ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ

ವಿಜಯಪುರ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ(PMMSY) ಯೋಜನೆಯಡಿ ಮೀನು ಕೃಷಿಕರಿಗಾಗಿ ನೀಡಿದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪಿ. ಸುನಿಲಕುಮಾರ ಸೂಚನೆ ನೀಡಿದ್ದಾರೆ.

ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ-2021-22ನೇ ವಾರ್ಷಿಕ ಕ್ರಿಯಾ ಯೋಜನೆ” ಸಭೆಯಲ್ಲಿ ಮಾತನಾಡಿದ ಅವರು, ಈ ಯೋಜನೆಯಿಂದ ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಮೀನು ಉತ್ಪಾದನೆಯಲ್ಲಿ ಗಣನೀಯವಾಗಿ ಏರಿಕೆ ಕಂಡು ಬರಲಿದೆ ಎಂದು ತಿಳಿಸಿದರು.

ಈ ಯೋಜನೆಯು ಇನ್ನೂ ಮೂರು ವರ್ಷಗಳ ಕಾಲ ಜಾರಿಯಲ್ಲಿ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೀನು ಕೃಷಿಕರು, ಮೀನುಗಾರರು, ಮತ್ಸ್ಯೊದ್ಯಮಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ವಿಜಯಪುರದಲ್ಲಿ ಮೀನುಗಾರಿಕೆ ಸಹಾಯವಾಣಿಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಪಿ. ಸುನೀಲ ಕುಮಾರ ಮೀನುಗಾರಿಕೆ ಸಹಾಯವಾಣಿಗೆ ಚಾಲನೆ ನೀಡಿದರು. ಅಲ್ಲದೇ, ಬಯೋಪ್ಲೋಕ್ ಮೀನು ಕೃಷಿಯಲ್ಲಿ ಆಗಿಂದಾಗ್ಗೆ ಕೇಳುವ ಪ್ರಶ್ನೆಗಳು ಮತ್ತು ಉತ್ತರ ಎಂಬ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು. ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಮಾನದಂಡವನ್ನು ಅನುಸರಿಸಿ ಅರ್ಜಿಗಳನ್ನು ಕರೆಯಲಾಗಿದ್ದು, ಅದರಂತೆ ಅರ್ಜಿಗಳನ್ನು ಸ್ವೀಕರಿಸಲು ಅವರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕರು ಡಾ. ರಾಜಶೇಖರ ವಿಲಿಯಮ್ಸ್, ಮೀನುಗಾರಿಕೆ ಉಪ ನಿರ್ದೆಶಕರಾದ ಶ್ರೀಶೈಲ ಗಂಗನಹಳ್ಳಿ, ಭೂತನಾಳ ಮೀನುಗಾರಿಕೆ ಸಂಶೋಧನೆ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥ ಡಾ. ಎಸ್. ವಿಜಯಕುಮಾರ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು

Leave a Reply

ಹೊಸ ಪೋಸ್ಟ್‌