪಕಾರವಾಗುತ್ತದೆ ಎಂಬುದಕ್ಕೆ ಸಾಕ್ಷಿಯಾಗಿದೆ ಈ ವ್ಯವಸ್ಥೆ. ಇದು ಹಿಂದುಳಿದ ಜಿಲ್ಲೆಯ ಹಿಂದುಳಿದ ತಾಲೂಕು ಕೇಂದ್ರದಲ್ಲಿ ಜಾರಿಗೆ ತರಲಾಗಿರುವ ಮುಂದುವರೆದ ತಂತ್ರಜ್ಞಾನದ ಸದ್ಬಳಕೆಗೆ ತಾಜಾ ಉದಾಹರಣೆ ಎಂಬಂತಿದೆ. ಅಷ್ಟಕ್ಕೂ ಆಗಿದ್ದೇನೆಂದರೆ, ಬಸವ ನಾಡು ವಿಜಯಪುರ ಜಿಲ್ಲೆಯ ಲಿಂಬೆ ನಾಡು ಇಂಡಿ ಪುರಸಭೆಯಲ್ಲಿ ಈಗ ಜನರಿಗೋಸ್ಕರ ಅನುಕೂಲವಾಗುವ ವ್ಯವಸ್ಥೆಯೊಂದನ್ನು ಜಾರಿಗೆ ತರಲಾಗಿದೆ. ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ತಮ್ಮ ತಾಲೂಕು ಜಿಲ್ಲಾ ಕೇಂದ್ರವಾಗುವ ನಿಟ್ಟಿನಲ್ಲಿ ಆಗಬೇಕಾಗಿರುವ ಕೆಲಸಗಳ ಕಡೆ […]

ಎಂ. ಆರ್. ಜಯರಾಮ ಅವರಿಗೆ ಸರ್ ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ ಪ್ರಧಾನ ಮಾಡಿದ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು

ಬೆಂಗಳೂರು: ಎಂ. ಎಸ್. ರಾಮಯ್ಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ. ಆರ್. ಜಯರಾಮ ಅವರಿಗೆ ಸರ್. ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಪ್ರಶಸ್ತಿಯನ್ನು ಎಫ್ ಕೆ ಸಿ ಸಿ ಐ ವತಿಯಿಂದ ನೀಡಲಾಲಾಗುತ್ತಿದೆ.   ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಸಂಸದ ಪಿ. ಸಿ. ಮೋಹನ […]

ಎಂಬಿಎ ಓದಲು, ಉದ್ಯೋಗ ಗಿಟ್ಟಿಸಲು ವರದಾನವಾಗಿದೆ ಈ ಕಾಲೇಜು- ಕಳೆದ ವರ್ಷ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

ಡಾ.ವೀರೇಂದ್ರಕುಮಾರ ಎಂ.ನರಸಲಗಿ, ಎಂಬಿಎ ವಿಭಾಗದ ಮುಖ್ಯಸ್ಥರು. ವಿಜಯಪುರ: ಎಂಬಿಎ ವಿದ್ಯಾರ್ಥಿಗಳಿಗೆ ವೃತ್ತಿ ಪರ ಕೌಶಲ್ಯ ಶಿಕ್ಷಣ ನೀಡುವ ಮೂಲಕ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಇಂಜನಿಯರಿಂಗ್ ಕಾಲೇಜಿನ ಎಂ.ಬಿ.ಎ ವಿಭಾಗ ಗಮನ ಸೆಳೆಯುತ್ತಿದೆ. ಅಮೇರಿಕಾದಲ್ಲಿ 19ನೇ ಶತಮಾನದ ಕೊನೆಯ ಭಾಗದಲ್ಲಿ ಕೈಗಾರಿಕರಣದಿಂದಾಗಿ ಕಂಪನಿಗಳು ಆಡಳಿತ ನಿರ್ವಹಣೆಯಲ್ಲಿ ವೈಜ್ಞಾನಿಕ ಕ್ರಮಗಳನ್ನು ಅಳವಡಿಸಿಕೊಂಡವು ಇದರ ಪರಿಣಾಮ ಮಾಸ್ಟರ್ ಆಫ್ ಬ್ಯುಸಿನೆಸ್ ಎಡ್ಮಿನಿಸ್ಟ್ರೇಷನ್ (ಎಂ.ಬಿ.ಎ) ವೃತ್ತಿಪರ ಪದವಿ ಪ್ರಾರಂಭವಾಯಿತು. ಇತ್ತೀಚಿನ ದಿನಗಳಲ್ಲಿ ಬಹು ಬೇಡಿಕೆಯಲ್ಲಿರುವ ಸ್ನಾತಕೋತ್ತರ ಪದವಿ ಇದಾಗಿದ್ದು, […]

ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಭಾರತದಲ್ಲಿನ ವಿಯೆಟ್ನಾಂ ರಾಯಭಾರಿ ಫಾಮ್ ಸನ್ ಚಾವ್

ಬೆಂಗಳೂರು: ಭಾರತದಲ್ಲಿನ ವಿಯೆಟ್ನಾಂ ರಾಯಭಾರಿ ಫಾಮ್ ಸನ್ ಚಾವ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.   ಬೆಂಗಳೂರಿನಲ್ಲಿ ತಮ್ಮ ಅಧಿಕಾರಿಗಳೊಂದಿಗೆ ಸಿಎಂ ರನ್ನು ಸೌಹಾರ್ದಯುತವಾಗಿ ಭೇಟಿಯಾದ ಅವರು, ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ, ಕೈಗಾರಿಕೆ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ. ವಿ. ರಮಣರೆಡ್ಡಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್-19 ಮಾರ್ಗಸೂಚಿಗಳ ಅನ್ವಯ ಪಿಯುಸಿ ಬಾಹ್ಯ ಪರೀಕ್ಷೆ ನಡೆಸಲು ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಸೂಚನೆ

ವಿಜಯಪುರ: ಆ. 19 ರಿಂದ ಸೆ. 3ರ ವರೆಗೆ ವಿಜಯಪುರ ಜಿಲ್ಲೆಯಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಬಾಹ್ಯ ವಾರ್ಷಿಕ ಪರೀಕ್ಷೆಗಳನ್ನು ಕೋವಿಡ್-19 ಮಾರ್ಗಸೂಚಿಗಳ ಅನ್ವಯ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಬಾಹ್ಯ ಮತ್ತು ರೆಗ್ಯೂಲರ್ ವಾರ್ಷಿಕ ಪರೀಕ್ಷೆಯ ಪೂರ್ವಭಾವಿ ಸಿದ್ದತಾ ಸಭೆ ನಡೆಸಿದ ಅವರು, ಕೋವಿಡ್- 19 ಮಾರ್ಗಸೂಚಿಯ ಅನ್ವಯ ಪರೀಕ್ಷೆಗಳನ್ನು ನಡೆಸಲು ಸಿದ್ದತೆ ಮಾಡಿಕೊಳ್ಳಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು […]

ಇನ್ನು ಮುಂದೆ ಅನಾವಶ್ಯಕವಾಗಿ ಆಯುಧ ಲೈಸನ್ಸ್, ನವೀಕರಣಕ್ಕೆ ಕಡಿವಾಣ- ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಅನಾವಶ್ಯಕವಾಗಿ ಗನ್ ಲೈಸನ್ಸ್ ಅಂದರೆ ಆಯುಧ ಅನುಮತಿ ಮಂಜೂರಾತಿ ಮತ್ತು ನವೀಕರಣ ಕುರಿತು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್ಪಿ, ತಹಸೀಲ್ದಾರರು ಮತ್ತು ಪೊಲೀಸ್ ಇನ್ಸಪೆಕ್ಟರ್ ಗಳೊಂದಿಗೆ ಆಯುಧ ಲೈಸನ್ಸ್ ಮಂಜೂರಿಸುವ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ತೀರಾ ಅನಿವಾರ್ಯ ಪ್ರಕರಣಗಳಲ್ಲಿ ಮಾತ್ರ ಆಯುಧ ಲೈಸನ್ಸ್ ಮಂಜೂರಾತಿ ಮತ್ತು ಲೈಸನ್ಸ್ ನವೀಕರಣ ಮಾಡಲಾಗುವುದು ಎಂದು ತಿಳಿಸಿದರು. […]